ಯಾದಗಿರಿ | ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ: ವಿ ಎನ್ ರಾಜಶೇಖರ್

Date:

  • ಯಡಗಿಮದ್ರಾ ಗ್ರಾಮದಲ್ಲಿ ಎಸ್‌ಯುಸಿಐ ಸಾರ್ವಜನಿಕ ಸಭೆ
  • ಎಸ್‌ಯುಸಿಐ ಅಭ್ಯರ್ಥಿ ಕೆ ಸೋಮಶೇಖರ್ ಬೆಂಬಲಕ್ಕೆ ಮನವಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಎಸ್‌ಯುಸಿಐ (ಕಮ್ಯುನಿಸ್ಟ್) ನಿರಂತರ ಹೋರಾಟ ನಡೆಸುತ್ತಿದೆ. ಪ್ರಸ್ತುತ ಚುನಾವಣೆಯಲ್ಲಿ ಯಾದಗಿರಿ ಕ್ಷೇತ್ರದಲ್ಲಿ ಎಸ್‌ಯುಸಿಐನಿಂದ ಕೆ ಸೋಮಶೇಖರ್ ಸ್ಪರ್ಧಿಸುತ್ತಿದ್ದು, ಅವರನ್ನು ಬೆಂಬಲಿಸಬೇಕು ಎಂದು ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

ಯಾದಗಿರಿಯ ಯಡಗಿಮದ್ರಾ ಗ್ರಾಮದಲ್ಲಿ ಪಕ್ಷವು ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸೆಕ್ರಟೇರಿಯೆಟ್ ಸದಸ್ಯ ವಿ.ಎನ್ ರಾಜಶೇಖರ್, “ಇದುವರೆಗೆ ರಾಜ್ಯವನ್ನಾಳಿದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ – ಪಕ್ಷಗಳು ಯಾತ್ರೆಯ ಮೇಲೆ ಯಾತ್ರೆಗಳ ಮೂಲಕ ತಮ್ಮ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಮೂಡಿಸಲು ಹಗಲಿರುಳು ಬೆವರು ಸುರಿಸುತ್ತಿವೆ” ಎಂದು ಲೇವಡಿ ಮಾಡಿದರು.

“ಅಧಿಕಾರದಲ್ಲಿರುವಾಗ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಒಳಜಗಳ, ಜನವಿರೋಧಿ ನೀತಿಗಳನ್ನು ಅನುಸರಿಸಿದ ಪ್ರಮುಖವಾಗಿ ಬಿಜೆಪಿ ಮಾತ್ರವಲ್ಲದೆ ಉಳಿದ ಎರಡು ಪಕ್ಷಗಳ ನಾಯಕರು ಸಹ ಈಗ ಜನರ ಮುಂದೆ ಅಧಿಕಾರಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣೆಯನ್ನೂ ಒಂದು ಹೋರಾಟದ ಕಣವಾಗಿ ಪರಿಗಣಿಸಿರುವ ಎಸ್‌ಯುಸಿಐ(ಸಿ) ಪಕ್ಷವು, ಮಿತಿ ಮೀರಿದ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು, ಕಾರ್ಮಿಕರ ಹಕ್ಕುಗಳ ದಮನ, ದುಬಾರಿ ಶಿಕ್ಷಣ – ಆರೋಗ್ಯ, ನಗರಗಳಲ್ಲಿ ಮೂಲಸೌಕರ್ಯದ ಕೊರತೆ, ತೀವ್ರತರ ಆರ್ಥಿಕ ಅಸಮಾನತೆ ಇಂತಹ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟ ಕಟ್ಟುತ್ತಾ ಬಂದಿದೆ. ಜನರ ಹಿತಕ್ಕಾಗಿ ಚುನಾವಣಾ ಕಣಕ್ಕಿಳಿದಿದೆ” ಎಂದು ತಿಳಿಸಿದರು.

ಯಾದಗಿರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕೆ ಸೋಮಶೇಖರ್ ಅವರು ಮಾರ್ಕ್ಸ್‌ವಾದಿ ಚಿಂತಕ ಶಿವದಾಸ್ ಘೋಷ್ ವಿಚಾರಗಳಿಗೆ ಆಕರ್ಷಿತರಾಗಿ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಜನತೆಯ ಧ್ವನಿಯನ್ನು ವಿಧಾನಸಭೆಯಲ್ಲಿ ಎತ್ತಿ ಹಿಡಿಯುವಂತಹ ನೈಜ ಅಭ್ಯರ್ಥಿಯಾಗಿದ್ದಾರೆ. ಹೋರಾಟಗಳ ಅಗ್ನಿಕುಂಡದಲ್ಲಿ ಹೊರಹೊಮ್ಮಿರುವ ಪಕ್ಷದ ಅಭ್ಯರ್ಥಿಯನ್ನು ಜನ ಗೆಲ್ಲಿಸಬೇಕು” ಎಂದು ಮನವಿ ಮಾಡಿದರು.

ಅಭ್ಯರ್ಥಿ ಕೆ ಸೋಮಶೇಖರ್ ಮಾತನಾಡಿ, “ಸಧ್ಯಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಬಿಜೆಪಿಯ ಶಾಸಕರು, ಸಚಿವರು ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡರೂ ಅವರೆಲ್ಲಾ ಕಾನೂನು ಮೀರಿದವರಾಗಿದ್ದಾರೆ. ತಮ್ಮ ದುಷ್ಕೃತ್ಯಗಳನ್ನು ಮರೆಮಾಚಲು ಬಿಜೆಪಿಯು ಪದೇಪದೆ ಕೋಮುವಾದಿ ವಿಭಜಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸಮಸ್ಯೆಗಳ ಆಗರವಾದ ತಾಯಿ-ಮಕ್ಕಳ ಸರ್ಕಾರಿ ಆಸ್ಪತ್ರೆ; ಪೋಷಕರ ನರಳಾಟ

ಜಿಲ್ಲಾ ಸಮಿತಿಯ ಸದಸ್ಯ ಶರಣಗೌಡ ಗೂಗಲ್ ಮಾತನಾಡಿ, “ಕೋವಿಡ್‌ನಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಜನತೆ ಬೆಲೆ ಏರಿಕೆ, ನಿರುದ್ಯೋಗ, ಹಣದುಬ್ಬರ, ಶಿಕ್ಷಣ, ಆರೋಗ್ಯಗಳ ವ್ಯಾಪಾರೀಕರಣ, ಎಲ್ಲೆ ಮೀರಿದ ಭ್ರಷ್ಟಾಚಾರಗಳಿಂದ ನಲುಗಿ ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಜನರನ್ನು ಡಬಲ್ ಆಗಿ ದೋಚುತ್ತಿದೆ” ಎಂದು ಆರೋಪಿಸಿದರು.

 ಹೋರಾಟದ ರಾಜಕೀಯವನ್ನು ಚುನಾವಣೆಗಳ ಸಂದರ್ಭದಲ್ಲೂ ಜನರ ಬಳಿಗೆ ಒಯ್ಯಲು ಎಸ್.ಯು.ಸಿ.ಐ. ಕಮ್ಯುನಿಸ್ಟ್ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ. ಹಾಗಾಗಿ ದುಡಿಯುವ ಜನತೆ, ರೈತರ, ವಿದ್ಯಾರ್ಥಿ, ಯುವಜನ, ಮಹಿಳೆಯರ ಪರ ಹೋರಾಟದ ದನಿಯನ್ನು ಶಾಸನ ಸಭೆಯಲ್ಲಿ ಎತ್ತಿ ಹಿಡಿಯುವ ಉದ್ದೇಶದಿಂದ ಸ್ಪರ್ಧೆಸುತ್ತಿರುವ ಎಸ್ ಯುಸಿಐ(ಸಿ)ಗೆ ಮತ ನೀಡಿ ಗೆಲ್ಲಿಸಬೇಕೆಂದು ಈ ಮೂಲಕ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಸಂಘಟನಾ ಸಮಿತಿ ಸದಸ್ಯರಾದ ಡಿ ಉಮಾದೇವಿ, ರಾಮಲಿಂಗಪ್ಪ ಬಿ. ಎನ್, ಜಮಾಲ್ ಸಾಬ್ ಹಾಗೂ ಸದಸ್ಯರಾದ ಸಿದ್ದಣ್ಣ ಗೂಗಲ್, ಶಿಲ್ಪಾ ಬಿ ಕೆ,  ಸುಭಾಷ್ ಬಿ ಕೆ ಸೇರಿದಂತೆ ನೂರಾರು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...