ಬೀದರ್‌ | ಕಲ್ಯಾಣಕ್ಕೆ ಅಸ್ಮಿತೆ ತಂದುಕೊಟ್ಟ ವಚನಕಾರರು : ವೀರಶೆಟ್ಟಿ ಗಾರಂಪಳ್ಳಿ

Date:

ವಚನಕಾರರು ಕಲ್ಯಾಣಕ್ಕೆ ಸಾಂಸ್ಕೃತಿಕ ಅಸ್ಮಿತೆ ತಂದುಕೊಟ್ಟಿದ್ದಾರೆ. ಖಚಿತ ಆಕರಗಳನ್ನು ಆಧರಿಸಿ ಕಲ್ಯಾಣದ ಚರಿತ್ರೆಯ ಪುನರ್ ಕಟ್ಟುವಿಕೆ ಆಗಬೇಕು ಎಂದು ಕಲಬುರ್ಗಿಯ ವಿಭಾಗೀಯ ಪತ್ರಾಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ. ವೀರಶೆಟ್ಟಿ ಗಾರಂಪಳ್ಳಿ ಹೇಳಿದರು.

ಬಸಕಲ್ಯಾಣದ ಎಸ್‌ಎಸ್‌ಕೆ ಬಸವೇಶ್ವರ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜಿನಲ್ಲಿ ಕಲಬುರ್ಗಿಯ ವಿಭಾಗೀಯ ಪತ್ರಾಗಾರ ಇಲಾಖೆ ಮತ್ತು ಇತಿಹಾಸ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವಕಲ್ಯಾಣ ಇತಿಹಾಸ ಮತ್ತು ಸಂಸ್ಕೃತಿ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ʼಪ್ರಭುತ್ವ, ವಾಸ್ತುಶಿಲ್ಪ, ಸಂಸ್ಕೃತಿ ಹಾಗೂ ಹಲವು ಪಂಥಗಳು ಪ್ರವಹಿಸಿದ ಕಲ್ಯಾಣದ ಚರಿತ್ರೆಗೆ ಬಹುತ್ವದ ಆಯಾಮವಿದೆʼ ಎಂದರು.

ನಿವೃತ್ತ ಪ್ರಾಧ್ಯಾಪಕ ಡಾ.ಚಂದ್ರಶೇಖರ ಬಿರಾದಾರ ಮಾತನಾಡಿ, ʼಬಸವಕಲ್ಯಾಣ ಚರಿತ್ರೆಗೆ ಸಂಬಂಧಿಸಿದ ಶಾಸನಗಳು, ಕೃತಿಗಳು ದಾಖಲೆಗಳಾಗಿವೆ. ರಾಷ್ಟ್ರಕೂಟರು ಸೇರಿ ಹಲವು ಅರಸರ, ವಚನಕಾರರ, ಸೂಫಿಗಳಿಂದ ಕಲ್ಯಾಣದ ಅಸ್ತಿತ್ವ ರೂಪುಗೊಂಡಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಧ್ಯಾಪಕ ಡಾ. ಶಿವಕುಮಾರ ಉಪ್ಪೆ ಮಾತನಾಡಿ, ʼಜಾಗತಿಕ ಚರಿತ್ರೆಗೆ ಮಹತ್ವ ಬರಬೇಕಾದರೆ ಮೊದಲು ಸ್ಥಳೀಯ ಚರಿತ್ರೆಯ ರಚನೆಗೆ ಆದ್ಯತೆಯಿರಲಿ. ಭಾರತದಲ್ಲಿ ಇತಿಹಾಸದ ಬರವಣಿಗೆಗೆ ಆದ್ಯತೆ ನೀಡಿದ ಕಾರಣ ಸ್ಥಳೀಯ ಚರಿತ್ರೆ ದಾಖಲಾಗಿಲ್ಲʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಬಸವರಾಜ ಎವಲೆ ಮಾತನಾಡಿ, ʼಬಸವಕಲ್ಯಾಣದ ಇತಿಹಾಸ ಮತ್ತು ಸಂಸ್ಕೃತಿಯ ಕುರಿತು ಹಲವು ದಾಖಲೆಗಳಿವೆ. ಕಲ್ಯಾಣದ ಕುರಿತು ಸಮಗ್ರ ಸಂಗತಿಗಳು ಒಳಗೊಂಡ ಪುಸ್ತಕ ಪ್ರಕಟವಾಗುವ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಇತಿಹಾಸ ಪ್ರಜ್ಞೆ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ದೊಡ್ಡದುʼ ಎಂದರು.

ಇತ್ತೀಚೆಗೆ ಪ್ರಾಧ್ಯಾಪಕರಾಗಿ ಬಡ್ತಿ ಹೊಂದಿದ ಎಸ್‌ಎಸ್‌ಕೆಬಿ ಕಾಲೇಜು ಪ್ರಾಚಾರ್ಯ ಪ್ರೊ. ಬಸವರಾಜ ಎವಲೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಚನಗಳಲ್ಲಿ ಸಂವಿಧಾನದ ಆಶಯವಿದೆ : ಎನ್.ಕೆ.ಫಣೀಂದ್ರ

ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ.ಶಿವಕುಮಾರ ಪಾಟೀಲ, ಪ್ರೊ. ವಿಠೋಬಾ ಡೊಣ್ಣೇಗೌಡರು, ಡಾ. ರಮೇಶ, ಡಾ. ಸುರೇಶ್ ಎಚ್.ಆರ್, ಲಕ್ಷ್ಮೀಬಾಯಿ ಬಂಕೂರ, ಭಾರತಿ ಮಠ, ಭೀಮಾಶಂಕರ ಪೂಜಾರಿ, ಡಾ. ಬಸವರಾಜ ಖಂಡಾಳೆ, ಅಧ್ಯಾಪಕ ಡಾ. ಭೀಮಾಶಂಕರ ಬಿರಾದಾರ ಸೇರಿದಂತೆ ಎಸ್‌ಎಸ್‌ಕೆಬಿ ಕಾಲೇಜು, ಶ್ರೀ ಬಸವೇಶ್ವರ ಪದವಿ ಕಾಲೇಜು, ರಾಜೀವ್ ಗಾಂಧಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಶಿವಕುಮಾರ ಕೊಲ್ಲೆ ಸ್ವಾಗತಿಸಿದರು, ಮಹಾದೇವ ದೇಗಾಂವ ನಿರೂಪಿಸಿದರು . ಕಲ್ಯಾಣಪ್ಪಾ ನಾವದಗಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...