ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವಂತಿಲ್ಲ ಎನ್ನುವ ಆದೇಶ ನಮ್ಮದಲ್ಲ: ಸಿಎಂ ಸಿದ್ದರಾಮಯ್ಯ

Date:

  • ಕೇಂದ್ರ ಸರ್ಕಾರ ಬಳೆ ತೊಡುವಂತಿಲ್ಲ ಮಾರ್ಗಸೂಚಿ ಹೊರಡಿಸಿದೆ
  • ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ: ಕಾಂಗ್ರೆಸ್‌ ವ್ಯಂಗ್ಯ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಲಗಳೆದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಮುಂದುವರಿದು, “ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ” ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹಲವು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದರಿಂದಾಗಿ ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ, ಮಹಿಳಾ ಹೋರಾಟಗಾರ್ತಿಯರು ಸೇರಿದಂತೆ ಹಿಂದು ಸಂಘಟನೆಗಳಿಂದ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಸ್ಪಷ್ಟನೆ ನೀಡಿದ್ದಾರೆ.

ಧಿಕ್ಕಾರ ಹಾಕಿ ಕಟೀಲ್‌ ಟ್ವೀಟ್

“ಹಿಂದೂಗಳ ವಿರುದ್ಧ ಸದಾ ವಿಷಕಾರುವ ಕಾಂಗ್ರೆಸ್‌ ಸರ್ಕಾರದಿಂದ ಮತ್ತೊಂದು ದ್ವೇಷದ ಆದೇಶ ಹೊರಬಿದ್ದಿದೆ. ʼಬಿಸಿಯೂಟ ಅಡುಗೆದಾರರುʼ ಕೈಗೆ ಬಳೆ ಧರಿಸಬಾರದು ಎಂದಿರುವ ಕಾಂಗ್ರೆಸಿಗರು ಆ ಬಳೆಗಳನ್ನು ತಾವು ಧರಿಸಿಕೊಳ್ಳಬೇಕೆಂದಿದ್ದಾರೆಯೇ? ಎಂಬುದೇ ತಿಳಿಯುತ್ತಿಲ್ಲ. ಹಿಂದೂ ಆಚರಣೆಗಳನ್ನು ಹತ್ತಿಕ್ಕಬೇಕೆಂಬ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್‌ ಮಾಡಿದ್ದರು.

ಕಾಂಗ್ರೆಸ್‌ ತಿರುಗೇಟು

“ತಮ್ಮದೇ ಸರ್ಕಾರ ರೂಪಿಸುವ ನೀತಿ ನಿಯಮಗಳ ಬಗ್ಗೆ ಅರಿವಿಲ್ಲದ ನಳಿನ್ ಕುಮಾರ್ ಅವರು ಸಂಸದ ಸ್ಥಾನಕ್ಕೆ ಅಪಚಾರವಿದ್ದಂತೆ. ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಬಿಸಿಯೂಟದ ಕಾರ್ಯಕರ್ತೆಯರು ಅಡುಗೆ ಮಾಡುವ ಸಂದರ್ಭದಲ್ಲಿ ಕೈಗೆ ಉಗುರುಬಣ್ಣ ಹಚ್ಚಬಾರದು, ಬಳೆ ತೊಟ್ಟಿರಬಾರದು ಎಂದು ಕೇಂದ್ರ ಸರ್ಕಾರ 2020ರಲ್ಲೇ ಆದೇಶ ಹೊರಡಿಸಿದೆ. ನಳಿನ್‌ ಕುಮಾರ್‌ ಕಟೀಲ್‌ ಅವರೇ, ಆ ಬಳೆಯನ್ನು ತಾವು ಧರಿಸಿಕೊಳ್ಳಲೆಂದು ಮೋದಿಯವರು ಈ ಆದೇಶ ಹೊರಡಿಸಿದ್ದೇ? ಹಿಂದೂ ಆಚರಣೆಗಳನ್ನು ಹತ್ತಿಕ್ಕಲು ಈ ಕ್ರಮ ಕೈಗೊಂಡರೇ? ಕಟೀಲ್ ಕೈಗೆ ಬಳೆ ತೊಟ್ಟು ಇದನ್ನು ಪ್ರತಿಭಟಿಸಲಿ” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಕಾಲೆಳೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...