ವರ್ತೂರು ಸಂತೋಷ್​ಗೆ ಲಾಕೆಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ

Date:

ಹುಲಿ ಉಗುರು ಇರುವ ಲಾಕೆಟ್‌ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದೀಗ, ಸಂತೋಷ್ ಅವರಿಗೆ ಲಾಕೆಟ್‌ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ ಎದುರಾಗಿದೆ.

ಸದ್ಯ ಅರಣ್ಯಾಧಿಕಾರಿಗಳು ಸಂತೋಷ್ ಅವರಿಗೆ ದೊರೆತ ಹುಲಿ ಉಗುರಿನ ಮೂಲ ಕೆದಕಲು ತಯಾರಿ ನಡೆಸಿದ್ದಾರೆ. ಇದೀಗ ಹುಲಿ ಉಗುರಿಗೆ ಲಾಕೆಟ್ ಮಾಡಿ ಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕ ಹಾಗೂ ಸಂತೋಷ್ ಆಪ್ತ ರಂಜಿತ್ ಅವರಿಗೂ ಅರಣ್ಯಾಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಂಜಿತ್‌ ಅವರು ತನಿಖೆಗೆ ಹಾಜರಾದ ದಿನ ಆರೋಪಗಳು ಸಾಬೀತಾದರೆ, ಬಂಧನವಾಗುವ ಸಾಧ್ಯತೆಗಳು ಹೆಚ್ಚಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್ ಅವರು ಧರಿಸಿದ್ದ ಹುಲಿ ಉಗುರಿನ ಮೂಲವನ್ನು ಕೆದಕಲು ಮುಂದಾಗಿದ್ದಾರೆ. ಈ ಹುಲಿ ಉಗುರು ವರ್ತೂರು ಅವರಿಗೆ ಹೇಗೆ ದೊರೆಯಿತು? ಇವರಿಗೆ ಈ ಉಗುರನ್ನು ಕೊಟ್ಟಿದ್ಯಾರು? ಹುಲಿಯನ್ನು ಕೊಂದು ಅಥವಾ ಹುಲಿಯನ್ನು ಬೇಟೆಯಾಡಿ ಈ ಉಗುರು ತಂದಿದ್ದಾರಾ? ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಗುಂಡಿ ಮುಚ್ಚಲು ಪ್ರತಿ ವಾರ್ಡ್‌ಗೆ ₹15 ಲಕ್ಷ ಬಿಡುಗಡೆ ಮಾಡಿದ ಬಿಬಿಎಂಪಿ

“ಸುಮಾರು 3-4 ವರ್ಷಗಳ ಹಿಂದೆ ವರ್ತೂರು ಸಂತೋಷ್ ಅವರು ತಮಿಳುನಾಡಿಗೆ ಹೋಗಿದ್ದಾಗ ಹೊಸೂರು-ಧರ್ಮಪುರಿ ನಡುವೆ ಯಾವುದೋ ಒಂದು ಭಾಗದಲ್ಲಿ ಹುಲಿ ಉಗುರನ್ನು ತೆಗೆದುಕೊಂಡಿದ್ದಾರೆ. ಅಸಲಿಗೆ ಹುಲಿ ಉಗುರಿನ ಪೆಂಡೆಂಟ್ ಬಳಸುವುದು, ಧರಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅಪರಾಧ ಎಂಬುವುದು ಸಂತೋಷ್ ಅವರಿಗೆ ಗೊತ್ತಿರಲಿಲ್ಲ. ಸಂತೋಷ್ ಅವರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಜಾಮೀನು ಅರ್ಜಿ ವಿಚಾರಣೆ ಬುಧವಾರ ನಡೆಯಲಿದೆ” ಎಂದು ಸಂತೋಷ್ ಪರ ವಕೀಲ ನಟರಾಜ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...