ಯಾದಗಿರಿ | ಅನಾಥ ಶವಕ್ಕೆ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಪೊಲೀಸರು

Date:

ಕರ್ನಾಟಕ ಪೊಲೀಸರು ತಮ್ಮ ಕರ್ತವ್ಯದ ಜೊತೆ ಮಾನವೀಯ ಕಾರ್ಯಗಳಿಂದಲೂ ಜನ ಮನ ಗೆಲ್ಲುತ್ತಾರೆ ಅನ್ನೋದಕ್ಕೆ ಇದೊಂದು ಘಟನೆ ನಿದರ್ಶನ. ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಅನಾಥ ಶವಕ್ಕೆ ತಾವೇ ಮುಂದೆ ನಿಂತು ಅಂತ್ಯ ಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವಡಗೇರಾ ತಾಲೂಕಿನ ಖಾನಾಪುರ ಗ್ರಾಮದ ರಾಮಲಿಂಗೇಶ್ವರ ಮಠಕ್ಕೆ ಕಳೆದ ವಾರದ ಹಿಂದೆ ಅಂದಾಜು 70 ಆಸುಪಾಸಿನ ಅಪರಿಚಿತ ಸಾಧುವೊಬ್ಬರು ಬಂದಿದ್ದರು. ಮಾರ್ಚ್‌ 7 ರಂದು ಸಂಜೆ ವಯೋಸಹಜ ಕಾಯಿಲೆಯಿಂದ ಅಥವಾ ಹಸಿವಿನಿಂದ ಮೃತಪಟ್ಟಿರಬಹುದು ಎಂದು ಮಾರ್ಚ್‌ 8 ರಂದು ಅದೇ ಗ್ರಾಮದ ನಾಗಪ್ಪ ದೇವೇಂದ್ರಪ್ಪ ಎಂಬುವರು ವಡಗೇರಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ವಡಗೇರಾ ಪಿಎಸ್‌ಐ ಜೈಶ್ರೀ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ವ್ಯಕ್ತಿಯ ಬಗ್ಗೆ ವಿಚಾರಿಸಿದ್ದಾರೆ. ಮೃತ ಸ್ವಾಮೀಜಿ ಅನಾಥ ಹಾಗೂ ಕುಟುಂಬಸ್ಥರು ಯಾರು ಇಲ್ಲ ಎಂದು ತಿಳಿದು ಬಂದಾಗ ಅನಾಥ ಸ್ವಾಮೀಜಿಯ ಶವದ ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ತಾವೇ ಪೊಲೀಸ್ ಸಿಬ್ಬಂದಿ ಜೊತೆ ಸೇರಿ ಧಾರ್ಮಿಕ ವಿಧಿ-ವಿಧಾನಗಳಿಂದ ಯಾದಗಿರಿಯ ಭೀಮಾ ನದಿಯ ತಟದಲ್ಲಿರುವ ಸ್ಮಶಾನದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ʼಜೈ ಶ್ರೀರಾಮ್‌ʼ ಘೋಷಣೆಗೆ ʼಜೈ ಸೀತಾರಾಮʼ ಅಲ್ಲ, ʼಜೈ ಸಂವಿಧಾನʼ ಉತ್ತರ: ಶಿವಸುಂದರ್

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನಾಥ ಶವಕ್ಕೆ ಮಗಳಾಗಿ ಮುಂದೆ ನಿಂತು ಶವ ಸಂಸ್ಕಾರ ಮಾಡಿರುವುದು ಮಹಿಳಾ ದಿನಾಚರಣೆಯ ವಿಶೇಷತೆಗೆ ಸಾಕ್ಷಿಯಾಗಿದೆ. ಪಿಎಸ್‌ಐ ಜೈಶ್ರೀ ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ತಾಲೂಕಿನಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...