ಮೈಸೂರು | ಕನ್ನಡ ನೆಲ, ಜಲ, ಭಾಷೆ ಉಳಿವಿಗೆ ಕನ್ನಡಪರ ಸಂಘಟನೆಗಳ ಪಾತ್ರ ಮಹತ್ವದ್ದು: ಡಾ ಜಯಪ್ಪ ಹೊನ್ನಾಳಿ

Date:

ಮೈಸೂರು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾ ಮಂಟಪದಲ್ಲಿಂದು ಕನ್ನಡಾಂಬೆ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ, ಕವಿ ಡಾ. ಜಯಪ್ಪ ಹೊನ್ನಾಳಿ ‘ಕನ್ನಡ ನೆಲ, ಜಲ, ಭಾಷೆಯ ಉಳಿವಿಗೆ ಕನ್ನಡಪರ ಸಂಘಟನೆಗಳ ಪಾತ್ರ ಮಹತ್ವದ್ದು. ಅವರು ಕನ್ನಡದ ಸೈನಿಕರಾಗಿ ಕೆಲಸ ಮಾಡುತ್ತಿರುವುದರಿಂದಲೇ ಇಂದು ನಮ್ಮ ಕನ್ನಡ ಭಾಷೆ ಉಳಿಯಲು’ ಸಾಧ್ಯವಾಗಿದೆ ಎಂದು ಹೇಳಿದರು.

ಕನ್ನಡಪರ ಸಂಘಟನೆಗಳ ತ್ಯಾಗ ದೊಡ್ಡದು, ಅವರ ಕನ್ನಡಪರ ನಿರಂತರ ಹೋರಾಟದಿಂದಲೇ ಇಂದು ಕನ್ನಡ ಉಳಿಯಲು ಸಾಧ್ಯವಾಗಿದೆ. ಕನ್ನಡಪರ ಸಂಘಟನೆಗಳ ಎಲ್ಲಾ ಹೋರಾಟಗಳಿಗೂ ಕನ್ನಡಾಭಿಮಾನಿಗಳು ಬೆಂಬಲ ನೀಡುವ ಮೂಲಕ ಅವರನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.

ಕನ್ನಡದ ಕಂದ ಮೂಗೂರು ನಂಜುಂಡಸ್ವಾಮಿ ಮಾತನಾಡಿ, “ಕಳೆದ 40 ವರ್ಷಗಳಿಂದ ಕನ್ನಡ ನೆಲ, ಜಲ, ಭಾಷೆಯ ಉಳಿವಿಗಾಗಿ ನಾವು ಹೋರಾಟ ಮಾಡುತ್ತಿದ್ದು, ನನ್ನ ಮೇಲೆ ನೂರಾರು ಕೇಸುಗಳನ್ನು ಹಾಕಲಾಗಿದೆ. ಪ್ರತಿನಿತ್ಯ ಕೋರ್ಟ್ ಕಚೇರಿ ಅಲೆಯುವಂತಾಗಿದೆ. ಇಂದು ಕನ್ನಡದಪರ ಹೋರಾಟಗಾರರ ನೋವು ನಲಿವುಗಳನ್ನು ಯಾರೂ ಕೇಳುತ್ತಿಲ್ಲ, ಇದರಿಂದ ಕನ್ನಡಪರ ಹೋರಾಟಗಳಿಗೆ ಯುವ ಸಮೂಹ ಬರುತ್ತಿಲ್ಲ, ಆದಾಗ್ಯೂ ನಾವು ಈ ನಾಡು ಕಟ್ಟುವ ಕೆಲಸ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಿಟ್ಟಿನಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ನಿರಂತರವಾಗಿ ಒಂದಲ್ಲಾ ಒಂದು ಕನ್ನಡ ಪರ ಕಾರ್ಯಕ್ರಮಗಳನ್ನು ನಡೆಸುತ್ತಾ, ಕನ್ನಡಿಗರ ರಕ್ಷಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರು ಕೈಗೆತ್ತಿಕೊಂಡ ಖಾಸಗಿ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎನ್ನುವ ಹೋರಾಟ ಸಾಕಷ್ಟು ಗಮನ ಸೆಳೆಯಿತು. ನಾವು ಸದಾಕಾಲ ಕನ್ನಡಾಂಬೆ ರಕ್ಷಣಾ ವೇದಿಕೆಯ ಎಲ್ಲಾ ಹೋರಾಟಗಳಿಗೂ ಬೆಂಬಲ ನೀಡುತ್ತೇವೆ ಎಂದರು.

ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷರಾದ ಎಂ. ಚಂದ್ರಶೇಖರ್ ಮಾತನಾಡಿ, ಕನ್ನಡಪರ ಹೋರಾಟ ಪ್ರಾರಂಭವಾಗಿದ್ದೇ ಮೈಸೂರಿನಲ್ಲಿ, ಇಂತಹ ಸಾಂಸ್ಕೃತಿಕ ನೆಲದಲ್ಲಿ ಹಲವಾರು ಮಹನೀಯರು ಕನ್ನಡವನ್ನು ಕಟ್ಟಿ ಬೆಳೆಸಿದ್ದಾರೆ. ಇಂದಿನ ದಿನಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ಹೋರಾಟ ದೊಡ್ಡದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ನ.20 ರಂದು ಏಕವ್ಯಕ್ತಿ ಅಭಿನಯದ ‘ಕೌದಿ’ ನಾಟಕ ಪ್ರದರ್ಶನ

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೈಸೂರು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕರವೇ ರಾಜ್ಯ ಖಜಾಂಚಿ ನಂಜುಂಡ ಮತ್ತು ಕರವೇ ಜಿಲ್ಲಾ ಗೌರವ ಕಾರ್ಯದರ್ಶಿ ಸಿಂಧುವಳ್ಳಿ ಶಿವಕುಮಾರ್ ಅವರನ್ನು ಗೌರವಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್, ಹೊನ್ನೇಗೌಡ, ಶಿವಣ್ಣ, ಶಿವಕುಮಾರ್, ಕಿರಣ, ಹರೀಶ್, ವತ್ಸಲ, ಸೌಭಾಗ್ಯ, ಲಕ್ಷ್ಮಿ, ಭಾಗ್ಯಮ್ಮ, ಲೋಕೇಶ್, ವಿಷ್ಣು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...