ಭೂಮಿ ಮೇಲಿನ ಸಂಪನ್ಮೂಲ ಕಾಪಾಡಲು ಏಕೈಕ ಮಾರ್ಗ ವೃತ್ತಾಕಾರದ ಆರ್ಥಿಕತೆ: ಪ್ರಿಯಾಂಕ್‌ ಖರ್ಗೆ

Date:

  • ಕಚ್ಚಾ ವಸ್ತುಗಳ ಮರುಬಳಕೆ ನಮ್ಮ ಮುಂದಿರು ಸವಾಲು
  • ಇ-ತ್ಯಾಜ್ಯ ನಿಯಮಗಳಲ್ಲಿ ವೃತ್ತಾಕಾರದ ಆರ್ಥಿಕತೆ ಆಶಯ

ಭೂಮಿ ಮೇಲಿರುವ ಸೀಮಿತ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಉತ್ತಮ ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಕಾಪಾಡಲು ನಮ್ಮ ಮುಂದಿರುವ ಏಕೈಕ ಮಾರ್ಗವೆಂದರೆ ವೃತ್ತಾಕಾರದ ಆರ್ಥಿಕತೆಗೆ (ಸರ್ಕ್ಯುಲರ್ ಎಕಾನಮಿ) ಪ್ರಾಮುಖ್ಯತೆ ನೀಡುವುದು. ಇದರಿಂದ ನಾವು ತ್ಯಾಜ್ಯ ಉತ್ಪಾದನೆಯ ಮೇಲೆ ನಿಯಂತ್ರಣ ಹೇರಬಹುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖಾ ವತಿಯಿಂದ ಏರ್ಪಡಿಸಿದ್ದ ಆರ್ಥಿಕತೆ ಕುರಿತ ದುಂಡುಮೇಜಿನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲಗಳ ಬಳಕೆಯಿಂದ ತ್ಯಾಜ್ಯ ಮಾಲಿನ್ಯ ಮತ್ತು ಜೈವಿಕ ವೈವಿಧ್ಯತೆಯ ನಷ್ಟದಂತಹ ಜಾಗತಿಕ ಸವಾಲುಗಳನ್ನು ನಾವು ಎದುರಿಸುತ್ತಿದ್ದೇವೆ ನಾವು ಭೂಮಿಯ ಸಂಪನ್ಮೂಲಗಳನ್ನು ಹೊರತೆಗೆದು ಅದರಿಂದ ಉತ್ಪನ್ನಗಳನ್ನು ತಯಾರಿಸುತ್ತೇವೆ. ನಂತರ ಅವುಗಳನ್ನು ತ್ಯಾಜ್ಯವಾಗಿ ಎಸೆಯುತ್ತೇವೆ. ಈ ಕ್ರಿಯೆಗಳು ಸಂಪನ್ಮೂಲದ ದೀರ್ಘಾಯುಷಕ್ಕೆ ಕುಂದು ತರುತ್ತದೆ. ಇದು ಕೇವಲ ಭೂಮಿಗಷ್ಟೇ ಅಲ್ಲದೇ, ನಮ್ಮ ಆರ್ಥಿಕತೆಯ ಮೇಲೂ ದುಷ್ಪರಿಣಾಮವನ್ನು ಬೀರುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಚ್ಚಾ ವಸ್ತುಗಳ ಕನಿಷ್ಠ ಬಳಕೆ ಮಾಡುವುದು, ಉತ್ಪನ್ನಗಳು ಮತ್ತು ಘಟಕಗಳ ಗರಿಷ್ಠ ಮರುಬಳಕೆ ಮಾಡುವುದು ಹಾಗೂ ಗುಣಾತ್ಮಕವಾಗಿ ಮತ್ತು ಪರಿಮಾಣಾತ್ಮಕವಾಗಿ ಕಚ್ಚಾ ವಸ್ತುಗಳ ಮರುಬಳಕೆ ಮಾಡುವುದು ನಮ್ಮ ಮುಂದಿರು ಮೂರು ಸವಾಲುಗಳಾಗಿವೆ.

ಈಗ ನಾವು ಉತ್ಪಾದಿಸಿದ ವಸ್ತುಗಳ ಸಂಪೂರ್ಣ ಬಳಕೆಯ ನಂತರ ಮಾಡುತ್ತಿರುವ ಮರುಬಳಕೆಯ ಪ್ರಮಾಣ ಕೇವಲ ಶೇ. 7.2 ಮಾತ್ರ ಎಂಬ ವಿಷಯವನ್ನು ಹಂಚಿಕೊಂಡ ಸಚಿವರು, ಈಗಾಗಲೇ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಲಭ್ಯವಿರುವ ಪ್ರಮಾಣಕ್ಕಿಂತ ಹೆಚ್ಚಾಗಿ ಬಳಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಯ ವರದಿಗಳು ಸೂಚಿಸುತ್ತವೆ ಎಂದು ಹೇಳಿದರು.

ಭಾರತ ತನ್ನ ಅಸ್ತಿತ್ವದಲ್ಲಿರುವ ಐಟಿ ಪ್ರಾಬಲ್ಯ ಮತ್ತು ತಾಂತ್ರಿಕ ಪ್ರತಿಭೆಗಳನ್ನು ಸದ್ಬಳಕೆ ಮಾಡಿಕೊಂಡರೆ ಜಾಗತಿಕ ವೃತ್ತಾಕಾರದ ಆರ್ಥಿಕ ಕ್ರಾಂತಿಯು ಮುಂಚೂಣಿಯಲ್ಲಿ ನಿಲ್ಲಬಹುದಾಗಿದೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಅತ್ಯಾಧುನಿಕ ಆವಿಷ್ಕಾರಗಳನ್ನು ರೂಪಿಸಲು ಭಾರತವು ಸಕಲ ರೀತಿಯಲ್ಲಿ ಸಿದ್ಧವಾಗಿದೆ. ಕರ್ನಾಟಕ ಸರ್ಕಾರ ವೃತ್ತಾಕಾರದ ಆರ್ಥಿಕತೆಯ ಮಹತ್ವವನ್ನು ಅರ್ಥಮಾಡಿಕೊಂಡಿದ್ದು, ಅದನ್ನು ರಾಜ್ಯದ ಪ್ರಮುಖ ನೀತಿಗಳಲ್ಲಿ ಸೇರಿಸಿದೆ ಎಂದರು.

ಸರ್ಕಾರದ ಸ್ಟಾರ್ಟ್ ಅಪ್ ನೀತಿ, ಕರ್ನಾಟಕ ರಾಜ್ಯ ನಗರ ಘನ ತ್ಯಾಜ್ಯ ನಿರ್ವಹಣಾ ನೀತಿ, ಕರ್ನಾಟಕ ನೋಂದಾಯಿತ ವಾಹನ ಸ್ಕ್ಯಾಪಿಂಗ್ ನೀತಿ ಹಾಗೂ ಇ – ತ್ಯಾಜ್ಯ (ನಿರ್ವಹಣೆ) ನಿಯಮಗಳಲ್ಲಿ ವೃತ್ತಾಕಾರದ ಆರ್ಥಿಕತೆಯ ಆಶಯಗಳನ್ನು ಹೊಂದಾಣಿಕೆ ಮಾಡಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚು ಆಯಸ್ಸಿಲ್ಲ; ಬಿಜೆಪಿ ಕಿಡಿ

ನಾವು ಹೆಚ್ಚು ಜ್ಞಾನವನ್ನು ಹಂಚಿಕೊಂಡರೆ, ಮುಂದಿನ ಪೀಳಿಗೆಗಾಗಿ ಹೆಚ್ಚಿನದನ್ನು ಉಳಿಸಲು ಸಾಧ್ಯ ಮತ್ತು ಹೆಚ್ಚು ಉಳಿಸಿದರೆ ಹೆಚ್ಚು ಬದುಕಲು ಸಾಧ್ಯ. ಪ್ರಪಂಚದ ಮುಂದಿನ ಭವಿಷ್ಯಕ್ಕೆ ಇದರಿಂದ ಒಳಿತಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಫಿನ್ ಲ್ಯಾಂಡ್, ಜರ್ಮನಿ, ಇಸ್ರೇಲ್, ಜಪಾನ್, ನೆದರ್ ಲ್ಯಾಂಡ್, ಸ್ವಿಟ್ಟರ್ ಲ್ಯಾಂಡ್, ಪೋಲ್ಯಾಂಡ್ , ಯುಕೆ ದೇಶಗಳ ರಾಯಭಾರ ಕಚೇರಿಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...