ಅಕ್ಕಿ, ಗೋಧಿ ಮಾರದಂತೆ ಮೇನಲ್ಲೇ ನಿಯಮ ಬದಲಾವಣೆ ಮಾಡಲಾಗಿದೆ: ತೇಜಸ್ವಿ ಸೂರ್ಯ

Date:

  • ‘ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್‌ ನಾಯಕರು’
  • ‘ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು’

ಅನ್ನಭಾಗ್ಯ ಯೋಜನೆ ವಿಚಾರದಲ್ಲಿ ಕೇಂದ್ರ ‌ಸರ್ಕಾರ ತಾರತಮ್ಯ ಮಾಡಿಲ್ಲ. ಕೇಂದ್ರದ ಮೇಲೆ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡುತ್ತಿದೆ. ಎಫ್‌ಸಿಐಗೆ ಪತ್ರ ಬರೆಯುವ ಮೊದಲೇ ಮಾರಾಟ ಯೋಜನೆಯ ನಿಯಮಗಳಲ್ಲಿ ಬದಲಾವಣೆ ತರಲಾಗಿತ್ತು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸಂಸದ ಪಿ ಸಿ‌ ಮೋಹನ್ ಜೊತೆಯಾಗಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

“ಅಕ್ಕಿ, ಗೋಧಿಗೆ ಸಂಬಂಧಿಸಿದಂತೆ ಅಂತರ್ ಸಚಿವಾಲಯ ಸಮಿತಿ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಮಾರದಂತೆ ಸೂಚನೆ ಮಾಡಿದೆ. ಅಕ್ಕಿ, ಗೋಧಿ ಕೊರತೆ ಆಗದಂತೆ ಮೇ ತಿಂಗಳಿನಲ್ಲೇ ಕೇಂದ್ರ ನಿಯಮಗಳಲ್ಲಿ ಈ ಬದಲಾವಣೆ ತಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಕ್ಕಿ ಕೊಡಲಾಗದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಕುಣಿಯಲಾಗದವನು ನೆಲಡೊಂಕು ಅಂದಂತಾಗಿದೆ ರಾಜ್ಯ ಸರ್ಕಾರದ ಸ್ಥಿತಿ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ. ನಿತ್ಯ ಕೇಂದ್ರ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಕಾಂಗ್ರೆಸ್‌ ನಾಯಕರು” ಎಂದು ವಾಗ್ದಾಳಿ ನಡೆಸಿದರು.

“ಉಚಿತವಾಗಿ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್‌ ಗ್ಯಾರಂಟಿ ಘೋಷಣೆ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಹಾಗಾದರೆ ರಾಜ್ಯ ಸರ್ಕಾರ ನ್ಯಾಯವಾಗಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...