ಬೀದರ್‌ | ಆ.30ರಂದು ʼದಿ ರೂಲರ್ಸ್ʼ ಚಲನಚಿತ್ರ ಬಿಡುಗಡೆ : ನಟ ಕೆ.ಎಂ.ಸಂದೇಶ್

Date:

‌ಶ್ರೀಮಂತ ಯುವಜನರು ಬಡ ಯುವತಿಯರನ್ನು ಪ್ರೇಮ ಪಾಶಕ್ಕೆ ಬೀಳಿಸಿ ವಂಚಿಸುತ್ತಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಡ ಯುವತಿಯರ ಸ್ಥಿತಿಗತಿ ಮೇಲೆ ಬೆಳಕು ಚೆಲ್ಲಿ ಜಾಗೃತಿ ಮೂಡಿಸುವ ʼದಿ ರೂಲರ್ಸ್ʼ ಚಲನಚಿತ್ರ ಆಗಸ್ಟ್ 30ರಂದು ತೆರೆ ಕಾಣಲಿದೆ ಎಂದು ನಟ, ನಿರ್ದೇಶಕ ಹಾಗೂ ಅಂಬೇಡ್ಕರ್ ಸೇವಾ ಸಮಿತಿ (ಎಎಸ್‌ಎಸ್ಕೆ) ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್‌ ಹೇಳಿದರು.

ಬೀದರ್‌ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ʼಆಗಸ್ಟ್30ರಂದು ಬೀದರ್ ಹಾಗೂ ಭಾಲ್ಕಿ ಚಿತ್ರಮಂದಿರದಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆ ಆಗಲಿದೆʼ ಎಂದು ಮಾಹಿತಿ ನೀಡಿದರು.

ʼ2023ರ ಸೆಪ್ಟೆಂಬರ್‌ನಲ್ಲಿ ಚಿತ್ರದ ಕಥೆ ಸಿದ್ಧಗೊಂಡಿತ್ತು. ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ದಿನದಂದು ಶೂಟಿಂಗ್ ಆರಂಭಗೊಂಡಿತ್ತು. ಈಗ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರ ನಿರ್ಮಾಣಕ್ಕೆ 4.5 ಕೋಟಿ ರೂಪಾಯಿ ಖರ್ಚಾಗಿದೆ.‌ ಚಿತ್ರದ ನಿರ್ಮಾಪಕ ಅಶ್ವಸ್ಥ್ ಬೆಳಗೆರೆ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ನಾನು ನಟಿಸಿದ್ದೇನೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಿತ್ರದ ಚಿತ್ರೀಕರಣ ಮಾಡಲಾಗಿದೆ. ರೀತುಗೌಡ ನಟಿಯಾಗಿ, ಅವರ ತಾಯಿ ದುರ್ಗಮ್ಮ ಸಹ ಅಭಿನಯಿಸಿದ್ದಾರೆ. ಉದಯ ಭಾಸ್ಕರ್ ಅವರು ನಿರ್ದೇಶಿಸಿ ಪ್ರೋತ್ಸಾಹಿಸಿದ್ದಾರೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ಧಾಪ್ಯ ವೇತನ, ಅನ್ನಭಾಗ್ಯ ಸಿಗದೆ ವೃದ್ಧೆ ಪರದಾಟ

ಪತ್ರಿಕಾಗೋಷ್ಠಿಯಲ್ಲಿ ಮಹೇಶ್ ಗೋರನಾಳಕರ್‌, ಲೋಕೇಶ ಕಾಂಬಳೆ, ಪ್ರಕಾಶ್ ರಾವಣ, ಮುಕೇಶ ಚೆಲವಾ, ಸಿದ್ದಾರ್ಥ ನಾಟೇಕರ್, ಗೋಪಾಲ್ ದೊಡ್ಡಿ, ಭೀಮರಾವ್‌, ನೀಲೇಶ್ ಮೇಲಕೆರಿ, ಮುಕೇಶ್ ಪಾಂಡೆ, ಉದ್ದೇಶ್‌ ಸಿಂಗೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...