ರಂಗಭೂಮಿ ಸಾಮಾಜಿಕವಾಗಿ ಕಲೆ, ಶಿಕ್ಷಣ, ಸಾಂಸ್ಕೃತಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ: ಜಿ ಟಿ ದೇವೇಗೌಡ

Date:

ಮೈಸೂರಿನ ಪುರುಭವನದಲ್ಲಿ ನಡೆದ ಪ್ರಭುಲಿಂಗಲೀಲೆ ಎಂಬ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕರಾದ ಜಿ.ಟಿ. ದೇವೇಗೌಡ, ರಂಗಭೂಮಿ ಸಾಮಾಜಿಕವಾಗಿ ಕಲೆ, ಶಿಕ್ಷಣ, ಸಾಂಸ್ಕೃತಿಕ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಹೇಳಿದರು.

ರಂಗಭೂಮಿ ಎನ್ನುವುದು ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಬೆಳೆಸುವುದಕ್ಕೆ ಶ್ರೇಷ್ಠ ಕಲೆ. ಅದನ್ನು ಉಳಿಸಿ ಬೆಳೆಸಬೇಕು. ಇಂದಿನ ಪೀಳಿಗೆಗೆ ಪ್ರೇರಣೆಯಾಗಿರುವ ಕೆರೆಹಳ್ಳಿ ಬಿ. ದೊರೆಸ್ವಾಮಿರವರ ಅತ್ಯದ್ಭುತವಾದ ಕಲೆ ಪ್ರದರ್ಶನ ನಿಜಕ್ಕೂ ಮೈಜುಮ್ ಎನಿಸುವ ನಟನಾ ಕಲೆ ಹೀಗೆ ಮುಂದುವರೆಯಲಿ ಮತ್ತು ಸಾವಿರಾರು ಜನಕ್ಕೆ ಸ್ಪೂರ್ತಿಯಾಗಿರುವ ಇವರಿಗೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ದೊರಕಲಿ ಎಂದು ಆಶಿಸಿದರು. ಸಹಕಾರ ರತ್ನ ನಂಜುಂಡಪ್ಪರವರು ಅನೇಕ ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿ ಉತ್ತಮವಾದ ಕಾರ್ಯವನ್ನು ಮಾಡುತ್ತಿದ್ದಾರೆ ಅವರಿಗೆ ಶುಭಕೋರಿದರು.

ಇದೇ ವೇಳೆ ಚಾಮುಲ್, ಯೂನಿಯನ್ ಅಧ್ಯಕ್ಷರು ಮತ್ತು ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಹೆಚ್. ಎಸ್. ನಂಜುಂಡ ಪ್ರಸಾದ್ ಮತ್ತು ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರುಸ್ಕೃತರಾದ ಹಿರಿಯ ರಂಗಭೂಮಿ ಕಲಾವಿದ ಕೆರೆಹಳ್ಳಿ ಬಿ. ದೊರೆಸ್ವಾಮಿ ಅವರನ್ಮು ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ? ಒಳಮೀಸಲಾತಿ ಜಾರಿಗೆ ಸಿದ್ದರಾಮನಹುಂಡಿ ಜಾಥಾ: ಸಾಮಾಜಿಕ ನ್ಯಾಯದ ಹೋರಾಟ ಹತ್ತಿಕ್ಕಿದ ಸರ್ಕಾರ

ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಕುದೇರು ಮಠದ ಗುರು ಶಾಂತಮ್ಮ ಸ್ವಾಮಿಜಿ, ರಾಘವೇಂದ್ರ ನಗರ ಮಠದ ಶ್ರೀಗಳು, ಜಯರಾಮು, ಆಯೋಜಕರಾದ ಬಿ.ಸಿ. ಮಹದೇವಸ್ವಾಮಿ, ಚಿಕ್ಕ ರೇಖಾ, ಶಿವಕುಮಾರ್ ಮುರುಡಗಳ್ಳಿ ಶಿವಣ್ಣ, ಜಗದೀಶ್, ಮಲ್ಲು, ಸುರೇಶ್ ಕೋಚನಹಳ್ಳಿ, ಪುರುಷೋತ್ತಮ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...