ಚಿಂತಾಮಣಿ | ಖತರ್ನಾಕ್‌ ಕಳ್ಳರ ಬಂಧನ; ಎಸ್ಪಿ ಚೌಕ್ಸೆ ಶ್ಲಾಘನೆ

Date:

ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್‌ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು, ಕಳ್ಳರಿಂದ 47 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಹಿಂದೂಪುರದ ಮಹೇಶ್ ಅಲಿಯಾಸ್ ಉಪ್ಪಾರ್ ಮಹೇಶ್(25) ಬಿನ್ ಗುರಪ್ಪ, ಬೆಂಗಳೂರಿನ ಕಾಟನ್ ಪೇಟೆ ಜಾಲಿ ಮೊಹಲ್ಲಾ ನಿವಾಸಿ ಮುದಾಸ್ಸಿರ್ ಪಾಷಾ(33) ಬಿನ್ ಲೇಟ್ ಅಬ್ದುಲ್ ಬಶೀರ್, ಚಿಂತಾಮಣಿ ತಾಲ್ಲೂಕು, ಚಿನ್ನಸಂದ್ರ ಗ್ರಾಮದ ಸುಲ್ತಾನ್ ಬಾಷಾ(22) ಬಿನ್ ಸೈಯದ್ ಆಸಿಫ್ ಭಾಷಾ ಬಂಧಿತ ಆರೋಪಿಗಳು.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಸಿ ವಿ ಕೃಷ್ಣಾರೆಡ್ಡಿ ಎಂಬುವರ ಮನೆಯ ಬೀಗ ಮುರಿದು ಚಿನ್ನದ ಒಡವೆಗಳನ್ನು ಕಳ್ಳತನ ಮಾಡಲಾಗಿತ್ತು. ಅದಲ್ಲದೆ ತಾಲ್ಲೂಕಿನ ಕಾಗತಿ ಗ್ರಾಮದ ರಾಜಪ್ಪ ಎಂಬುವರ ಮನೆಯಲ್ಲೂ ಇತ್ತೀಚೆಗಷ್ಟೇ ಕಳ್ಳರು ಒಡವೆಗಳನ್ನು ದೋಚಿ ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರ ಭೇಟೆಗಾಗಿ ಎಸ್ಪಿ ಕುಶಾಲ್ ಚೌಕ್ಸೆ, ಎಎಸ್ಪಿ ರಾಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜು ಎಸ್, ಬಟ್ಲಹಳ್ಳಿ ಪೊಲೀಸ್ ಇನಸ್ಪೆಕ್ಟರ್ ಪುನೀತ್ ನಂಜುರಾಯ್, ಸಬ್ ಇನ್ಸ್ಪೆಕ್ಟರ್ ಮಮತಾ ಇ ಎಂ, ನಾಗೇಂದ್ರ ಪ್ರಸಾದ್ ಒಳಗೊಂಡ ವಿಶೇಷ ತಂಡವನ್ನು ರಚಿಸಿ, ಕಳ್ಳರನ್ನು ಎಡೆಮುರಿಕಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಎಂಎಲ್‌ಎ ಪ್ರದೀಪ್‌ ಈಶ್ವರ್‌ ಸ್ಕಾಲರ್‌ಶಿಪ್‌ – 2024 ಘೋಷಣೆ

ಈ ಕುರಿತು ಪ್ರತಕ್ರಯಿಸಿರುವ ಎಸ್ಪಿ ಕುಶಾಲ್ ಚೌಕ್ಸೆ, ನಮ್ಮ ಪೊಲೀಸರ ತಂಡ ಕಳ್ಳತನದ ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿರುವ ತಂಡದ ಶ್ರಮಕ್ಕೆ ಅಭಿನಂದನೆಗಳು ಎಂದು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...