ಚಿಂತಾಮಣಿ | ನಾಲ್ವರು ಕಳ್ಳರ ಬಂಧನ

Date:

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಮಂದಿ ಕಳ್ಳರನ್ನು ಬಂಧಿಸಿರುವ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು, ಕಳ್ಳರಿಂದ 8.87ಲಕ್ಷ ರೂ. ಬೆಲೆಬಾಳುವ ಬೈಕ್‌ಗಳು, ನಗದು ಹಾಗೂ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಶಾಹೀಲ್ ಖಾನ್, ಕೋಲಾರದ ರೆಹಮತ್ ನಗರದ ತನ್ವಿರ್ ಮತ್ತು ಇಬ್ರಾಹಿಂ ಪಾಷಾ, ಶ್ರೀನಿವಾಸಪುರ ಪಟ್ಟಣದ ಇಂದಿರಾ ನಗರದ ಸುಲ್ತಾನ್ ಬಂಧಿತ ಆರೋಪಿಗಳು.

crime1

ಆರೋಪಿಗಳ ಮೇಲೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ಪ್ರಕರಣಗಳು, ಬೆಂಗಳೂರಿನ ಮಹದೇವಪುರ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಮುಳಬಾಗಿಲು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ವಿವಿಧ ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಾಂತರ ಠಾಣೆ ವ್ಯಾಪ್ತಿಯ ವೆಂಕಟಗಿರಿ ಕೋಟೆಯ ನಿವಾಸಿ ಅಜಯಕುಮಾ‌ರ್ ಎಂಬುವವರು ಇತ್ತೀಚೆಗಷ್ಟೇ ಕಾರಿನ ಬ್ಯಾಟರಿ ಹಾಗೂ ಇತರೆ ಗುಜರಿ ವಸ್ತುಗಳು ಕಳ್ಳತನವಾಗಿವೆ ಎಂದು ದೂರು ನೀಡಿದ್ದರು.

crime12

ಆರೋಪಿಗಳ ಪತ್ತೆಗಾಗಿ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ, ಎಎಸ್ಪಿ ರಾಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧ‌ರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಬಣ ಬಡಿದಾಟಕ್ಕೆ ಕಾರಣವಾದ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ

ತನಿಖಾ ತಂಡದಲ್ಲಿ ಇನ್ಸ್ ಸ್ಪೆಕ್ಟ‌ರ್ ಶಿವರಾಜು, ಎಸ್‌ಐಗಳಾದ ಮಮತ, ನಾಗೇಂದ್ರ ಪ್ರಸಾದ್‌, ಪೇದೆಗಳಾದ ದಿನೇಶ್, ನರಸಿಂಹ, ಮಂಜುನಾಥರೆಡ್ಡಿ, ನಂದಕುಮಾ‌ರ್, ರಾಮಾಂಜಿನೇಯ, ಅರುಣ್, ಕೃಷ್ಣಮೂರ್ತಿ, ಶರಣಬಸವ, ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...