ಬೆಂಗಳೂರು | ರಕ್ತದಾನದ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ: ಭಾನು ಪ್ರಕಾಶ್

Date:

  • ಫೆ.1ರಂದು ನಡೆಯಲಿರುವ ಬ್ಯಾರಿ ಕೂಟದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರ
  • ಬಿಸಿಸಿ, ಬ್ಲಡ್ ಡೋನರ್ಸ್, ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ರಕ್ತದಾನ ಶಿಬಿರ

ರಕ್ತದಾನ ಮಹಾದಾನ. ರಕ್ತದಾನದ ಬಗ್ಗೆ ಹಲವರಲ್ಲಿ ಬಹಳಷ್ಟು ಆತಂಕವಿದೆ. ರಕ್ತ ಕೊಟ್ಟರೆ ದೇಹದಲ್ಲಿ ರಕ್ತ ಕಡಿಮೆ ಆಗಬಹುದು ಎಂದು ಹಲವು ಮಂದಿ ರಕ್ತ ನೀಡುವುದಕ್ಕೆ ಹಿಂಜರಿಯುತ್ತಾರೆ. ಈ ಭಯ, ಆತಂಕ ಹೋಗಲಾಡಿಸಬೇಕಾದರೆ ರಕ್ತದಾನದ ಬಗ್ಗೆ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ನಾರಾಯಣ ಹೃದಯಾಲಯ ಬ್ಲಡ್‌ ಬ್ಯಾಂಕ್ ವಿಭಾಗದ ಮುಖ್ಯಸ್ಥರಾದ ಭಾನು ಪ್ರಕಾಶ್ ತಿಳಿಸಿದರು.

ಅವರು ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು(ರಿ), ಬ್ಲಡ್ ಡೋನರ್ಸ್ ಮಂಗಳೂರು, ನಾರಾಯಣ ಹೃದಯಾಲಯ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ಬ್ಯಾರಿ ಕೂಟದ ಪ್ರಚಾರಾರ್ಥವಾಗಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಬಿಸಿಸಿ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ಬಿಸಿಸಿ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಹಲವು ಸ್ನೇಹಿತರು ಕಳೆದ ಏಳೆಂಟು ವರ್ಷಗಳಿಂದ ನಾರಾಯಣ ಹೃದಯಾಲಯದ ಜೊತೆಗೆ ಉತ್ತಮ ಒಡನಾಟ ಹೊಂದಿದ್ದಾರೆ. ಕೋವಿಡ್ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಇದ್ದಾಗ ರಕ್ತದಾನಿಗಳನ್ನು ಸಂಪರ್ಕಿಸಿ, ಹಲವು ರೋಗಿಗಳಿಗೆ ನೆರವಾಗಿದ್ದಾರೆ. ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಕೂಡ ಇಂತಹ ಶಿಬಿರಗಳ ಮೂಲಕ ಮಾಡುತ್ತಿದ್ದಾರೆ. ಇಂತಹ ಸಹಕಾರವಿದ್ದಾಗಲಷ್ಟೇ ಸೌಹಾರ್ದದ ಸಮಾಜ ನಿರ್ಮಿಸಲು ಸಾಧ್ಯ. ರಕ್ತದಾನದಂತಹ ಸಮಾಜ ಸೇವೆಯು ನಿರಂತರವಾದದು. ಫೆ.1ರಂದು ಬ್ಯಾರಿ ಕೂಟದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಸಮಾಜಮುಖಿ ಸೇವೆ ಮಾಡುತ್ತಿರುವುದು ಸಂತಸದ ಸಂಗತಿ” ಎಂದು ಭಾನು ಪ್ರಕಾಶ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಕಾರ್ಯದರ್ಶಿ ಹಾರಿಸ್ ಜಿ.ಎಸ್‌.ಕೆ, “ನಾರಾಯಣ ಹೃದಯಾಲಯ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಸಂಘಟನೆಯ ಸಹಕಾರದಿಂದ ಇಂತಹ ಸಮಾಜಸೇವೆ ಮಾಡಲು ಸಾಧ್ಯವಾಗುತ್ತಿದೆ. ಯಾವುದೇ ತುರ್ತು ಸಂದರ್ಭಗಳಲ್ಲಿಯೂ ಕೂಡ ನಮಗೆ ರಕ್ತದ ಅವಶ್ಯಕತೆ ಇದ್ದಾಗ ನೆರವು ನೀಡುತ್ತಿದ್ದಾರೆ. ಅದಕ್ಕಾಗಿ ಬಿಸಿಸಿಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ. ಅವರ ಸಹಕಾರವು ಇನ್ನು ಮುಂದೆಯೂ ಹೀಗೆ ಇರಲಿ” ಎಂದು ಹೇಳಿದರು.

WhatsApp Image 2026 01 10 at 11.07.32 AM

ಶಿಬಿರದಲ್ಲಿ ಭಾನು ಪ್ರಕಾಶ್ ಅವರಿಗೆ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು(ರಿ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ವತಿಯಿಂದ ಕಿರುಕಾಣಿಕೆಯನ್ನು ನೀಡಿ, ಗೌರವಿಸಲಾಯಿತು. ಶಿಬಿರದಲ್ಲಿ ಒಟ್ಟು ನೂರಕ್ಕೂ ಅಧಿಕ ಮಂದಿ ರಕ್ತದಾನಿಗಳು ರಕ್ತದಾನ ಮಾಡುವ ಮೂಲಕ ಸಹಕಾರ ನೀಡಿದರು. ಎಲ್ಲ ರಕ್ತದಾನಿಗಳಿಗೆ ಇದೇ ವೇಳೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌; ಸರ್ಕಾರದ ಹೆಂಗರುಳಿನ ಯೋಜನೆಗೆ ಬೇಕಿದೆ ಅಧಿಕಾರಿಗಳ ಬದ್ಧತೆ

ಈ ಸಂದರ್ಭದಲ್ಲಿ ಬೆಂಗಳೂರು ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್, ಉಪಾಧ್ಯಕ್ಷರಾದ ಸಲೀಂ ಸಿ.ಎಂ, ಶಂಶುದ್ದೀನ್, ಶಿಬಿರದ ಸಂಚಾಲಕರಾದ ಅಶ್ರಫ್ ಉಪ್ಪಿನಂಗಡಿ, ಬಿಸಿಸಿಯ ಕಾನೂನು ಸಲಹೆಗಾರರಾದ ಅಡ್ವೊಕೇಟ್ ಕಲಂದರ್ ಕೊಯಿಲ, ಬ್ಲಡ್ ಡೋನರ್ಸ್ ಮಂಗಳೂರು ಇದರ ಮುಖಂಡರಾದ ಬಶೀರ್ ಬೆಳ್ಳಾರೆ, ಇರ್ಫಾನ್ ಕಲ್ಲಡ್ಕ, ನಾರಾಯಣ ಹೃದಯಾಲಯದ ಡಾ. ರಚನಾ, ಸಿಬ್ಬಂದಿಗಳಾದ ರಾಜೇಶ್.ವಿ, ಸುನಿಲ್‌ ಕುಮಾರ್, ನೇಹಾ ಬಿಎಂ, ದೀಪಕ್, ಚೇತನ್, ಬಿಸಿಸಿಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಫೀಕ್ ಮಲ್ಲೇಶ್ವರಂ, ಹಾರಿಸ್, ಕಲಂದರ್, ಶಿಹಾಬ್ ಕಾಟಿಪಳ್ಳ, ಇಕ್ಬಾಲ್ ಡಿಫೈನ್, ನವಾಝ್ ಸೇರಿದಂತೆ ಮತ್ತಿತತರರು ಉಪಸ್ಥಿತರಿದ್ದರು.

WhatsApp Image 2026 01 10 at 1.51.38 PM
WhatsApp Image 2026 01 10 at 2.07.42 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...