ಮುಂದಿನ‌ ಐದು ವರ್ಷ ನಿಖಿಲ್​​ನನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

  • ‘ಕಾರ್ಯಕರ್ತರು, ಶಾಸಕರ ಒತ್ತಡಕ್ಕೆ ನಿಖಿಲ್​​ ತಲೆ ಕೊಟ್ಟ’
  • ‘ಸೋಲು, ಗೆಲುವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ’

ಮುಂದಿನ‌ ಐದು ವರ್ಷ ನಿಖಿಲ್​​ನನ್ನು ಚುನಾವಣೆಗೆ ಕರೆತರುವ ಪ್ರಶ್ನೆಯೇ ಇಲ್ಲ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಸೋಮವಾರ ಮಾತನಾಡಿದ ಅವರು, “ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಮುಂದುವರಿಸಿಕೊಂಡು ಹೋಗು ಎಂದು ಮಗನಿಗೆ ಹೇಳಿರುವೆ. ಈಗಾಗಲೇ ಮೂರು ಚಿತ್ರ ನಿರ್ಮಿಸಲು ಹಲವು ಸಂಸ್ಥೆಗಳು ಮುಂದೆ ಬಂದಿವೆ” ಎಂದರು.

“ಎರಡು ಬಾರಿ ಚುನಾವಣೆಯಲ್ಲಿ ನಿಖಿಲ್​ ಸೋತಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್​​ ತಲೆ ಕೊಟ್ಟ. ಸೋಲು, ಗೆಲುವು ಸಾಮಾನ್ಯ. ಆ ಬಗ್ಗೆ ಚಿಂತಿಸುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಾವ ಶಾಸಕರೂ ಜೆಡಿಎಸ್ ಬಿಡಲ್ಲ, ಪಕ್ಷ ಸಂಘಟನೆಗೆ ನಾನೂ ತೊಡಗಿಕೊಳ್ಳುವೆ: ಹೆಚ್‌ ಡಿ ದೇವೇಗೌಡ

“ಇತ್ತೀಚೆಗೆ ನಿಖಿಲ್ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...