‘ಅವರು ಹೆಚ್ಚು ಭ್ರಷ್ಟ್ರರು’ ಎನ್ನುವ ರಾಜಕಾರಣಿಗಳೇ ತುಂಬಿದ್ದಾರೆ: ಮುಖ್ಯಮಂತ್ರಿ ಚಂದ್ರು ಬೇಸರ

Date:

“ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ” ಎಂದು ಆಮ್‍‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಶುಕ್ರವಾರ ಎರಡು ಗುತ್ತಿಗೆ ಕಂಪನಿಗಳು ಹಾಗೂ ಗುತ್ತಿಗೆದಾರರಿಗೆ ಸಂಬಂಧಪಟ್ಟ ಜಾಗಗಳ ಮೇಲೆ ಐಟಿ ದಾಳಿ ನಡೆದಿದೆ. ಪ್ರತಿಯೊಂದು ಕಾಮಗಾರಿಯಲ್ಲೂ 40-50 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡರೆ ಉತ್ತಮ ಗುಣಮಟ್ಟದ ಕೆಲಸಗಳನ್ನು ಹೇಗೆ ಮಾಡಲು ಸಾಧ್ಯ? ಉದ್ಘಾಟನೆಗೊಂಡ ಮೂರು ದಿನದಲ್ಲೇ ರಸ್ತೆಗಳು ಗುಂಡಿ ಬೀಳುತ್ತವೆ. ಚರಂಡಿಗಳು ಬಾಯ್ಬಿಟ್ಟುಕೊಳ್ಳುತ್ತವೆ” ಎಂದು ಕಿಡಿಕಾರಿದರು.

“ಶಿಕ್ಷಣ ಕ್ರಾಂತಿ, ಆರೋಗ್ಯ ಕ್ರಾಂತಿಗಳು ದೆಹಲಿ, ಪಂಜಾಬ್‌ನಲ್ಲಿ ಆಗಿವೆ. ಆದರೆ ಇಲ್ಲಿ ಯಾಕೆ ಆಗುತ್ತಿಲ್ಲ? ಇಲ್ಲಿನ ಶೇ.60 ರಷ್ಟು ಶಾಸಕರು, ಸಂಸದರು ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳ ಮಾಲೀಕರಾಗಿದ್ದಾರೆ. ನೂರಾರು ಕೋಟಿ ಒಡೆಯರೇ ಇವತ್ತು ಶಾಸಕ, ಸಂಸದರಾಗಿದ್ದಾರೆ, ಮಂತ್ರಿಗಳಾಗಿದ್ದಾರೆ. ಹೀಗಿರುವಾಗ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳು ಬಡವರ ಹಾಗೂ ಮಧ್ಯಮ ವರ್ಗದವರ ಕೈಗೆಟುಕುವುದು ಹೇಗೆ?” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್‌ ಹರಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

ರಾಯಚೂರಿನಲ್ಲಿ ಏಮ್ಸ್‌ ಹೋರಾಟಕ್ಕೆ ಎಎಪಿ ಬೆಂಬಲ

“ರಾಜ್ಯಕ್ಕೆ ಹತ್ತಿ, ಚಿನ್ನ, ವಿದ್ಯುತ್‌, ಆಹಾರ ಎಲ್ಲವನ್ನೂ ಕೊಡುತ್ತಿರುವ ರಾಯಚೂರು ಜಿಲ್ಲೆ ಇಂದಿಗೂ ಹಿಂದುಳಿದ ಜಿಲ್ಲೆಯಾಗಿ ಉಳಿದಿರುವುದು ದುಃಖಕರವಾಗಿದೆ. ಬಸವರಾಜ್ ಕಳಸ ನೇತೃತ್ವದಲ್ಲಿ 500 ದಿನಗಳಿಂದ ಏಮ್ಸ್ ಗಾಗಿ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಗಮನಹರಿಸದಿರುವುದು ದುರಂತ. ರಾಯಚೂರಲ್ಲಿ ಏಮ್ಸ್ ನಿರ್ಮಾಣಕ್ಕೆ ಎಲ್ಲ ರೀತಿಯ ಘೋಷಣೆಗಳಾದರೂ ಕೂಡ ರಾಜಕಾರಣಿಗಳ ಒತ್ತಡದಿಂದ ಇದುವರೆಗೆ ಸಾಧ್ಯವಾಗಿಲ್ಲ. ಈ ಹೋರಾಟವನ್ನು ಎಎಪಿ ಬೆಂಬಲಿಸುತ್ತದೆ. ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಯಾಗಲೇಬೇಕು” ಎಂದು ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...