ಧರ್ಮಸ್ಥಳ ಪ್ರಕರಣ | ವಿಚಾರಣೆಗೆ ಹಾಜರಾಗಲು ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್

Date:

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳು ಮತ್ತು ಅಹಸ್ಯವಾಗಿ ಹೂತು ಹಾಕಲಾದ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಮುಂದುವರೆಸಿದೆ. ಸೌಜನ್ಯ ಪ್ರಕರಣದ ಹೊರಾಟದ ನೇತೃತ್ವವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ. ಹಾಗೂ ವಿಠಲ್ ಗೌಡ ಅವರಿಗೆ ನೋಟಿಸ್ ನೀಡಿದ್ದು, ಅಕ್ಟೋಬರ್ 27ರಂದು ವಿವಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸೌಜನ್ಯ ಪರ ಹೋರಾಟಗಾರರು ಸೋಮವಾರ (ಅ.27) ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ, ಅದೇ ದಿನ ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದೆ. ಆದಾಗ್ಯೂ, ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಎಸ್‌ಐಟಿ ನೀಡಿರುವ ನೋಟಿಸ್‌ನಲ್ಲಿ, “ವಿಚಾರಣೆಗೆ ತಪ್ಪಿಸಿಕೊಂಡಲ್ಲಿ, ಬಿಎನ್‌ಎಸ್ ಸೆಕ್ಷನ್ 35(3)ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸೂಚಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಟಿಸ್ ಮತ್ತು ಅಂದಿನ ಪ್ರತಿಭಟನೆ ಕುರಿತು ಮಾತನಾಡಿರುಚ ಹೋರಾಟಗಾರ ಜಯಂತ್ ಟಿ, “ಸೋಮವಾರ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪ್ರತಿಭಟನೆ ಆಯೋಜಿಸಿದ್ದೇವೆ. ಅದೇ ಸಮಯದಲ್ಲಿ‌ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ನೋಟಿಸ್ ನೀಡಿದೆ. ಇದು ಸರಿಯಲ್ಲ. ಏನೇ ಆದರೂ ನಮ್ಮ ಪ್ರತಿಭಟನೆ ನಡೆಯುತ್ತದೆ. ಪ್ರತಿಭಟನೆ ಮುಗಿಸಿ 12 ಗಂಟೆ ಬಳಿಕ ವಿಚಾರಣೆಗೆ ಹಾಜರಾಗಲು ಸಮಯ ಕೇಳುತ್ತೇವೆ” ಎಂದಿದ್ದಾರೆ.

ಇನ್ನು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ‘ಅಕ್ರಮವಾಗಿ ಮಾರಕಾಸ್ತ್ರ ಇಟ್ಟುಕೊಂಡಿದ್ದಾರೆ’ ಎಂಬ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ತಿಮರೋಡಿ ಅವರು ತಮ್ಮ ವಿರುದ್ಧ ‘ಮಾರಕಾಸ್ತ್ರ ಕಾಯ್ದೆ’ಯಡಿ ಬೆಳ್ತಂಡಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಅನ್ನು ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠವು, ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...