ವೈದ್ಯಕೀಯ ಉದ್ದೇಶಕ್ಕೆ ಪ್ರತ್ಯೇಕ ಬಿಪಿಎಲ್‌ ಕಾರ್ಡ್‌ ವಿತರಣೆಗೆ ಚಿಂತನೆ: ಸಚಿವ ಕೆ ಎಚ್‌ ಮುನಿಯಪ್ಪ

Date:

  • ‘ಆಂಧ್ರಪ್ರದೇಶ ಮಾದರಿ ಕುರಿತು ಮಾಹಿತಿ ಪಡೆಯಲಾಗಿದೆ’
  • ‘ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ನಿರ್ಧಾರ’

ಆಂಧ್ರಪ್ರದೇಶದಲ್ಲಿ ವೈದ್ಯಕೀಯ ಉದ್ದೇಶಕ್ಕೆ ಸೀಮಿತವಾಗಿ ಬಳಸಬಹುದಾದ ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ ಪ್ರಸ್ತಾವವಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, “ಬಿಪಿಎಲ್ ಪಡಿತರ ಚೀಟಿದಾರರಲ್ಲಿ ಕೆಲವರು ಆಹಾರ ಧಾನ್ಯ ಪಡೆಯದಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ವೈದ್ಯಕೀಯ ಸೇವೆಗಳಲ್ಲಿ ಶುಲ್ಕ ರಿಯಾಯ್ತಿ ಪಡೆಯುವುದಕ್ಕೆ ಮಾತ್ರ ಕೆಲವು ಕಾರ್ಡ್‌ಗಳು ಸೀಮಿತವಾಗಿವೆ” ಎಂದರು.

“ಆಂಧ್ರಪ್ರದೇಶ ಮಾದರಿ ಕುರಿತು ಮಾಹಿತಿ ಪಡೆಯಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂರು ಲಕ್ಷ ಅರ್ಜಿಗಳು ಬಾಕಿ

“ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ಕೋರಿರುವ ಮೂರು ಲಕ್ಷ ಅರ್ಜಿಗಳು ಬಾಕಿ ಇವೆ. ಅವುಗಳನ್ನು ಶೀಘ್ರದಲ್ಲಿ ಪರಿಶೀಲಿಸಿ, ಅರ್ಹರಿಗೆ ಪಡಿತರ ಚೀಟಿ ವಿತರಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

566 ಕೋಟಿ ರೂ. ಪಾವತಿ

“ಈವರೆಗೂ 27 ಜಿಲ್ಲೆಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ 566 ಕೋಟಿ ರೂ. ಮೊತ್ತವನ್ನು ಗ್ರಾಹಕರಿಗೆ ಪಾವತಿಸಲಾಗಿದೆ. ಚಿಕ್ಕಬಳ್ಳಾಪುರ, ಶಿವಮೊಗ್ಗ, ಉಡುಪಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಾಕಿ ಇದ್ದು, ವಾರದೊಳಗೆ ಎಲ್ಲರ ಖಾತೆಗಳಿಗೂ ಹಣ ವರ್ಗಾವಣೆ ಮಾಡಲಾಗುವುದು” ಎಂದರು.

“ಮಾಹಿತಿ ಕೊರತೆ ಇರುವ ಪಡಿತರ ಚೀಟಿದಾರರನ್ನು ಸಂಪರ್ಕಿಸಿ, ಅಗತ್ಯ ಮಾಹಿತಿ ಜೋಡಣೆ ಮಾಡಲಾಗುವುದು. ಎರಡರಿಂದ ಮೂರು ತಿಂಗಳಲ್ಲಿ ಅಂತಹ ಪಡಿತರ ಚೀಟಿದಾರರ ಖಾತೆಗೂ ಹಣ ವರ್ಗಾವಣೆ ಮಾಡಲಾಗುವುದು” ಎಂದು ವಿವರಿಸಿದರು.

30.90 ಲಕ್ಷ ಪಡಿತರ ಚೀಟಿಗೆ ಮಾಹಿತಿ ಜೋಡಣೆ ಇಲ್ಲ

“1.28 ಕೋಟಿ ಬಿಪಿಎಲ್ ಪಡಿತರ ಚೀಟಿಗಳು ರಾಜ್ಯದಲ್ಲಿವೆ. ಈ ಪೈಕಿ 97.27 ಲಕ್ಷ ಪಡಿತರ ಚೀಟಿದಾರರ ಆಧಾರ್, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಗಳನ್ನು ಜೋಡಣೆ ಮಾಡಲಾಗಿದೆ. 30.90 ಲಕ್ಷ ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ ಈ ಮಾಹಿತಿ ಜೋಡಣೆಯಾಗಿಲ್ಲ” ಎಂದು ಮುನಿಯಪ್ಪ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...