ತೀರ್ಥಹಳ್ಳಿ | ಬಿಜೆಪಿಯವರು ಹೇಳಿದಾಕ್ಷಣ ಎಲ್ಲವೂ ಸತ್ಯ ಆಗುವುದಿಲ್ಲ: ನಟ ಚೇತನ್ ಅಹಿಂಸಾ

Date:

ಬಿಜೆಪಿಯವರು ಹೇಳಿದಾಕ್ಷಣ ಎಲ್ಲವೂ ಸತ್ಯ ಆಗುವುದಿಲ್ಲ. ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ಮುಂದುವರೆಸಬೇಕು, ನ್ಯಾಯ ಸಿಗಬೇಕು. ನಾವು ಯಾವುದೇ ದೇವಸ್ಥಾನದ ವಿರುದ್ಧವೂ ಅಲ್ಲ ಧರ್ಮದ ವಿರುದ್ಧವೂ ಅಲ್ಲ. ಎಲ್ಲ ಧರ್ಮದವರೂ ನಮ್ಮ ಮೇಲೆ ನಂಬಿಕೆ ಇರುವವರು ನಮ್ಮ ಜೊತೆ ಸೇರಿದ್ದಾರೆ. ಧರ್ಮಸ್ಥಳ ಎಂಬ ಊರಿನಲ್ಲಿ ಆಗಿರುವ ಅಸಹಜ ಸಾವಿಗೆ ನ್ಯಾಯ ಸಿಗಬೇಕು ಎಂದು ಹೋರಾಟಗಾರ, ನಟ ಚೇತನ್ ಅಹಿಂಸಾ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಇದು ಕೇವಲ ಒಂದು ಧರ್ಮದ ಅಥವಾ ಒಂದು ಸಿದ್ಧಾಂತದ ಹೋರಾಟ ಅಲ್ಲ. ಕರ್ನಾಟಕದಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಎಸ್‌ಐಟಿಯವರು ಈ ತನಿಖೆಯಲ್ಲಿ ಉತ್ತಮವಾಗಿ ಕೆಲಸ ಮಾಡಬೇಕು. ಬಿಜೆಪಿಯವರು ಹೋರಾಟ ಮಾಡಲಿ” ಎಂದರು.

“ಬಿಜೆಪಿಯವರು ತಮ್ಮ ಅಸ್ತಿತ್ವವನ್ನು ಬೆಳೆಸಿಕೊಳ್ಳುವುದಕ್ಕಾಗಿ ಮತ್ತು ತಮ್ಮ ನಾಯಕತ್ವದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಿರಬಹುದು, ನೀವು ಪಾದಯಾತ್ರೆ ಯಾವುದು ಬೇಕಿದ್ದರೂ ಮಾಡಿ. ಅದಕ್ಕೆ ಪ್ರತಿಯೊಬ್ಬರಿಗೂ ಹಕ್ಕಿದೆ. ಆದರೆ ನ್ಯಾಯದ ಪರವಾಗಿ ಇದ್ದೀರ ಎಂಬುದು ಕಾಣುತ್ತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಗೆ ವೋಟ್ ಹಾಕಿರುವವರು, ಆರ್‌ಎಸ್‌ಎಸ್ ಪರವಾಗಿರುವವರು, ನಮ್ಮ ಸಮಾಜದ ಜತೆಗೆ ಇದ್ದಾರೆ. ಮುಖ್ಯವಾಗಿ ಧರ್ಮಸ್ಥಳ ಊರಿನಲ್ಲಿ ಆಗಿರುವ ಅನ್ಯಾಯದ ವಿರುದ್ಧ ನ್ಯಾಯ ಬೇಕಿದೆ. ಕರ್ನಾಟಕದಲ್ಲಿ ಒಕ್ಕೊರಲಿನಿಂದ ಈ ನ್ಯಾಯಕ್ಕಾಗಿ ಒಟ್ಟಾಗಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...