ಉಡುಪಿ | ಭತ್ತದ ಗದ್ದೆಯಲ್ಲಿ ನಾಟಿ ಮಾಡಿ ಸಂಭ್ರಮಿಸಿದ ತೊಟ್ಟಂ ಚರ್ಚಿನ ಯುವಜನತೆ

Date:

ಯುವ ಪೀಳಿಗೆಗೆ ಮಣ್ಣಿನ ಸಂಬಂಧವನ್ನು ಉಳಿಸಿಕೊಳ್ಳೂವುದರ ಜೊತೆಗೆ ಕೃಷಿ ಸಂಬಂಧಿತ ಕಲಿಕೆ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಭಾರತೀಯ ಕಥೊಲಿಕ ಯುವ ಸಂಚಾಲನ ಹಾಗೂ ಯುವ ವಿದ್ಯಾರ್ಥಿ ಸಂಚಾಲನದ ಯುವಕ ಯುವತಿಯರು ಬೈಲಕೆರೆಯ ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಭಾನುವಾರದ ರಜಾ ದಿನವನ್ನು ಕಳೆದರು.

ಸ್ವತಃ ಗದ್ದೆಗಿಳಿದು ಯುವಜನರೊಂದಿಗೆ ನೇಜಿ ನಾಟಿ ಮಾಡುವ ಮೂಲಕ ಚಾಲನೆ ನೀಡಿದ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಮಾತನಾಡಿ ರೈತರು ನಮ್ಮ ದೇಶದ ಬೆನ್ನೆಲುಬು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಇಂದು ಹಲವಾರು ಕಾರಣಗಳಿಗಾಗಿ ಕೃಷಿಯಿಂದ ರೈತರು ದೂರ ಸರಿಯುತ್ತಿದ್ದಾರೆ. ಅಧಿಕ ಕೂಲಿ, ಕಾರ್ಮಿಕರ ಕೊರತೆ ಇನ್ನಿತರ ಕಾರಣಗಳಿಂದಾಗಿ ಕೃಷಿ ಮಾಡಬೇಕಾಗಿದ್ದ ಗದ್ದೆಗಳು ಹಡಿಲು ಬೀಳುವ ಪರಿಸ್ಥಿತಿ ಉಂಟಾಗಿದೆ. ಯುವ ಜನರಿಗೆ ಕೃಷಿಯ ಬಗ್ಗೆ ಆಸಕ್ತಿ ಕಡಿಮೆಯಾಗಿದ್ದು ಅವರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾದ ಅಗತ್ಯತೆ ಇದೆ. ಕೃಷಿ ಪ್ರಧಾನವಾದ ನಮ್ಮ ದೇಶದ ಯುವ ಜನರು ಬೇಸಾಯದತ್ತ ಗಮನ ಹರಿಸುವ ನಿಟ್ಟಿನಲ್ಲಿ ನಮ್ಮ ಚರ್ಚಿನ ಯುವಜನರು ಹಾಗೂ ಮಹಿಳೆಯರು ಸೇರಿಕೊಂಡು ಗದ್ದೆಗಳನ್ನು ನಾಟಿ ಮಾಡುವ ಮೂಲಕ ಇದರಲ್ಲಿ ಬಂದಂತ ಫಲಸನ್ನು ಬಡಜನರಿಗೆ ನೀಡುವ ಉದ್ದೇಶವನ್ನು ಹೊಂದಲಾಗಿದೆ ಎಂದರು.

1006197044

ಗದ್ದೆಯ ಉಸ್ತುವಾರಿ ನೋಡಿಕೊಳ್ಳುವ ವಿಲ್ಮಾ ಫೆರ್ನಾಂಡಿಸ್ ಮಾತನಾಡಿ ಇಂದಿನ ಕಾಲದಲ್ಲಿ ಯುವ ಜನರಿಗೆ ಅಕ್ಕಿಯ ಮಹತ್ವವನ್ನು ತಿಳಿಸುವ ಅಗತ್ಯತೆ ಇದೆ. ಇಂದು ನಮಗೆ ಮೂರು ಹೊತ್ತಿನ ಅನ್ನಹೇಗೆ ಲಭಿಸುತ್ತದೆ ಎನ್ನುವ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಯುವಜನತೆ ಭತ್ತದ ಕೃಷಿ ಚಟುವಟಿಕೆಗಳನ್ನು ಅರ್ಥಮಾಡಿಕೊಂಡು ಆನಂದಿಸಬೇಕು, ಎನ್ನುವುದು ಇದರ ಮುಖ್ಯ ಉದ್ದೇಶವಾಗಿದೆ ಈ ಮೂಲಕ ಯುವ ಜನರು ಹೆಚ್ಚು ಹೆಚ್ಚು ಇಂತಹ ಕೃಷಿ ಕಾಯಕಗಳಲ್ಲಿ ತೊಡಗಿಕೊಳ್ಳುವಂತಾಗಿಲಿ ಎಂಬುದು ನಮ್ಮೆಲ್ಲರ ಬಯಕೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದ್ದೆಯಲ್ಲಿ ಇಳಿದು ಸಸಿ ನಾಟಿ ಮಾಡಿರುವುದು ನಮಗೆ ವಿಶೇಷ ಅನುಭವ ನೀಡಿದೆ. ಕೃಷಿಯಲ್ಲಿ ಕೆಲಸ ಮಾಡುವ ರೈತರ ಪರಿಶ್ರಮವನ್ನು ನೇರವಾಗಿ ನಾವು ಗದ್ದೆಗೆ ಇಳಿದು ನಾಟಿ ಮಾಡಿದಾಗ ತಿಳಿಯಿತು ಗದ್ದೆಯಲ್ಲಿ ನಾವೆಲ್ಲರೂ ಖುಷಿಯಿಂದ ಭತ್ತದ ಸಸಿಗಳನ್ನು ನೆಟ್ಟಿದ್ದೇವೆ. ಆಗ ನಮಗೆ ರೈತರು ಎಷ್ಟೊಂದು ಕಷ್ಟಪಡುತ್ತಾರೆ ಎಂಬುದು ಅರಿವಿಗೆ ಬಂದಿದೆ. ಆದರೆ ಈ ರೀತಿ ಗದ್ದೆ ನಾಟಿ ಮಾಡಿರುವುದು ಖುಷಿಯಾಗಿದೆ” ಎಂದು ಐಸಿವೈಎಮ್ ಅಧ್ಯಕ್ಷರಾದ ರಿಯೋನ್ ಮಾರ್ಟಿಸ್ ಹೇಳಿದರು.

ಈ ಸಂದರ್ಭದಲ್ಲಿ ಐಸಿವೈಎಮ್ ಮತ್ತು ವೈಸಿಎಸ್ ಸಚೇತಕಾರದ ಲೆಸ್ಲಿ ಆರೋಝಾ, ಲವೀನಾ ಆರೋಝಾ, ಆಲಿಸ್ ಮಿನೇಜಸ್, ಮಹಿಳಾ ಸದಸ್ಯರುಗಳಾದ ಸುನಿತಾ ಮಾರ್ಟಿಸ್, ಆಸಾ ಮಾರ್ಟಿಸ್, ಡೊರಿನ್ ಫೆರ್ನಾಂಡಿಸ್, ಜೊಸೇಫ್ ಪಿಂಟೊ ಹಾಗೂ ಇತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...