ವಿಜಯಪುರ | ಪಿಡಿಒಗೆ ಗನ್‌ ತೋರಿಸಿ ಧಮ್ಕಿ; ಗ್ರಾ.ಪಂ. ಸದಸ್ಯನ ವಜಾಗೆ ಆಗ್ರಹ

Date:

ಪಂಚಾಯತಿ ಗನ್‌ ತೋರಿಸಿ ಪಿಡಿಒಗೆ ಧಮ್ಕಿ ಹಾಕಿದ್ದ ಗ್ರಾಮ ಪಂಚಾಯತಿ ಸದಸ್ಯನನ್ನು ವಜಾಗೊಳಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಪಂಚಾಯತಿ ಎದುರು ಜಿಲ್ಲೆಯ ಪಿಡಿಒಗಳು ಪ್ರತಿಭಟನೆ ನಡೆಸಿದ್ದಾರೆ. ಪಂಚಾಯತಿ ಸಿಇಒಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಅ.18ರಂದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿ ಪಿಡಿಒ ವಿಶ್ವನಾಥ ರಾಠೋಡ್​ ಅವರಿಗೆ ಸದಸ್ಯ ಜಾಕೀರ್ ಮನಿಯಾರ್ ಎಂಬವರು ಗನ್ ತೋರಿಸಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಗಾ.ಪಂ ಸದಸ್ಯ ಜಾಕೀರ್‌ ಮನಿಯಾರ್‌ ವಿರುದ್ಧ ಚಡಚಣ ಪೊಲೀಸ್‌ ಠಾಣೆಯಲ್ಲಿ ಪಿಡಿಒ ರಾಠೋಡ್‌ ದೂರು ದಾಖಲಿಸಿದ್ದರು.

ಹಣಕಾಸಿನ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದ ಹಿನ್ನಲೆ, ಪರವಾನಿಗೆ ಹೊಂದಿದ ಪಿಸ್ತೂಲ್ ಸಹಿತ ಗ್ರಾಮಪಂಚಾಯತಿಗೆ ಆಗಮಿಸಿದ್ದ ಸದಸ್ಯ ಜಾಕೀರ್ ಮನಿಯಾರ್, ಪಿಡಿಓಗೆ ಬೆದರಿಕೆ ಹಾಕಿದ್ದ. ಬೆದರಿಕೆವೊಡ್ಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...