ಬೆಳಗಾವಿ | ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ; ಮೂವರ ಬಂಧನ

Date:

ಪ್ರೇಮಿಗಳ ದಿನದಂದು (ಫೆಬ್ರವರಿ 14) ಬೆಳಗಾವಿಯ ರಾಯಬಾಗದಲ್ಲಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಗಿಗೆ ಬಂದಿದೆ. ಪ್ರಕರಣದಲ್ಲಿ ರಾಯಬಾಗ ತಾಲೂಕಿನ ಹಾಲಪ್ಪ ಸುರೇಶ ಬಬಲೇಶ್ವರ, ಹಾಲಪ್ಪ ಗಿಡ್ಡವ್ವಗೋಳ ಮತ್ತು ಗೋಪಾಲ್ ಗಾಡಿವಡ್ಡರ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ದೇವಸ್ಥಾನಕ್ಕೆ ತೆರಳುತ್ತಿದ್ದ ಬಾಲಕಿಯರನ್ನು ಅವರಿಗೆ ಪರಿಚಯವಿದ್ದ ಆರೋಪಿಗಳು ಕಾರಿನಲ್ಲಿ ಹಿಂಬಾಲಿಸಿದ್ದಾರೆ. ದೇವಸ್ಥಾನದ ಬಳಿ ಆರೋಪಿಗಳು ಬಾಲಕಿಯರನ್ನು ಕಾರಿನಲ್ಲಿ ಕೂರಿಸಿಕೊಂಡು ಮುಗಳಖೋಡ ಗ್ರಾಮದ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಘಟನೆಯ ಬಗ್ಗೆ ಪೊಲೀಸರಿಗೆ ಅಥವಾ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ,  ಸಂತ್ರಸ್ತೆಯರನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ. ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ರಾಯಬಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...