ತುಮಕೂರು | ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು; ವೈದ್ಯೆ ಅಮಾನತು

Date:

ಸಂತಾನಹರಣ, ಗರ್ಭಕೋಶ ಚಿಕಿತ್ಸೆ ಹಾಗೂ ಸಿಸರಿಯನ್‌ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ನಡೆದಿತ್ತು. ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ವೈದ್ಯೆ ಹಾಗೂ ಇಬ್ಬರು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ.

ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಫೆಬ್ರವರಿ 22 ರಂದು ಒಟ್ಟು ಏಳು ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಈ ಪೈಕಿ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. ಅವರಲ್ಲಿ, ಸಂತಾನಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಅನಿತಾ ಎಂಬವರು ಅಂದೇ ಸಾವನ್ನಪ್ಪಿದ್ದರು.

ರಾಜವಂತಿ ಮೂಲದ ಅಂಜಲಿ ಎಂಬವರಿಗೆ ಸಿಸರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ, ಆಕೆಯನ್ನು ಬೆಂಗಳೂರಿಗೆ ರವಾನಿಸಲಾಗಿತ್ತು. ಆದರೆ, ಆಕೆ ಫೆ.24ರಂದು ಮೃತಪಟ್ಟಿದ್ದರು. ಬ್ಯಾಡನೂರು ಗ್ರಾಮದ ನರಸಮ್ಮ ಎಂಬವರಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಫೆ.25ರಂದು ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯೆರ ಸಾವಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ. ಪೂಜಾ, ಶಸ್ತ್ರಚಿಕಿತ್ಸೆ ಘಟಕದ ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಲಾಗಿದೆ. ಹೀಗಾಗಿ, ಮೂವರನ್ನೂ ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿತನದ ಆರೋಪದ ಮೇಲೆ ಅಮಾನತು ಮಾಡಿ ತುಮಕೂರು ಜಿಲ್ಲಾ ವೈದ್ಯಾಧಿಕಾರಿ (ಡಿಎಚ್‌ಒ) ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...