ಹಾಸನ l ಹೋಳಿ ಆಚರಣೆ ವೇಳೆ ಹಲ್ಲೆ ಪ್ರಕರಣ; ಮೂವರ ಬಂಧನ

Date:

ಹೋಳಿ ಸಂಭ್ರಮ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಹಲ್ಲೆ ನಡೆಸಿದ್ದ, ಮೂವರ ಯುವಕರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಲೋಹಿತ್, ಋತ್ವಿಕ್ ಮತ್ತು ಆಕಾಶ್ ಬಂಧಿತ ಆರೋಪಿಗಳು, ಮಾ.8 ರಂದು ನಗರದ ಖಾಸಗಿ ಹೋಟೆಲ್‌ನಲ್ಲಿ ಹೋಳಿ ಹಬ್ಬದ ಆಚರಣೆ ನಡೆಸುತ್ತಿರುವ ವೇಳೆ ಏಕಾಏಕಿ ಗಲಾಟೆ ಮಾಡಿಕೊಂಡು ಪ್ರಜ್ವಲ್ ಎಂಬಾತನ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಕೂಡಲೇ ಪ್ರಜ್ವಲ್‌ನನ್ನು ನಗರದ ಹಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಹಲ್ಲೆಗೊಳಗಾದ ಪ್ರಜ್ವಲ್ ನನ್ನು ನೋಡಲು ಬಂದಿದ್ದ ಚಂದನ್ ಎಂಬಾತನ ಮೇಲೂ ಇದೇ ಗುಂಪು ಹಲ್ಲೆ ಮಾಡಿ, ಅರೆ ಬೆತ್ತಲುಗೊಳಿಸಿ ಕೈಯಿಂದ ಥಳಿಸಿ, ಕಾಲಿನಿಂದ ಹೊದ್ದು ರೌಡಿಗಳಂತೆ ವರ್ತನೆ ತೋರಿದ್ದರು. ಚಂದನ್ ಎಂಬ ವ್ಯಕ್ತಿ, ಬಿಟ್ಟುಬಿಡಿ ಎಂದು ಕೇಳಿಕೊಂಡರೂ ಬಿಡದೆ ಹಲ್ಲೆ ನಡೆಸಿದ್ದರು. ಈ ವಿಚಾರವಾಗಿ ದೃಶ್ಯಾವಳಿ ಎಲ್ಲೆಡೆ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ?ಹಾಸನ | ಗಾಳಿ ಸಹಿತ ಮಳೆ; ಎಲ್ಲೆಲ್ಲಿ ಎಷ್ಟೆಷ್ಟು?

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನಗರ ಠಾಣೆ ಪೊಲೀಸರು, ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂದಿತರೆಲ್ಲರೂ ನಗರದ ಹೊರ ವಲಯದ ಚಿಕ್ಕಹೊನ್ನೇನಹಳ್ಳಿಯವರು ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಲು ಏನು ಕಾರಣವೆಂದು ಇನ್ನು ತಿಳಿದುಬಂದಿಲ್ಲ, ಪೊಲೀಸ್ ತನಿಖೆ ಮುಗಿದ ನಂತರ ತಿಳಿಯುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...