ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ಅವರು 15 ನೂತನ ಅಶ್ವಮೇಧ ಬಸ್‌ಗಳಿಗೆ ಚಾಲನೆ ನೀಡಿದರು. ಬಳಿಕ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ನಿಲ್ದಾಣದಲ್ಲಿ ಒಂದು ಸುತ್ತು ಬಸ್ ಓಡಿಸುವ ಮೂಲಕ ಎಲ್ಲರ ಗಮನ ಸೆಳೆದರು.
“ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದೆ. ಅದೇ ರೀತಿ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಹೊಸ ಬಸ್‌ಗಳನ್ನು ಸಂಚಾರಕ್ಕೆ ನಿಯೋಜಿಸಲಾಗುತ್ತಿದೆ” ಎಂದು ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು
“ನೂತನವಾಗಿ ಚಾಲನೆ ದೊರೆತ 15 ಅಶ್ವಮೇಧ ಬಸ್‌ಗಳ ಪೈಕಿ 8 ಬಸ್‌ಗಳನ್ನು ಬೆಂಗಳೂರು-ತುಮಕೂರು ಮಾರ್ಗಕ್ಕೆ ಹಾಗೂ 7 ಬಸ್‌ಗಳನ್ನು ವೇಗದೂತ ಮಾರ್ಗದಲ್ಲಿ ಓಡಿಸಲಾಗುತ್ತದೆ” ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ
ಸಹಕಾರ ಕೆ ಎನ್ ರಾಜಣ್ಣ, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್, ಶಾಸಕ ಜ್ಯೋತಿಗಣೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ, ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಅಡಿಷನಲ್ ಎಸ್‌ಪಿ ಮರಿಯಪ್ಪ, ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಕಚೇರಿಯ ವೀಣಾ ದೇಸಾಯಿ, ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಸಿದ್ದೇಶ್, ಡಿವೈಎಸ್‌ಪಿ ಚಂದ್ರಶೇಖರ್ ಸೇರಿದಂತೆ ಇತರರು ಇದ್ದರು.




