ತುರುವೇಕೆರೆ | ಗಾಂಜಾ ಮಾರಾಟ, ಸೇವನೆ : ಮೂವರ ಬಂಧನ

Date:

ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ತುರುವೇಕೆರೆ  ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21), ತಿಪಟೂರು ಟೌನ್ ನಿವಾಸಿ ಪಿ.ರಾಕೇಶ್ (25), ಖಾಸಗೀ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರು ಹೆಬ್ಬಾಳದ ಸುಮಂಗಲಿ ಸೇವಾಶ್ರಮದ ನಿವಾಸಿ ಆರ್. ತ್ರಿನೇಶ್ (22) ಎಂದು ಹೇಳಲಾಗಿದೆ.

ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರ ಫ್ಯಾಕ್ಟರಿಯ ಬಳಿ ಇರುವ ನೀಲಗಿರಿ ತೋಪಿನಲ್ಲಿ ಆರೋಪಿ ಅಭಿಷೇಕ್ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದಾನೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ತುರುವೇಕೆರೆ ಸಿಪಿಐ ಲೋಹಿತ್ ಮತ್ತು ದಂಡಿನಶಿವರ ಪಿಎಸ್ಐ ಕೆ.ವಿ.ಮೂರ್ತಿ ನೇತೃತ್ವದ ಪೊಲೀಸ್ ತಂಡ ಆರೋಪಿ ಅಭಿಷೇಕ್ ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವನಲ್ಲಿ ಸುಮಾರು 615 ಗ್ರಾಂ ಗಾಂಜಾ ಸೊಪ್ಪು ಪತ್ತೆಯಾಯಿತು. ಆರೋಪಿ ಅಭಿಷೇಕ್‌ ನನ್ನು ಹೆಚ್ಚು ವಿಚಾರಣೆ ಮಾಡಿದ ವೇಳೆ ರಾಕೇಶ್ ಮತ್ತು ತ್ರಿನೇಶ್ ಎಂಬುವವರು ತಿಪಟೂರು ಮತ್ತು ಬೆಂಗಳೂರಿನಿಂದ ತಂದು ತುರುವೇಕೆರೆಗೆ ಗಾಂಜಾ ಸೊಪ್ಪು ಮಾರುತ್ತಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ. ಗಾಂಜಾ ಸೊಪ್ಪು ಮಾರಿದ್ದ ರಾಕೇಶ್‌ ಮತ್ತು ತ್ರಿನೇಶ್‌ ನನ್ನು ಪೊಲೀಸರು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...