ಹುಬ್ಬಳ್ಳಿ | ಹುಲಿ ಉಗುರು ಪ್ರಕರಣ: ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

Date:

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ವಾಣಿಜ್ಯನಗರಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇಲ್ಲಿನ ಕೋಯಿನ್ ರಸ್ತೆಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ ಮತ್ತು ಅಯ್ಯಪ್ಪ ಶಿರಕೋಳ ಅವರ ಮನೆ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಎರಡು ಹುಲಿ ಉಗುರಿನ ಪೆಂಡೆಂಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಲಯ ಅರಣ್ಯಧಿಕಾರಿ ಆರ್. ಎಸ್. ಉಪ್ಪಾರ ನೇತೃತ್ವದ ತಂಡ ಶೋಧನಡೆಸಿದೆ.

ಜಾತ್ರೆಯಲ್ಲಿ ಖರೀದಿಸಿದ್ದ ಪ್ಲಾಸ್ಟಿಕ್‌ ಹುಲಿ ಉಗುರನ್ನ ಬಂಗಾರದ ಸರಕ್ಕೆ ಹಾಕಿಕೊಂಡಿದ್ದೆ. ಎರಡು ತಿಂಗಳ ಹಿಂದೆ ಅದು ತುಂಡಾಗಿದ್ದರಿಂದ ತೆಗೆದಿದ್ದೇವೆ ಎಂದು ಉದ್ಯಮಿ ವಜ್ರಮುನಿ ಶಿರಕೋಳ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಉದ್ಯಮಿ ಹುಲಿ ಉಗುರು ಧರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...