ಹುಲಿ ಉಗುರು ಪ್ರಕರಣ: ಅರಣ್ಯಾಧಿಕಾರಿಗಳು ಮೊದಲು ಕಾನೂನು ತಿಳಿದುಕೊಳ್ಳಲಿ: ಶಾಸಕ ಎ ಎಸ್ ಪೊನ್ನಣ್ಣ

Date:

ಪ್ರಾಣಿಗಳನ್ನು ಬೇಟೆಯಾಡಿ ಅದರ ಉತ್ಪನ್ನಗಳನ್ನು ಬಳಸಿದರೆ ಮಾತ್ರ ಅಪರಾಧವೇ ಹೊರತು, ಪೂರ್ವಜರಿಂದ ಬಂದ ಉತ್ಪನ್ನಗಳ ಬಳಕೆ ಅಪರಾಧವಲ್ಲ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣನವರು ಸ್ಪಷ್ಟಪಡಿಸಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ್ದು, “ನಟ ಜಗ್ಗೇಶ್ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಮಾಡಿದ್ದು, ತಡೆಯಾಜ್ಞೆ ಕೂಡ ನೀಡಿದೆ.
ಪರಂಪರಾಗರವಾಗಿ ಬಳಸುತ್ತಿದ್ದ ವಸ್ತುಗಳ ಮೇಲೆ ಪ್ರಕರಣ ದಾಖಲು ಸರಿಯಲ್ಲ” ಎಂದು ಪೊನ್ನಣ್ಣ ಹೇಳಿದ್ದಾರೆ.

“ಅರಣ್ಯ ಅಧಿಕಾರಿಗಳು ಮೊದಲು ಕಾನೂನು ತಿಳಿದುಕೊಳ್ಳಲಿ. ಸರ್ಕಾರ ಅರಣ್ಯಾಧಿಕಾರಿಗಳಿಗೆ ಸರಿಯಾದ ನಿರ್ದೇಶನ ನೀಡಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಿಚಾರ ಸಂಬಂಧ ಕಾನೂನಿನಲ್ಲಿ ರಕ್ಷಣೆ ಇದೆ.‌ ಅರಣ್ಯ ಅಧಿಕಾರಿಗಳಿಗೆ ಎಫ್‌ಐಆರ್ ಮಾಡುವ ಅಧಿಕಾರ ಇಲ್ಲ. ಕಾನೂನು ವ್ಯಾಪ್ತಿ ಮೀರಿ ಎಫ್‌ಐಆರ್ ಮಾಡಲಾಗುತ್ತಿದೆ. ಕೊಡಗಿನಲ್ಲಿ ಪೂರ್ವಜರ ಕಾಲದಿಂದಲೂ ಪಾರಂಪರಿಕವಾಗಿ ವನ್ಯ ಜೀವಿಗಳ ವಸ್ತುಗಳನ್ನು ಬಳಸಲಾಗುತ್ತಿದೆ. ಇದು ಹೇಗೆ ಅಪರಾಧವಾಗುತ್ತೆ?” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

“ಈ ಸಂಬಂಧ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಹಾಗೆಯೇ ಈ ಪ್ರಕರಣಕ್ಕೆ ರಾಜ್ಯ ಸರ್ಕಾರದ ಮೂಲಕ ರಿಲೀಫ್ ನೀಡಲಾಗುವುದು” ಎಂದು ಹೇಳಿದ್ದಾರೆ. ‌

ಈ ವೇಳೆ ಕಾಂಗ್ರೆಸ್ ಮುಖಂಡರುಗಳಾದ ವೀಣಾಚಯ್ಯ, ಧರ್ಮಜಾ ಉತ್ತಪ್ಪ, ಇಸ್ಮಾಯಿಲ್, ಟಿ ಪಿ ರಮೇಶ್, ಕೊಲ್ಯದ ಗಿರೀಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...