ತಿಪಟೂರು | ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಟೂಡ ಶಶಿಧರ್ ಒತ್ತಾಯ

Date:

ಬಹುಸಂಸ್ಕೃತಿಯ ನಮ್ಮ ದೇಶದ ಸಂವಿಧಾನ ಜನಜೀವನ ವಿಧಾನದ ರಕ್ಷಣೆ ಮತ್ತು ಅದರ ಬೆಳವಣಿಗೆ ಆಧಾರದಲ್ಲಿ ರೂಪಿತಗೊಂಡಿದೆ. ಕಾಲದ ಅಗತ್ಯಾನುಸಾರ ಕೆಲ ಪ್ರಗತಿ ಪರ ಮತ್ತು ಜೀವಪರ ಹೊಸತು ಅಂಶಗಳನ್ನು ತನ್ನೊಳಕ್ಕೆ ಸೇರಿಸಿಕೊಳ್ಳುವ ಶಕ್ತಿ ಕೂಡ ಅದಕ್ಕಿದೆ. ಹೀಗಾಗಿ ಹಲವು ಪ್ರಮುಖ ಸಂದರ್ಭದಲ್ಲಿ ಕಾಲದ ಅಗತ್ಯಾನುಸಾರ ತಿದ್ದುಪಡಿ ಕೂಡ ಸಾಧ್ಯವಾಗಿದೆ. ಎಲ್ಲದಕ್ಕೂ ಮುಖ್ಯವಾಗಿ ವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ ಮತ್ತು ವಿಚಾರ ಸ್ವಾತಂತ್ರ್ಯ ಸಂವಿಧಾನದ ಮೂಲ ಧರ್ಮ. ಹೀಗಾಗಿ ಸಂವಿಧಾನ ನಮ್ಮ ದೇಶದ ರಾಜಧರ್ಮವೇ ಆಗಿದೆ. ಹಾಗಾಗಿ ಇದರ ಮೇಲೆ ದುರಾಕ್ರಮಣದ ನೀತಿಯನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಟೂಡ ಶಶಿಧರ್ ತಿಳಿಸಿದ್ದಾರೆ.

ಸಂವಿಧಾನ ಬದಲಾವಣೆ ಮಾಡುವ ಮಾತುಗಳ ಹುನ್ನಾರದ ಹಿಂದಿರುವ ಮೂಲ ಪ್ರೇರಣಾ ಶಕ್ತಿ ನಿರಂಕುಶ ಪ್ರಭುತ್ವದ ಪ್ರತಿಷ್ಠಾನ ಮಾಡುವ ಸಂಕಲ್ಪ ತೊಟ್ಟ ಸಂಘ ಪರಿವಾರದ್ದು. ಅದರ ರಾಜಕೀಯ ಘಟಕ ಭಾಜಪ ಇದನ್ನು ಕಾರ್ಯರೂಪಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಸಂವಿಧಾನ ಕರಡು ಸಮಿತಿ ಅಧ್ಯಕ್ಷ, ಸಂವಿಧಾನ ಶಿಲ್ಪಿ ಎಂದೇ ಹೆಸರಾದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಕೇಂದ್ರವಾಗಿ ಇಟ್ಟುಕೊಂಡು ಅವರ ಅವಮಾನಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಸಂವಿಧಾನದ 75ನೇ ವರ್ಷಾಚರಣೆ ಪ್ರಯುಕ್ತ ನಡೆದ ಚರ್ಚೆಯ ದಿಕ್ಕು ತಪ್ಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸದನದಲ್ಲಿ ಆಡಿದ “ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್… ಎನ್ನುತ್ತಿರುವುದು ಇತ್ತೀಚೆಗೆ ಇದೊಂದು ವ್ಯಸನದಂತಾಗಿದೆ” ಎನ್ನುವರ್ಥದ ಮಾತು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಥ ಅನರ್ಥದ ಮತ್ತು ದೇಶವನ್ನು ಆಂತರಿಕ ಗಂಡಾಂತರಕ್ಕೆ ಈಡುಮಾಡುವ, ಸಾಮಾಜಿಕ ಮೌಲ್ಯಗಳನ್ನು ನಾಶಪಡಿಸುವ ದೇಶವಿರೋಧಿಯಾದ ಅಪಾಯಕಾರಿ ಮಾತುಗಳನ್ನು ಆಡಿದ ಗೃಹ ಸಚಿವ ಅಮಿತ್ ಷಾ ಅವರನ್ನು ಕೂಡಲೇ ಕೇಂದ್ರ ಸಂಪುಟದಿಂದ ಕೈಬಿಡಬೇಕು. ಇಲ್ಲವೇ ಷಾ ಅವರೇ ರಾಜೀನಾಮೆ ನೀಡಬೇಕು ಎಂದು ಟೂಡ ಶಶಿಧರ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಾಯಕರಾದ  ಮಲ್ಲಿಕಾರ್ಜುನ ಖರ್ಗೆ,  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ರಮವಾಗಿ ರಾಜ್ಯಸಭಾ ಮತ್ತು ಲೋಕಸಭಾ ಎರಡೂ ಸದನಗಳಲ್ಲಿ ಕ್ರೋನೀ ಕ್ಯಾಪಿಟಲಿಸ್ಟ್ ಶಕ್ತಿಗಳ ವಿರುದ್ಧ ಮಹತ್ವದ ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಕ್ರೋನಿ ಕ್ಯಾಪಿಟಲಿಸ್ಟ್ ಅದಾನಿ ಸಮೂಹ ಅಮೆರಿಕದಲ್ಲಿ ಕೂಡ ದೇಶದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಅಲ್ಲಿನ ನ್ಯಾಯಾಲಯದಲ್ಲಿ ಇವರ ವಿರುದ್ಧ ದಾವೆಗಳು ನಡೆಯುತ್ತಿವೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.  ಈ ಕ್ರೋನಿ ಕ್ಯಾಪಿಟಲಿಸ್ಟ್ ರ ರಕ್ಷಣೆ ಪ್ರಧಾನಿ ಮೋದಿ ಅವರಿಂದ ನಡೆಯುತ್ತಿದೆಯೇ ಎಂಬ ಅನುಮಾನಗಳು ಇರುವುದರಿಂದ ತನಿಖೆಗೆ ಮತ್ತು ಸ್ಪಷ್ಟನೆಗೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ ಕೇಂದ್ರವನ್ನು ಒತ್ತಾಯಿಸುತ್ತಿದೆ. ಇದರಿಂದ ಪ್ರಧಾನಿ ಮೋದಿ ದೊಡ್ಡ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎನ್ ಡಿಎ ಸರ್ಕಾರ ತತ್ತರಿಸುವಂತಾಗಿದೆ ಎಂದು ಡೂಟ ಶಶಿಧರ್ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಬೆಲೆ ಏರಿಕೆ, ಜಿಎಸ್ ಟಿ, ಜಾತಿ ಜನಗಣತಿ ಮತ್ತಿತರ ಜನಸಾಮಾನ್ಯರ ಪರ ಸಮಗ್ರ ಕಾಳಜಿಗಳನ್ನು ಸದನದಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷದ ನಾಯಕರು, ಸಂಸದರು ಎತ್ತುತ್ತಿರುವುದರಿಂದ ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ. ಜನರ ದೃಷ್ಟಿಯಲ್ಲಿ ಕೇಂದ್ರದ ನೈತಿಕತೆ ಕುಸಿಯತೊಡಗಿದೆ. ಇವೆಲ್ಲದರಿಂದ ಬಚಾವಾಗಲು ಜನರ ಚಿತ್ತ ಚದುರಿಸುವ ಪ್ರಯತ್ನಗಳನ್ನು ಭಾಜಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಇಂಥ ಜನವಿರೋಧಿ, ಕೋಮುವಾದಿ ಭಾಜಪ ನೇತೃತ್ವದ ಸರ್ಕಾರದ ಸಂವಿಧಾನ ವಿರೋಧಿ ನೀತಿಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದಲ್ಲೂ ಕೂಡ ಈ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಆಡಬಾರದ ಸ್ತ್ರೀ ನಿಂದನಾ ಪದಗಳನ್ನು ಬಳಸಿ ಅನಗತ್ಯ ವಿವಾದ ಸೃಷ್ಟಿಸಿದ ಭಾಜಪ ಎಂಎಲ್ ಸಿ  ಸಿ ಟಿ ರವಿ ಅವರ ನಡೆ ಅಕ್ಷಮ್ಯ ಎಂದು ಹೇಳಿದ್ದಾರೆ.

ಸ್ತ್ರೀ ಗೌರವ, ಸಮಾನತೆ ಮತ್ತು ಸದಾಚಾರ, ಸನ್ನಡೆಯ ಬಸವಾದಿ ಶರಣ ಪರಂಪರೆಯನ್ನು ಪ್ರಜ್ಞಾಪೂರ್ವಕವಾಗಿ ಅವಮಾನಿಸುವ, ಅದಕ್ಕೆ ಚ್ಯುತಿ ತರುವ ನಡೆ ಇದಾಗಿದೆ. ಶರಣ ಪರಂಪರೆಯ ಅಕ್ಕ ಮಹಾದೇವಿ, ಗಂಗಾಂಬಿಕೆ, ನೀಲಾಂಬಿಕೆ, ಸೂಳೆ ಸಂಕವ್ವೆ, ಆಧುನಿಕ ಯುಗದ ಕಿತ್ತೂರು ಚೆನ್ನಮ್ಮ, ಬೆಳವಡಿ ಮಲ್ಲಮ್ಮ ಮತ್ತು ಚಾಂದ್ ಬೀಬಿ ಅವರಂಥ ಮಹಾ ವೀರವನಿತೆಯರ ನೆಲದಲ್ಲಿ ನಿಂತು ಮಹಿಳೆಯರ ಮಾನ, ಸಮ್ಮಾನಗಳ ಜನಸಂಸ್ಕೃತಿಗೆ ಅವಹೇಳನ ಮಾಡುವ ದುಷ್ಟ ಸಂಕಲ್ಪ ಇದಾಗಿದೆ. ಬಸವೇಶರ ಸಂಸ್ಕೃತಿ ಮತ್ತು ಲಿಂಗಾಯತ ನಂಬಿಕೆಗಳ ಮೇಲೆ ನಡೆದ ಹಲ್ಲೆ ಇದಾಗಿದೆ. ಇದು ಖಂಡನೀಯ.

ಬಸವೇಶರ ಸಮಾನತೆ, ಸಕಲ ಜೀವಾತ್ಮರಿಗೆ ಲೇಸ ಬಯಸುವ ಆಶಯಗಳನ್ನು ಸಂವಿಧಾನದ ಆಶಯಗಳಿಗೆ ಉಸಿರಾಗಿಸಿದ ಅಂಬೇಡ್ಕರ್ ಆಧುನಿಕ ನಿಜ ಶರಣ. ಶರಣ ಸಂಸ್ಕೃತಿ ಎತ್ತಿಹಿಡಿಯುವ ಕೆಲಸವನ್ನು ಆಧುನಿಕ ಕಾಲದಲ್ಲಿ ಮಾಡಿದ ಅಂಬೇಡ್ಕರ್ ನಮ್ಮವರು. ನಮ್ಮ ಹಿರೀಕರು. ಅವರಿಗೆ ಮಾಡುವ ಅವಮಾನ ಶರಣ ಸಂಸ್ಕೃತಿಯ ಅವಮಾನ, ಸಹಬಾಳ್ವೆಯ ಸಾಮರಸ್ಯ ಜನಸಂಸ್ಕೃತಿಯ ಅವಮಾನ ಎನ್ನುವುದು ನನ್ನ ಭಾವನೆ ಎಂದು ಟೂಡ ಶಶಿಧರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...