ತಿಪಟೂರು | ಕೆ. ಜಿ. ಉಂಡೆ ಕೊಬ್ಬರಿಗೆ 1 ರೂ ಬೆಂಬಲ ಬೆಲೆ ಹೆಚ್ಚಳ : ಜ. 23 ರಂದು ರೈತರಿಂದ ಉಪವಾಸ ಸತ್ಯಾಗ್ರಹ

Date:

ಕೇಂದ್ರ ಸರ್ಕಾರ ಉಂಡೆ ಕೊಬ್ಬರಿಗೆ ಬೆಂಬಲ ಬೆಲೆಯಾಗಿ ಕೆ.ಜಿಗೆ ಒಂದು ರೂಪಾಯಿ ಹೆಚ್ಚಳ ಮಾಡಿ ರೈತರಿಗೆ ಅವಮಾನಗೊಳಿಸಿದೆ. ಇದರ ವಿರುದ್ಧ ಜನವರಿ 23 ರಂದು ತಿಪಟೂರು ಆಡಳಿತ ಸೌಧದದ ಎದುರು ಉಪವಾಸ ಸತ್ಯಾಗ್ರಹ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡ ಜಯಾನಂದಯ್ಯ ತಿಳಿಸಿದ್ದಾರೆ.

ತಿಪಟೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಉಂಡೆ ಕೊಬ್ಬರಿಗೆ  ಉತ್ಪಾದನಾ ವೆಚ್ಚ 18638  ತಗಲಿದೆ. ಇದರ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿಬೇಕು ಎಂದು ರೈತರು ನಿರಂತರವಾಗಿ ಒತ್ತಾಯಿಸುತ್ತಾ ಬಂದರು, ಈ ಬೇಡಿಕೆ ಪರಿಗಣಿಸದೆ 2024 – 25 ಉಂಡೆ ಕೊಬ್ಬರಿ ಬೆಂಬಲ ಬೆಲೆಯನ್ನು 1  ಕೆ. ಜಿಗೆ ಕೇವಲ 1 ರೂಪಾಯಿ ಹೆಚ್ಚಿಸಿ ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದೆ ಎಂದು ಆರೋಪಿಸಿದರು.

1000935019

 ರೈತ ಮುಖಂಡ  ತಿಮ್ಲಾಪುರ ದೇವರಾಜ್ ಮಾತನಾಡಿ ರೈತರು ಬೆಳೆಯುವ ಬೆಳೆಗಳ ಉತ್ಪಾದನಾ ವೆಚ್ಚ ದುಪ್ಪಟ್ಟಾಗುತ್ತಿದೆ. ಉತ್ಪಾದನಾ ವೆಚ್ಚಕ್ಕೆ ಆಧಾರವಾಗಿ ಬೆಂಬಲ ಬೆಲೆ ನೀಡುತ್ತಿಲ್ಲ. ಸರ್ಕಾರ ಬಹು ಸಂಖ್ಯಾತರ ಹಿತ ಮರೆತು, ಕಾರ್ಪೋರೇಟ್ ಶಕ್ತಿಗಳ ಪರ ಕೆಲಸ ಮಾಡುತ್ತಿದೆ. ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ನೀಡದೆ 1 ರೂಪಾಯಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ರೈತರನ್ನು ಕೇಂದ್ರ ಸರ್ಕಾರ ಅಣಕಿಸಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳೆ ಕಾವಲು ಸಮಿತಿ ಮುಖಂಡ ಬಿಳಿಗೆರೆ ಪಾಳ್ಯ ನಾಗೇಶ್ ಮಾತನಾಡಿ ದೇಶದಲ್ಲಿ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಯುಕ್ತ ಹೋರಾಟ ನಾಯಕ ಜಗಜೀತ್ ಸಿಂಗ್ ದಲೈವಾಲ ಹಾಗೂ ರೈತ ಮುಖಂಡರು ನಡೆಸುತ್ತಿರುವ ಹೋರಾಟಕ್ಕೆ ನಾವೆಲ್ಲ ಬೆಂಬಲಿಸಿ ತಿಪಟೂರು ಆಡಳಿತ ಸೌಧದ ಮುಂಭಾಗ ಜನವರಿ 23 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ತಾಲೂಕಿನ ರೈತಪರಸಂಘಟನೆಗಳು ಭಾಗವಹಿಸಬೇಕು ಎಂದು ಮನವಿ ಮಾಡಿದರು.

1000935018

ನಮ್ಮ ಹೋರಾಟಕ್ಕೆ,ಬೆಲೆ ಕಾವಲು ಸಮಿತಿ, ವಕೀಲರ ಸಂಘ, ರವಾನೆದಾರರ ಸಂಘ, ವರ್ತಕರ ಸಂಘಬಗರ್ ಹುಕುಂ ಹೋರಾಟ ಸಮಿತಿ, ಭಾರತೀಯ ವೈದ್ಯಕೀಯ ಸಂಘ, ಕಲ್ಪತರು ವಿದ್ಯಾ ಸಂಸ್ಥೆ ಆಡಳಿತ ಮಂಡಳಿ, ನಾಗರೀಕ ಜಾಗೃತಿ ಹಾಗೂ ಹಿತರಕ್ಷಣಾ ಸಮಿತಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ,ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ,ಜೀವವಿಮಾ ಪ್ರತಿನಿಧಿಗಳ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಭಾಗವಹಿಸುತ್ತಿವೆ ಎಲ್ಲಾರೈತರು ಭಾಗವಹಿಸಿ ಹೋರಾಟ ಬೆಂಬಲಿಸಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬೆಲೆ ಕಾವಲು ಸಮಿತಿ ರಾಜ್ಯ ಕಾರ್ಯದರ್ಶಿ  ಶ್ರಿಕಾಂತ್ ಕೆಳಹಟ್ಟಿ,  ಸೌಹಾರ್ದ ತಿಪಟೂರು ಮುಖಂಡ ಅಲ್ಲಾ ಭಕ್ಷು ,ರೈತ ಮುಖಂಡ ಸಿದ್ದಪ್ಪ ಬಳುವನೇರಲು,ರೈತ ಮುಖಂಡ ಯೋಗನಂದಸ್ವಾಮಿ ,ಜಯನಂದಯ್ಯ,ತಿಮ್ಲಪುರದೇವರಾಜು,ರಂಗಾಪುರ ಚನ್ನಬಸವಣ್ಣ,ನಾಗೇಶ್ ಬಿಳಿಗೆರೆಪಾಳ್ಯ, ತಡಸೂರು ನಾಗರಾಜು‌ ಬೆಳೂರನಹಳ್ಳಿ ಚನ್ನಬಸವಯ್ಯ,ರವೀಂದ್ರ ಕುಮಾರ್,ದೇವಾನಂದ್ ,ರಾಜಮ್ಮ ,ಸತೀಶ್ ಎಸ್.ಎಫ್  ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...