ತಿಪಟೂರು | ಭೂಮಿ ಸಂರಕ್ಷಣೆ ಎಲ್ಲರ ಕರ್ತವ್ಯ : ಸಿ. ಎಫ್. ಮಹಮ್ಮದ್ ಆರಿಫುಲ್ಲ

Date:

ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫುಲ್ಲ ಸಿ.ಎಫ್ ತಿಳಿಸಿದರು.

ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸ ಪಟ್ಟಣ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ತಿಪಟೂರು ಹಾಗೂ ವಿದ್ಯೋದಯ ಕಾನೂನು ಕಾಲೇಜಿನ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಸಕಲ ಜೀವರಾಶಿಗಳಿಗೆ ಆಶ್ರಯ ತಾಣವಾಗಿರುವ ಭೂಮಿಯನ್ನು ಪ್ರಸ್ತುತ ಮಾನವನು ತಮ್ಮ ಸ್ವಾರ್ಥ ಸಾಧನೆಯಿಂದ ಅದನ್ನು ಹಾಳು ಮಾಡುತ್ತಿದ್ದು, ಭೂಮಿಯನ್ನು ರಕ್ಷಣೆ ಮಾಡಬೇಕು ಎಂಬುದನ್ನು ಭಾರತದ ಸತ್ಪ್ರಜೆಯಾದ ನಾವುಗಳು ಎಲ್ಲರಲ್ಲಿಯೂ ಅರಿವು ಮೂಡಿಸಿ ಮುಂದಿನ ಪೀಳಿಗೆಗೆ ಆರೋಗ್ಯಯುತ ಪರಿಸರವನ್ನು ನಿರ್ಮಾಣ ಮಾಡಿಕೊಡಬೇಕು ಎಂದು ತಿಳಿಸಿದರು. 

 ಅಧಿಕ ಸಿವಿಲ್ ನ್ಯಾಯಾಧೀಶರಾದ ಮಧುಶ್ರೀ ಜಿ.ಎಸ್ ಮಾತನಾಡಿ  ನಾವು ಒಬ್ಬೊಬ್ಬರೂ ಒಂದೊಂದು ಗಿಡ ನೆಡುವ ನಿಟ್ಟಿನಲ್ಲಿ ಸುತ್ತಮುತ್ತ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರ ಕರ್ತವ್ಯ ಅತ್ಯಧಿಕವಾದದ್ದು, ಅಲ್ಲದೆ ನಿರುಪಯುಕ್ತ ವಸ್ತುಗಳನ್ನು ಪರಿಸರದಲ್ಲಿ ಬಿಸಾಡದೇ ಅವೆಲ್ಲವನ್ನು ಒಂದೆಡೆ ಸಂಗ್ರಹಿಸಿ ನಾಶಗೊಳಿಸುವ ನಿಟ್ಟಿನಲ್ಲಿ ಹಾಗೂ ಪ್ರಮುಖವಾಗಿ ಪ್ಲಾಸ್ಟಿಕ್ ಅನ್ನು ಬಳಸದೆ ಭೂಮಿಯನ್ನು ಸಂರಕ್ಷಣೆ ಗೊಳಿಸಬೇಕು ಎಂಬುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಕಾರ್ಯಕ್ರಮದಲ್ಲಿ  ತಾಲೂಕು ವಕೀಲರ ಸಂಘ ಅಧ್ಯಕ್ಷರು  ಬಿ.ಎನ್ ಅಜಯ್, ಕಾರ್ಯದರ್ಶಿ ಬಿ ಮಲ್ಲಿಕಾರ್ಜುನಯ್ಯ, ನ್ನಿತರರು ಹಾಜರಿದ್ದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...