ತಿಪಟೂರು | ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ : ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ

Date:

ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ. ಆಧುನಿಕ ಕಾಲದಲ್ಲಿ ಶ್ರೀಮಂತಿಕೆಯ ಹೊಸ ಮಾನದಂಡವನ್ನು ನಾವು ತಿಳಿಯಬೇಕಾಗಿದೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.

ತಿಪಟೂರು ನಗರದ ಬಯಲು ರಂಗಮಂದಿರದಲ್ಲಿ  ಕಲಾಕೃತಿ , ತಿಪಟೂರು  ಧಾತ್ರಿ ರಂಗ ಸಂಸ್ಥೆ ಸಿರಿಗೇರಿ ಪ್ರಸ್ತುತ ಪಡಿಸಿರುವ ” ಕಲಾಕೃತಿ ವಸಂತೋತ್ಸವ ” 2024-25 ನೇ ಸಾಲಿನ ಧಾತ್ರಿ ತಿರುಗಾಟದ 3 ನಾಟಕಗಳ ಪ್ರದರ್ಶನ  ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದ ಅವರು,  ಹಾಡುಗಾರಿಕೆ, ಚಿತ್ರಕಲೆ,ಸಂಗೀತ, ನಾಟಕ ನೋಡುವ ಅಭಿರುಚಿ ಉಳ್ಳವರು,ರಾಸಾಯನಿಕ ಮುಕ್ತ ಆಹಾರ ಸೇವಿಸುವವರು ಶ್ರೀಮಂತರು ಎನ್ನಬಹುದು. ಕಾಲೇಜು ರಂಗಭೂಮಿ,ಶಾಲಾ ರಂಗಭೂಮಿ ಬೆಳೆಯದೆ ಪ್ರೇಕ್ಷಕರು ಹುಟ್ಟುವುದಿಲ್ಲ. ಪ್ರೀತಿ ತತ್ವವನ್ನು ಅಲ್ಲಿಯೇ ಹೇಳಿಕೊಡಬೇಕು. ಸಮುದಾಯ, ಸಮಾಜವನ್ನು ಆ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕಲಾತ್ಮಕವಾಗಿ ತಿಳಿಸಿಕೊಡಬೇಕು. ಎಲ್ಲಾ ವೃತ್ತಿಯನ್ನು ಅವರವರು ಒಂದು ಕಲೆಯಾಗಿ ಸ್ವೀಕರಿಸಿ ಆನಂದಿಸಬೇಕು.ಶಿಕ್ಷಕರು, ಉಪನ್ಯಾಸಕರು ಈ ಕಾಲಕ್ಕೆ ಬೇಕಾದ ದೊಡ್ಡ ಶಕ್ತಿಯನ್ನು ಕಟ್ಟಬೇಕು ಎಂದು ಹೇಳಿದರು.

ನಗರಸಭಾ ಅಧ್ಯಕ್ಷೆ  ಯಮುನಾ ಧರಣೇಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಜನರಿಗೆ ರಂಗಭೂಮಿಯ ಆಸಕ್ತಿ ಕ್ಷೀಣಿಸುತ್ತಿದೆ.ರಂಗಭೂಮಿ ಕಲಾವಿದರ ಅಭಿನಯವು ಬಹಳ ನೈಜವಾಗಿದ್ದು,ಖ್ಯಾತ ಚಲನಚಿತ್ರ ಕಲಾವಿದರು ರಂಗಭೂಮಿಯಿಂದಲೇ ಬಂದವರು.ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹಿಸುವುದರಿಂದ ಅವರಿಗೆ ಹೆಚ್ಚಿನ ಗೌರವ ನೀಡಿದಂತಾಗುತ್ತದೆ.ನಾವೆಲ್ಲರೂ ರಂಗಭೂಮಿ ಕಲಾವಿದರಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭಾ ಸದಸ್ಯ ಯೋಗೀಶ್ ಎಂ.ಎಸ್. ಮಾತನಾಡಿ ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಿಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಇದೇ ರೀತಿ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯಕ್ರಮಗಳನ್ನು ಬೀದಿ ನಾಟಕದ ಮುಖಾಂತರ ಜನರಿಗೆ ತಿಳಿಸಬೇಕು ಎಂದು ಹೇಳಿದರು.

ದೇಶೀಯ ಪುರೋಹಿತಶಾಹಿಯ ಹಿಡಿತದಲ್ಲಿ ಭಾರತೀಯ ಸಮಾಜ ನಲುಗುತ್ತಿರುವಾಗ ಉದಯಿಸಿದ ದಿವ್ಯ ಜ್ಯೋತಿಗಳೇ ಸಾವಿತ್ರಿಬಾಯಿ ಫುಲೆ ದಂಪತಿಗಳು. ಅಂದಿನ ಮೌಢ್ಯ, ಅನಕ್ಷರತೆ, ಆಹಾರದ ಅಲಭ್ಯತೆ,ಆರೋಗ್ಯದ ಕಡೆಗಣನೆ ಹೀಗೆ ಎಲ್ಲಾ ಸಾಮಾಜಿಕ ಪಿಡುಗುಗಳ ವಿರುದ್ಧ ಸೆಟೆದು ನಿಂತು ಹೋರಾಡಿದ ವೀರ ಮಹಿಳೆ ಸಾವಿತ್ರಿಬಾಯಿ ಪುಲೆಯ ಜೀವನಾಧಾರಿತ ಘಟನೆಗಳನ್ನು ಬೆಂಬಲಿಸುವ ನಾಟಕ “ಸರಸತಿಯಾಗಲೊಲ್ಲೆ”  ನಾಟಕ ದರ್ಶನವಾಯಿತು.

ಕಾರ್ಯಕ್ರಮದಲ್ಲಿ  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜೀನ ಪ್ರಾಂಶುಪಾಲ ಕುಮಾರಸ್ವಾಮಿ, ಕಲಾಕೃತಿ ಸಂಸ್ಥೆಯ ಪದಾಧಿಕಾರಿಗಳಾದ ತಿಪಟೂರು ಕೃಷ್ಣ,ಎಸ್.ಎಸ್. ಗಂಗಾಧರ್,  ಸೋಭಾ ಜಯದೇವ್ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...