ತೀರ್ಥಹಳ್ಳಿ | ಸ್ವಾತಂತ್ರ್ಯ ಹೋರಾಟಗಾರನ ಪತ್ನಿಗೆ ನಿಂದನೆ; ಕೋಣಂದೂರು ಬ್ಯಾಂಕ್‌ನಿಂದ ಹೊರದಬ್ಬಿದ ಸಿಬ್ಬಂದಿ

Date:

ಸಾಲದ ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿದ ಕೋಣಂದೂರು ಬ್ಯಾಂಕ್‌ ಸಿಬ್ಬಂದಿ ಅವರನ್ನು ಬ್ಯಾಂಕ್‌ನಿಂದ ಹೊರದಬ್ಬಿದ ಘಟನೆ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್‌ ಚನ್ನವೀರಪ್ಪ ಅವರ ಪತ್ನಿ ಹಾಲಮ್ಮ(86) ಈ ಹಿಂದೆ ಮನೆ ದುರಸ್ತಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಸಾಲ ಪಡೆದಿದ್ದರು. ಅವರಿಗೆ ಕಳೆದ ನಾಲೈದು ತಿಂಗಳಿನಿಂದ ಪಿಂಚಣಿ ಹಣ ಬಂದಿರರಲಿಲ್ಲ. ಹಾಗಾಗಿ ಹಾಲಮ್ಮ ಮಾಡಿದ್ದ ಸಾಲದ ಒಂದು ಕಂತು ಕಟ್ಟಿಲ್ಲವೆನ್ನುವ ಕಾರಣಕ್ಕೆ ಅವರ ಕಿವಿಯಲ್ಲಿದ್ದ ಓಲೆಯನ್ನು ಕಿತ್ತುಕೊಂಡು ನಿಂದಿಸಿ ಹೊರದಬ್ಬಿದ್ದಾರೆ. ಈ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.

ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ತಿಗೆ ಕೋಣಂದೂರಿನ ಬ್ಯಾಂಕ್‌ ಒಂದರಲ್ಲಿ ಸಾಲ ಪಡೆದಿದ್ದ ವೃದ್ದೆಗೆ ಕಳೆದ ನಾಲ್ಕು ತಿಂಗಳಿನಿಂದ ಪಿಂಚಣಿ ಹಣ ಬಂದಿಲ್ಲದ ಕಾರಣಕ್ಕೆ ಸಾಲದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಬ್ರವರಿ 10ರಂದು ಮನೆಯಲ್ಲಿ ದಿನಸಿ ಸಾಮಾನು ಇಲ್ಲದ ಕಾರಣಕ್ಕೆ ತನ್ನ ಕಿವಿಯಲ್ಲಿದ್ದ ಓಲೆ, ಚಿನ್ನದ ಸರವನ್ನು ಅಡವಿಡಲು ಬ್ಯಾಂಕ್‌ಗೆ ಬಂದಾಗ ಬ್ಯಾಂಕ್ ಸಿಬ್ಬಂದಿ ಓಲೆ, ಚಿನ್ನದ ಸರ ಪಡೆದು ಹಣ ನೀಡದೆ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ” ಎಂದು ಆರೋಪಿಸಿ ವೃದ್ಧೆಯ ಮಗಳು ಶಕುಂತಳಾ ದೂರು ನೀಡಿದ್ದಾರೆ.

1001254236

“ಬಿಲ್ಲೇಶ್ವರ ಗ್ರಾಮದ ಎಸ್ ಚನವೀರಪ ಸ್ವಾತಂತ್ರ್ಯ ಹೋರಾಟದ ಜೈಲುವಾಸ ಅನುಭವಿಸಿ ದೇಶಸೇವೆ ಮಾಡಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆಯಿದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ” ಎಂದು ವೃದ್ಧೆ ಹಾಲಮ್ಮ ತಮ್ಮ ನೋವು ತೋಡಿಕೊಂಡರು.

“ವಯಸ್ಸಾದ ಅ ತಾಯಿಗೆ ನ್ಯಾಯ ದೊರಕಿಸಿಕೊಟ್ಟು, ಕಟುಕತನ ಪ್ರದರ್ಶಿಸಿದ ಬ್ಯಾಂಕ್‌ ಸಿಬ್ಬಂದಿ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕಿದೆ” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...