ತೀರ್ಥಹಳ್ಳಿ | ಗಾರ್ಡ್ ಗದ್ದೆಯ ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ; ವಿದ್ಯಾರ್ಥಿಗಳ ಗೋಳು ಕೇಳೋರು ಯಾರು?

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತೀರ್ಥಹಳ್ಳಿಯಿಂದ ಸುಮಾರ್ 25 ಕಿಮೀ ದೂರದಲ್ಲಿದೆ.

ತೆಮ್ಮೆಮನೆಯ ಶಾಲೆಯೂ ಸುಮಾರು 70 ವರ್ಷ ಹಳೆಯದು. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿರುವ ಈ ಶಾಲೆ ಕಳೆದ ವರ್ಷದಿಂದ ಶಾಲೆಯ ಮೇಲ್ಛಾವಣಿಯ ಸಿಮೆಂಟ್ ಕಳಚಿ ಬೀಳುತ್ತಿದ್ದು, ಕಬ್ಬಿಣ ಸಲಾಕೆಗಳು ಮಾತ್ರ ಕಾಣತೊಡಗಿವೆ. ಇದರಿಂದ ವಿದ್ಯಾರ್ಥಿಗಳು ಅಪಾಯದ ಪರಿಸ್ಥಿತಿಯಲ್ಲಿ ಶಾಲೆಗೆ ಬರುವಂತಾಗಿದೆ. ಶಾಲೆಯಲ್ಲಿ ಪ್ರಸ್ತುತ ಒಂದರಿಂದ ಏಳನೇ ತರಗತಿವರೆಗೂ 32 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ ಸರಿಪಡಿಸಿಕೊಡಿ ಎಂದು ಶಾಲೆಯ ಎಸ್‌ಡಿಎಂಸಿ ಸದಸ್ಯ ಗಿರೀಶ್ ಅವರು ನಾಲ್ಕೈದು ದಿನಗಳ ಹಿಂದೆಯೇ ಕೇಳಿಕೊಂಡಿದ್ದರು.

ಎಸ್‌ಡಿಎಂಸಿ ಸದಸ್ಯ ಗಿರೀಶ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕಳೆದ ವರ್ಷವೂ ಕೂಡ ಶಾಲೆ ಕಟ್ಟಡ ಅವ್ಯವಸ್ಥೆ ಬಗ್ಗೆ ಬಿಇಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಏನೂ ಪ್ರಯೋಜನವಾಗಲಿಲ್ಲ. ಮತ್ತೆ ಈಗ ಅದೇ ರೀತಿ ಆಗುತ್ತಿದೆ. ಹಾಗಾಗಿ ಈ ಬಾರಿಯಾದರೂ ಸರಿಪಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ತೀರ್ಥಹಳ್ಳಿ ಶಾಲೆ

ತೀರ್ಥಹಳ್ಳಿ ಬಿಇಒ ಮಾತನಾಡಿ, “ಶಾಲೆಯ ಒಳಭಾಗದ ಆರ್‌ಸಿಸಿಯ ಸಿಮೆಂಟ್ ಕಳಚಿ ಬೀಳುತ್ತಿದೆ.‌ ಹಾಗಾಗಿ ಕಳೆದ ಬಾರಿ ಶಾಲೆಗೆ ಆಗುತ್ತಿರುವ ಸಮಸ್ಯೆ ಕುರಿತು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದೆವು. ಆದರೆ ಸರ್ಕಾರದಿಂದ ಈ ಅನುದಾನ ಬರಲಿಲ್ಲ. ಇದೀಗ ಮಳೆ ಆರಂಭವಾಗಿದೆ. ಸೋಮುವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. ಸದ್ಯಕ್ಕೆ ಪರ್ಯಾಯ ವ್ಯವಸ್ಥೆ ಎಂದರೆ ಶೀಟ್ ಹಾಕಿಸಬೇಕು. ಇಲ್ಲದಿದ್ದರೆ ಮೇಲ್ಛಾವಣಿಯಿಂದ ಬೀಳುತ್ತಿರುವ ಸಿಮೆಂಟ್‌ ನಿಯಂತ್ರಿಸುವುದು ಕಷ್ಟವಾಗುತ್ತದೆ” ಎಂದು ಹೇಳಿದರು.

“ಶಾಲೆಗೆ ಆರ್‌ಸಿಸಿ ಹಾಕಿಸಿದ ಮೇಲೆ ಅದ ಮೇಲೆ ಆಗಾಗ ಸ್ವಚ್ಛತೆ ಮಾಡಬೇಕು. ಇಲ್ಲವಾದರೆ ನೀರು ಸಂಗ್ರಹವಾಗುವುದರಿಂದ 10 ವರ್ಷದೊಳಗೆ ಆರ್‌ಸಿಸಿ ಸೀಲಿಂಗ್‌ನಿಂದ ಈ ರೀತಿ ಸಮಸ್ಯೆ ಉಂಟಾಗುತ್ತದೆ” ಎಂದರು.

1001817463

ಒಟ್ಟಾರೆ ಬಡ, ಮಧ್ಯಮ ಕೃಷಿ ವರ್ಗದ ಕುಟುಂಬದವರು ಸರ್ಕಾರಿ ಶಾಲೆ ನಂಬಿಕೊಂಡು, ಈ ರೀತಿ ಅವ್ಯವಸ್ಥೆ ಇರುವ ಶಾಲೆಗೆ ಕಳುಹಿಸುವುದಾದರೂ ಹೇಗೆ? ಜತೆಗೆ ಊರಿನಿಂದ ಒಳಗೆ ಒಂದು Interior ಅಲ್ಲಿ ಇರುವ ಈ ಶಾಲೆಗೆ ಮರು ಜೀವ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸುಕೊಳ್ಳುವ ಪ್ರಯತ್ನ ಮಾಡುವ ಇಚ್ಛಾಶಕ್ತಿ ತೀರ್ಥಹಳ್ಳಿ ಅಧಿಕಾರಿಗಳಲ್ಲಿ ಇದೆಯೋ ಅಥವಾ ತೀರ್ಥಹಳ್ಳಿಯಲ್ಲಿ ಈಗಾಗಲೇ ಹಲವಾರು ಶಾಲೆಗಳು ಮುಚಲ್ಪಟ್ಟಿವೆ ಎಂಬುದರ ಸಾಲಿಗೆ ಈ ಶಾಲೆಯೂ ಸೇರುತ್ತದೆಯೇ? ಎಂಬುದನ್ನು ಸಂಬಂಧಪಟ್ಟವರು ತಿಳಿಸಬೇಕು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ತವರು ಜಿಲ್ಲೆಯ ಈ ಶಾಲೆ ಕುರಿತಾಗಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಜರುಗಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...