ತೀರ್ಥಹಳ್ಳಿ | ಮಕ್ಕಳ ಮೌಲ್ಯಯುತ ಶಿಕ್ಷಣಕ್ಕೆ ಪೋಷಕರು ವಿಶೇಷ ಗಮನ ಹರಿಸಿ: ಸಚಿವ ಮಧು ಬಂಗಾರಪ್ಪ

Date:

ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಿಸಲು ವಿಶೇಷ ಗಮನ ಹರಿಸಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಮನವಿ ಮಾಡಿದರು.

ಬೇಗುವಳ್ಳಿಯ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಲ್ಲಿ ಶ್ರೇಷ್ಠ ದರ್ಜೆಯ ಶಿಕ್ಷಕರಿದ್ದಾರೆ. ಈಗಾಗಲೇ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ತನ್ನು ಏಕಕಾಲಕ್ಕೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ” ಎಂದರು.

1001273592

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ಅವರು ವ್ಯಾಸಂಗ ಮಾಡಿದ ಹೆಮ್ಮೆಯ ಶಾಲೆ ಇದಾಗಿರುವುದು ವಿಶೇಷವಾಗಿದೆ. ಈ ಶಾಲೆಯ ಕೊಠಡಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.

1001273585

ರಾಜ್ಯದ ಪ್ರತಿ ಮನೆಯಲ್ಲೂ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳಿರುವುದು ಸಂತಸದ ಸಂಗತಿಯಾಗಿದೆ. ಅಜೀಮ್ ಪ್ರೇಮ್ ಜಿ ಅವರ ಫೌಂಡೇಶನ್ ನೀಡಿದ 1591 ಕೋಟಿ ರೂಗಳ ಆರ್ಥಿಕ ನೆರವಿನೊಂದಿಗೆ ಶಾಲೆಯ ಎಲ್ಲಾ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಬಿಸಿ ಊಟದ ಜೊತೆಗೆ ಪೌಷ್ಟಿಕ ಆಹಾರ, ಮೊಟ್ಟೆ, ಹಾಲು ವಿತರಿಸಲಾಗುತ್ತಿದೆ ಎಂದರು.

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್‌.ಎಂ. ಮಂಜುನಾಥಗೌಡ ಅವರು ಮಾತನಾಡಿ, ಸರ್ಕಾರವು ನೂತನವಾಗಿ ಅನುಷ್ಠಾನಗೊಳಿಸಿರುವ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಅಲ್ಲದೆ ಮಂಡಳಿಯಿಂದ ಹಾಗೂ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ?:ತೀರ್ಥಹಳ್ಳಿ | ಭೀಕರ ಅಪಘಾತ; ಕಾರಿನಡಿ ಸಿಲುಕಿ ಮಹಿಳೆ ಸಾವು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...