ತೀರ್ಥಹಳ್ಳಿ | ದೇವಸ್ಥಾನದ ಹುಂಡಿ ಕಳ್ಳತನ : ಆರೋಪಿ ಬಂಧನ

Date:

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಚಾಣಾಕ್ಷತನದ ಈ ತ್ವರಿತ ಕಾರ್ಯವೈಖರಿಗೆ ಧಾರ್ಮಿಕ ದತ್ತಿ ಮತ್ತು ಧರ್ಮದಾಯ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಬಿ. ವರಲಕ್ಷ್ಮೀ ಪ್ರಕಾಶ್ ಇವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದವರನ್ನು ಅಭಿನಂದಿಸಿದ್ದಾರೆ.

ದೇವಸ್ಥಾನದಲ್ಲಿ ಆಗಸ್ಟ್ 11ರ ರಾತ್ರಿ ವ್ಯಕ್ತಿಯೊಬ್ಬ ಮಾಸ್ಕ್ ಧರಿಸಿ ನಡೆಸಿದ್ದ ಕಳ್ಳತನ ಪ್ರಕರಣ 12ರ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002056880

ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್‍ಪಿ ಅರವಿಂದ್ ಕಲಗುಜ್ಜಿ ಅವರ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಇಬ್ರಾನ್ ಬೇಗ್, ಸಬ್ ಇನ್ಸ್‍ಪೆಕ್ಟರ್ ಸುಷ್ಮಾ ನೇತೃತ್ವದಲ್ಲಿ ಹೆಡ್ ಕಾನ್‍ಸ್ಟೇಬಲ್ ಲಿಂಗೇಗೌಡ, ಕಾನ್ಸ್‍ಟೇಬಲ್‍ಗಳಾದ ಮಂಜುನಾಥ, ಸುರೇಶ್ ನಾಯ್ಕ, ವಿಜಯ ಕುಮಾರ್ ಕಾರ್ಯ ಪ್ರವೃತ್ತರಾಗಿ ದಾವಣಗೆರೆ ಜಿಲ್ಲೆಯ ಸೈಯದ್ ಉಮರ್‍ನನ್ನು (30 ) ಬಂಧಿಸಿರುವುದು ಶ್ಲಾಘನೀಯ ಎಂದರು.

ಅಂತೆಯೇ ತೀರ್ಥಹಳ್ಳಿ ಠಾಣಾ ಪೊಲೀಸರು ನ್ಯಾಮತಿಯ ಗಣೇಶ್ (34 ) ಎಂಬ ಆರೋಪಿಯನ್ನು ಬಂಧಿಸುವ ಮೂಲಕ ಕೋಣಂದೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ಕು ಕಳವು ಪ್ರಕರಣ ಬೇಧಿಸಿದ್ದಾರೆ.

ಕೋಣಂದೂರಿನ ಸುಣ್ಣಗಾರ್ ಕೇರಿಯ ಎರಡು ಮನೆಗಳವು, ಕೆನರಾ ಬ್ಯಾಂಕ್‍ನ ಎಟಿಎಂ ಒಡೆದು ಹಣ ಕಳವಿಗೆ ಯತ್ನ, ಕುವೆಂಪು ಬಡಾವಣೆಯ ಮುರಿಗೆಪ್ಪ ಅವರ ಬೈಕ್ ಕಳವು ಪ್ರಕರಣವನ್ನು ಪತ್ತೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...