ತೀರ್ಥಹಳ್ಳಿ | ಪಟ್ಟಣ ಪಂ. ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ರಹ್ಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ

Date:

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್ ರವರು ಆಯ್ಕೆಯಾಗಿದ್ದಾರೆ.

ವಿಶೇಷ ಅಂದರೆ, ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಈ ಅವಧಿಯಲ್ಲಿ ಉಪಾಧ್ಯಕ್ಷರಾದರೆ, ಉಪಾಧ್ಯಕ್ಷರಾಗಿದ್ದ ರಹ್ಮತುಲ್ಲಾ ಅಸಾದಿ ಅಧ್ಯಕ್ಷರಾಗಿದ್ದಾರೆ.

ತೀರ್ಥಹಳ್ಳಿ 1

ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸೊಪ್ಪುಗುಡ್ಡೆ ರಾಘವೇಂದ್ರ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗಣೇಶ್ ನಾಮಪತ್ರ ಸಲ್ಲಿಸಿದ್ದರು. ಒಟ್ಟು 15 ಸ್ಥಾನವಿರುವ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ 6 ಸ್ಥಾನ ಪಡೆದಿತ್ತು. ಕಾಂಗ್ರೆಸ್‌ 8 ಸ್ಥಾನ ಪಡೆದಿತ್ತು. ಓರ್ವರು ಸ್ವತಂತ್ರ ಅಭ್ಯರ್ಥಿಯಾಗಿದ್ದರು. ಈ ನಡುವೆ ಬಿಜೆಪಿಯ ಸಂಸದ, ಶಾಸಕರು ಸೇರಿ ಬಿಜೆಪಿಯ ಬಲಾಬಲ 8 ಆಗುತ್ತಿತ್ತು. ಆದಾಗ್ಯೂ, ಲೆಕ್ಕಾಚಾರದ ಗೆಲುವಿನಲ್ಲಿ ಕಾಂಗ್ರೆಸ್‌ ಮ್ಯಾಜಿಕ್‌ ನಂಬರ್‌ ಸಾಧಿಸಿದೆ. ಆ ಮೂಲಕ ಇಂದು ನಡೆದ ಚುನಾವಣೆಯಲ್ಲಿ ಅಂತಿಮವಾಗಿ ಕಾಂಗ್ರೆಸ್‌ ಪಟ್ಟಣ ಪಂಚಾಯಿತಿಯನ್ನು ತನ್ನದಾಗಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ: ಲಿಯೋ ಅರೋಜ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...