ಈದಿನ ಫಲಶೃತಿ | ಆಟೋ ಚಾಲಕರಿಗೆ ಜಾಗೃತಿ ಅಭಿಯಾನ

Date:

ಆಟೋ ಚಾಲಕರು ಸಾರ್ವಜನಿಕರೊಂದಿಗೆ ಯಾವ ರೀತಿ ವರ್ತಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸಿ ಹೇಗೆ ಸುರಕ್ಷತೆ ಕಾಪಾಡಬೇಕೆಂಬುದರ ಕುರಿತು ಶಿವಮೊಗ್ಗ ಪೊಲೀಸರಿಂದ ವಿಶೇಷ ಜಾಗೃತಿ ಸಭೆ ನಡೆಸಲಾಯಿತು.

ಸುರಕ್ಷಿತ ನಿಯಮಗಳ ಬಗ್ಗೆ ದೊಡ್ಡಪೇಟೆಯ ಪಿಐ ರವಿ ಸಂಗನಗೌಡ ಪಾಟೀಲ್, ಪಿಎಸ್ಐಗಳಾದ ವಸಂತ್ ಕುಮಾರ್, ಅಂತೋನಿ ಮೊದಲಾದವರ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿದೆ.

ಎನ್‌ಟಿ ರಸ್ತೆಯಲ್ಲಿರುವ ಸಹ್ಯಾದ್ರಿ ಆಟೋ ಸ್ಟ್ಯಾಂಡ್, ಕೆಎಸ್ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದ ಬಳಿಯ ಆಟೋ ಸ್ಟ್ಯಾಂಡ್ ಗಳಲ್ಲಿ ವಾರದ ಬ್ರೀಫಿಂಗ್, ರಸ್ತೆ ನಿಯಮ, ಸಾರ್ವಜನಿಕರೊಂದಿಗಿನ ನಡೆತೆಗಳ ಬಗ್ಗೆ ಜಾಗೃತಿ ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001387838

ಈ ಕುರಿತು ಈದಿನ ಡಾಟ್ ಕಾಮ್ ಮಾ.11ರಂದು “ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು” ಶೀರ್ಷಿಕೆಯಡಿ ಸುದ್ದಿ ಮಾಡಿತ್ತು.

ಸುದ್ದಿ ಪ್ರಕಟವಾದ ಬೆನ್ನಲ್ಲೇ ಪೊಲೀಸ್ ಇಲಾಖೆ ನಿರಂತರ ಅಭಿಯಾನ ನಡೆಸುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

1001387837

ಈ ಮೊದಲು ಮಾ.17ರಂದು ಶಿವಮೊಗ್ಗ ಸಂಚಾರ ವೃತ್ತ ಕಚೇರಿಯಲ್ಲಿ ನಗರದ ಖಾಸಗಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆಟೋ ಚಾಲಕರ ಕುಂದುಕೊರತೆಗಳ ಸಭೆ ಮಾಡಿ ಆಟೋ ಚಾಲಕರಿಗೆ ಬಸ್ ನಿಲ್ದಾಣದ ಹತ್ತಿರ ಆಟೋ ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಬಾರದು ಮತ್ತು ಕಡ್ಡಾಯವಾಗಿ ಆಟೋ ಮೀಟರ್ ಬಳಕೆ ಮಾಡುವುದು ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡುವಂತೆ ಸಿಪಿಐ ಸಂತೋಷ್ ಕುಮಾರ್ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ | ಹೊಸನಗರ ಮನೆಗಳ್ಳನ ಬಂಧನ

ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಮನಗಂಡ ಪೊಲೀಸ್ ಇಲಾಖೆ ನಿರಂತರ ಅಭಿಯಾನ ನಡೆಸುತ್ತಿದ್ದಾರೆ. ಜನಸ್ನೇಹಿ ಪೊಲೀಸ್ ಇಲಾಖೆ ಹಾಗೂ ಆಟೋ ಚಾಲಕರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಸೆದು ಸೇವೆ ಒದಗಿಸುವಂತಾಗಲಿ. ಇದರಂತೆ ಶಿವಮೊಗ್ಗ ನಾಗರಿಕರಿಗೆ ಹಾಗೂ ಬೇರೆ ಬೇರೆ ಊರಿನಿಂದ ಬರುವಂತವರಿಗೆ ಮುಂದಿನ ದಿನಗಳಲ್ಲಿ ಅನುಕೂಲವಾಗಲಿ ಎಂಬುದು ಈದಿನ ಡಾಟ್ ಕಾಮ್ ಆಶಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...