ಬೀದರ್‌, ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ; ಸಿಡಿಲಿಗೆ ಇಬ್ಬರು ಸಾವು

Date:

ಬಿರುಗಾಳಿ ಸಹಿತ ಮಳೆಗೆ ವಿವಿದೆಡೆ ಸಾವು-ನೋವು ಸಂಭವಿಸಿದೆ. ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸೋಮವಾರ ನಸುಕಿನ ಜಾವ ಸಿಡಿಲು ಬಡಿದು ಓರ್ವ ಕುರಿಗಾಹಿ ಮೃತಪಟ್ಟಿದ್ದಾರೆ.

ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌ ಜಿಲ್ಲೆಯಲ್ಲಿ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದೆ. ಚಿಟಗುಪ್ಪಾ ತಾಲೂಕಿನ ಇಟಗಾ ಗ್ರಾಮದ ಇನಾಯತ್‌ ಸೈಯದ್‌ (21) ಎಂಬುವರು ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮೃತಪಟ್ಟಿದ್ದಾರೆ. ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲಿ ಸಿಡಿಲು ಬಡಿದು 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.

ಬೀದರ್‌ ತಾಲೂಕಿನ ಇಸ್ಲಾಂಪುರ ತಾಂಡಾದ ರೈತ ಭೀಮ ಬನ್ಸಿ ಎಂಬುವರಿಗೆ ಸೇರಿದ ನಾಲ್ಕು ಮೇಕೆಗಳು ಸಿಡಿಲು ಬಡಿದು ಸಾವನಪ್ಪಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಗ್ರಾಮದ ಹೊರವಲಯದಲ್ಲಿ ಮೇಯಿಸಲು ಹೋದ ವೇಳೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಸುರಿದಿದೆ. ಈ ವೇಳೆ ಸಿಡಿಲು ಬಡಿದು ಅಂದಾಜು 60 ಸಾವಿರ ರೂ. ಮೌಲ್ಯದ ನಾಲ್ಕು ಆಡುಗಳು ಮೃತಪಟ್ಟಿವೆ. ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ರೈತ ಭೀಮ್‌ ಬನ್ಸಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...