ಪ್ರವಾಸಿಗರೇ ಗಮನಿಸಿ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗಿಲ್ಲ ಪ್ರವೇಶ

Date:

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹವಲಾರು ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಬರಿದಾಗಿದ್ದ ಜಲಾಶಯಗಳು ಭರ್ತಿಯಾಗುತ್ತಿವೆ. ಧಾರಾಕಾರ ಮಳೆಗೆ ಗುಡ್ಡಗಳೂ ಕುಸಿಯುತ್ತಿವೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂರ್ಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಮಳೆಗಾಲ ಮತ್ತು ಚಳಿಗಾಲದಲ್ಲಿ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ, ಮಾಣಿಕ್ಯದಾರ, ಕೆಮ್ಮಣ್ಣುಗುಂಡಿ ಮತ್ತು ಹೆಬ್ಬೆ ಜಲಪಾತ ಪ್ರವಾಸಿಗರ ಕಣ್ಮನ ಸೆಳೆಯುತ್ತವೆ. ದಿನವೀಡಿ ಸುರಿಯುವ ಮಳೆಯ ನಡುವೆ ಈ ಪ್ರದೇಶದಲ್ಲಿ ಸುತ್ತಾಡಲು ಇಚ್ಚಿಸುತ್ತಾರೆ. ಆದರೆ, ಈಗ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಈ ಎಲ್ಲ ಪ್ರದೇಶಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಗುಡ್ಡಕುಸಿಯುತ್ತವೆ. ಬೃಹತ್ ಕಲ್ಲುಗಳು ರಸ್ತೆಗೆ ಉರುಳುತ್ತಿವೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಜುಲೈ 31ರವರೆಗೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂರ್ಧಿಸಲಾಗಿದೆ. ಚಂದ್ರದ್ರೋಣ ಪರ್ತವ ಪ್ರವೇಶ ಮಾರ್ಗದಲ್ಲಿ ಚೆಕ್‌ಪೋಸ್ಟ್‌ ಹಾಕಲಾಗಿದ್ದು, ಪೊಲೀಸರು ಪ್ರವಾಸಿಗರನ್ನು ವಾಪಸ್‌ ಕಳುಹಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...