ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

Date:

ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನಡೆಸಿದ ಕಾರ್ಯಾಚರಣೆಯ ವೇಳೆ ಮೂಳೆಯೊಂದು ಪತ್ತೆಯಾಗಿದೆ.

ಅಂಕೋಲಾದ ಗಂಗಾವಳಿ ನದಿಯಲ್ಲಿ ಬಿದ್ದಿರುವ ಅವಶೇಷಗಳ ಪತ್ತೆ ಕಾರ್ಯ ಸೋಮವಾರ ಕೂಡ ಮುಂದುವರಿಸಲಾಗಿದೆ. ಭಾನುವಾರ ನಡೆಸಿದ ಕಾರ್ಯಾಚರಣೆಯ ವೇಳೆ ನೀರಿನಾಳದಲ್ಲಿ ಲಾರಿಯ ಇಂಜಿನ್, ಸ್ಕೂಟಿ ಮತ್ತು ಮೂಳೆಯೊಂದು ಸಿಕ್ಕಿದೆ. ಸಿಕ್ಕಿರುವ ಮೂಳೆಯು ಮನುಷ್ಯರದ್ದೋ ಅಥವಾ ಬೇರೆಲ್ಲಿಂದಾದರೂ ನದಿಯಲ್ಲಿ ತೇಲಿ ಬಂದದ್ದೋ ಎನ್ನುವುದನ್ನು ತಿಳಿಯಲು ಡಿಎನ್​ಎ ಪರೀಕ್ಷೆಗೆ ಕಳುಹಿಸಲಾಗಿದೆ.

ಮೂರನೇ ದಿನದ ಡ್ರೆಜ್ಜರ್ ಕಾರ್ಯಾಚರಣೆಯಲ್ಲಿ ಮೂಳೆ ದೊರೆತಿದ್ದು, ಇದು ನಾಪತ್ತೆಯಾದ ಮೂವರಲ್ಲಿ ಯಾರದ್ದೆಂದು ತಿಳಿಯಲು ಡಿಎನ್​ಎ ಟೆಸ್ಟ್​ಗೆ ಕಳುಹಿಸಲಾಗಿದೆ. ಈ ಮೂಳೆ ಕಾಣೆಯಾದವರ ಕುಟುಂಬದ ಡಿಎನ್‌ಎಗೆ ತಾಳೆ ಆಗಲಿದೆಯಾ ಎಂಬುದರ ಪರೀಕ್ಷೆ ಸಹ ನಡೆಯಲಿದೆ. ಈಗಾಗಲೇ ನಾಪತ್ತೆಯಾದವರ ಕುಟುಂಬದವರ ಡಿಎನ್‌ಎಯನ್ನು ಜಿಲ್ಲಾಡಳಿತ ಸಂಗ್ರಹಿಸಿಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಿರೂರು 4

ಕಾರ್ಯಾಚರಣೆ ವೇಳೆ ಪತ್ತೆಯಾದ ಲಾರಿಯ ಇಂಜಿನ್ ಬೆಂಜ್ ಲಾರಿಯದ್ದೋ ಅಥವಾ ಕೊಚ್ಚಿ ಹೋದ ಟ್ಯಾಂಕರ್‌ನದ್ದೋ ಎಂಬುದು ಖಚಿತವಾಗಿಲ್ಲ. ಶನಿವಾರದ ಕಾರ್ಯಾಚರಣೆಯಲ್ಲಿ ಟ್ಯಾಂಕರ್‌ನ ಕ್ಯಾಬಿನ್‌ನ ಭಾಗ ಹಾಗೂ ಟ್ಯಾಂಕರ್‌ನ ಎದುರಿನ ಎರಡು ಟಯರ್‌ಗಳು ಕಂಡುಬಂದಿದ್ದವು.

ಗೋವಾದಿಂದ ತರಿಸಲಾದ ಬಾರ್ಜ್ ನಿಧಾನವಾಗಿ ಕಾರ್ಯಾಚರಿಸುತ್ತಿದೆ. ದಿನಕ್ಕೆ ಒಂದೆರಡು ಬಾರ್ಜ್ ಮಾತ್ರ ಹೂಳು ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತು ತಂಡ ಭಾನುವಾರ ಬೆಂಜ್ ಲಾರಿಯೊಳಗಿದೆ ಎನ್ನಲಾದ ಅಕೇಶಿಯಾ ಮರದ ತುಂಡುಗಳನ್ನು ನೀರಿನಾಳದಿಂದ ದಡಕ್ಕೆ ತಂದಿತ್ತು. ಅಲ್ಲದೇ, ಘಟನೆ ನಡೆದ ಸ್ಥಳದಿಂದ ಸುಮಾರು 100 ಮೀಟರ್ ದೂರದ ನೀರಿನಾಳದಲ್ಲಿ ಸ್ಕೂಟಿ ಒಂದನ್ನು ಪತ್ತೆ ಮಾಡಿದ್ದು, ನದಿಯಿಂದ ಮೇಲಕ್ಕೆತ್ತಲಾಗಿದೆ.

ಭಾನುವಾರ ಕಾರ್ಯಾಚರಣೆ ಪರಿಶೀಲಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, “ಗಂಗಾವಳಿ ನದಿಯಲ್ಲಿ ಮೃತದೇಹ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಪ್ರಯತ್ನ ಮಾಡಲಾಗುತ್ತಿದೆ. ಈಗ 10 ದಿನಗಳ ಕಾಲ ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಕೆಲವು ವಸ್ತುಗಳು ಸಿಗುತ್ತಿವೆ. ಇದಕ್ಕಿಂತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ. ಲಾರಿ, ನಾಪತ್ತೆಯಾದವರ ಕುರುಹು ಸಿಗಬಹುದು ಎಂಬ ನಿರೀಕ್ಷೆ ಇದೆ. ಇಲ್ಲದಿದ್ದರೆ ಕಾರ್ಯಾಚರಣೆಯನ್ನು ಬಂದ್ ಮಾಡುವ ಯೋಚನೆ ಇದೆ” ಎಂದು ತಿಳಿಸಿದ್ದಾರೆ.

ಶಿರೂರು ದುರಂತ

ಅಲ್ಲದೇ, ಡ್ರೆಜ್ಜಿಂಗ್ ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ಕಾರವಾರ ಶಾಸಕ ಸತೀಶ್ ಸೈಲ್ ಮಾತನಾಡಿ, ಈಗ ಗಂಗಾವಳಿ ನದಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಟ್ರಕ್ ಬಿಡಿಭಾಗಗಳು, ಸ್ಕೂಟಿ ಪತ್ತೆಯಾಗಿವೆ. ಕಾರ್ಯಾಚರಣೆ 80 ತಾಸು ,ಅಂದರೆ ಹತ್ತು ದಿವಸ ನಡೆಯಲಿದೆ. ಈ ಬಗ್ಗೆ ಸಂಶಯ ಬೇಡ ಎಂದು ಹೇಳಿದ್ದಾರೆ.

ಶವಗಳ ಹುಡುಕಾಟ ಇನ್ನೂ ಎರಡು ದಿನ ನಡೆಯಲಿದೆ. ನಂತರ ನದಿಯ ಆಳಕ್ಕೆ ಹಾಗೂ ಇತರೆಡೆಗೆ ನದಿಗೆ ಬಿದ್ದ ಕಲ್ಲು ಮಣ್ಣು ತೆಗೆಯಲಾಗುವುದು. ಅಗತ್ಯ ಬಿದ್ದರೆ ಕಾರ್ಯಾಚರಣೆ ಸಮಯ ಹೆಚ್ಚಿಸಲಾಗುವುದು. ಕೇರಳದ ಅರ್ಜುನ್ ಸಹೋದರಿ ಹೇಳಿದ ಕಡೆ ಕಾರ್ಯಾಚರಣೆ ನಡೆಯಲಿದೆ ಎಂದರು.

ಕೇರಳದ ಲಾರಿ ಚಾಲಕ ಅರ್ಜುನ್‌ನ ಕುಟುಂಬದ ಸದಸ್ಯರು, ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಮಾಲೀಕ ಮುನಾಫ್ ಹಾಗೂ ಕೇರಳದ ಬಹುತೇಕ ಮುಖ್ಯವಾಹಿನಿಯ ಮಾಧ್ಯಮಗಳ ಪ್ರತಿನಿಧಿಗಳು ಶಿರೂರಿನಲ್ಲೇ ಬೀಡುಬಿಟ್ಟಿದ್ದಾರೆ.

ಮೃತದೇಹ ಅಥವಾ ಅರ್ಜುನ್ ಲಾರಿ ಸಿಗುವವರೆಗೂ ಶಿರೂರಿನಲ್ಲೇ ನೆಲೆಸುವುದಾಗಿ ಲಾರಿಯ ಮಾಲೀಕ ಮುನಾಫ್ ಹಾಗೂ ಲಾರಿ ಚಾಲಕ ಅರ್ಜುನ್‌ನ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಬೇರೆ ಲಾರಿಯೂ ಮುಳುಗಿತ್ತೇ?

ದುರಂತದಲ್ಲಿ ನದಿಯಲ್ಲಿ ಮುಳುಗಿದ ಭಾರತ್ ಬೆಂಜ್ ಲಾರಿ‌ ಮತ್ತು ಟಾಟಾ ಕಂಪನಿಯ ಗ್ಯಾಸ್ ಟ್ಯಾಂಕರ್ ಇದೆ ಎಂದು ಗೊತ್ತಾಗಿತ್ತು. ಆದರೆ ರವಿವಾರದ ಕಾರ್ಯಚರಣೆಯಲ್ಲಿ ಲಾರಿ ಇಂಜಿನ್ ಒಂದರ ಪ್ಲೇಟ್ ಪತ್ತೆಯಾಗಿದ್ದು , ಸಿಕ್ಕ ಎಂಜಿನ್ ಪ್ಲೇಟ್ ನಲ್ಲಿ ಹಿಂದೂಜಾ ಗ್ರೂಪ್‌ನ ಅಶೋಕ ಲೈಲ್ಯಾಂಡ್ ಲಾರಿ ಎಂಜಿನ್ ಪ್ಲೇಟ್ ಸಿಕ್ಕಿದೆ. ಇದು ಹಿಂದೂಜಾ ಗ್ರೂಪಿಗೆ ಸೇರಿದ್ದಾಗಿದೆ. ಗಂಗಾವಳಿ ನದಿಯಲ್ಲಿ ಮತ್ತೊಂದು ಲಾರಿ ಮುಳುಗಿತ್ತೇ ಎನ್ನುವ ಚರ್ಚೆ ಕೂಡ ನಡೆದಿದೆ.

SHIROOR

ಶಿರೂರು ಹೆದ್ದಾರಿಯಲ್ಲಿ ಮಣ್ಣು ಕುಸಿತದ ಘಟನೆ ಕಳೆದ ಜುಲೈ 16 ರಂದು ಸಂಭವಿಸಿತ್ತು. 11 ಜನ ನಾಪತ್ತೆಯಾಗಿದ್ದರು. 8 ಜನರ ಶವ ದೊರೆತಿದ್ದವು. 3 ಜನರಿಗಾಗಿ ಹುಡುಕಾಟ ನಡೆದಿತ್ತು. ಜೊತೆಗೆ ಕೇರಳ ಮೂಲದ ಟಿಂಬರ್ ತುಂಬಿದ ಲಾರಿ ಹಾಗೂ ಒಂದು ಟ್ಯಾಂಕರ್ ಕಾಣೆಯಾಗಿದ್ದವು. ಈಗ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಲಾರಿಯ ಬಿಡಿಭಾಗಗಳು, ಸ್ಕೂಟಿ ಲಭ್ಯವಾಗಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...