ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ: ಪ್ರಣವಾನಂದ ಸ್ವಾಮೀಜಿ

Date:

ಕಾಂಗ್ರೆಸ್‌ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ. ಅವರಿಗೆ ಸಚಿವ ಸ್ಥಾನ ನೀಡದೆ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ರಾಷ್ಟ್ರೀಯ ಈಡಿಗ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಲ್ಲಿ ಕುರುಬ ಸಮುದಾಯಕ್ಕೆ 10 ಸಾವಿರ ಕೋಟಿ ಅನುದಾನ ನೀಡಿದ್ದರು. ಅಂತೆಯೇ, ಡಿ.ಕೆ‌.ಶಿವಕುಮಾರ್ ಕೂಡ ಒಕ್ಕಲಿಗರಿಗೆ ಸ್ಥಾನಮಾನ ದೊರೆಯುವಂತೆ ನೋಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಜಾತಿಪ್ರೇಮ ಈಡಿಗ ಸಮುದಾಯದ ನಾಯಕರಿಗೂ ಅರಿವಾಗಬೇಕು” ಎಂದು ಹೇಳಿದ್ದಾರೆ.

“ಅಹಿಂದ ವರ್ಗದಲ್ಲಿ ಈಡಿಗ ಸಮುದಾಯವೂ ಸೇರಿದಂತೆ ಹಲವು ಸಮುದಾಯಗಳಿವೆ. ಅವರಿಗೂ ನಿರೀಕ್ಷಿತ ಪ್ರಾತಿನಿಧ್ಯ ಸಿಗಬೇಕಿದೆ. ಈಡಿಗ, ನಾಮಧಾರಿ, ಬಿಲ್ಲವ ಸಮುದಾಯದವರಲ್ಲಿ ರಾಜಕೀಯ, ಸಾಮಾಜಿಕ ಜಾಗೃತಿ ಮೂಡಿಸಬೇಕು. ಅದಕ್ಕಾಗಿ, ಜೂನ್ 3 ಮತ್ತು 4 ರಂದು ಕುಮಟಾದಲ್ಲಿ ವಿಶೇಷ ಚಿಂತನ ಶಿಬಿರ ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...