ಮಂಗಳೂರು-ಬೆಂಗಳೂರು ನಡುವೆ ಆರು ತಿಂಗಳು ರೈಲು ಸಂಚಾರ ರದ್ದು

Date:

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಪ್ರಕರಣೆ ಹೊರಡಿಸಿರುವ ರೈಲ್ವೇ ಇಲಾಖೆ, “ಜೂನ್‌ 1ರಿಂದ ನವೆಂಬರ್ 1ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ರೈಲ್ವೇ ವಿದ್ಯುದ್ಧೀಕರಣ, ಸುರಕ್ಷತೆ ಸೇರಿದಂತೆ ಕೆಲವು ಪ್ರಮುಖ ಕಾಮಗಾರಿಗಳು ನಡೆಯಲಿವೆ. ಈ ಅವಧಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಬಹುತೇಕ ಎಲ್ಲ ರೈಲುಗಳ ಸಂಚಾರ ರದ್ದಾಗಲಿದೆ” ಎಂದು ಹೇಳಿದೆ.

ಸಂಚಾರ ಸ್ಥಗಿತಗೊಂಡ ರೈಲುಗಳ ವಿವರ;

  • ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ರಾಹಿಕ ಎಕ್ಸ್‌ಪ್ರೆಸ್ (16540): ಪ್ರತಿ ಶನಿವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುವ ಈ ರೈಲು ಸಂಚಾರವು ಮೇ 31ರಿಂದ ನವೆಂಬರ್ 1ರವರೆಗೆ ರದ್ದಾಗಲಿದೆ.
  • ಮಂಗಳೂರು ಜಂಕ್ಷನ್ – ಯಶವಂತಪುರ ಸಾಪ್ರಾಹಿಕ ಎಕ್ಸ್‌ಪ್ರೆಸ್ (16539): ಪ್ರತಿ ಭಾನುವಾರ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರಯಾಣಿಸುತ್ತಿದ್ದ ಈ ರೈಲು ಜೂನ್ 1ರಿಂದ ನವೆಂಬರ್ 2ರವರೆಗೆ ರದ್ದಾಗಲಿದೆ.
  • ಯಶವಂತಪುರ – ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16575): ಪ್ರತಿ ಮಂಗಳವಾರ, ಗುರುವಾರ ಮತ್ತು ಭಾನುವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ರದ್ದಾಗಲಿದೆ.
  • ಮಂಗಳೂರು – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಂಗಳೂರಿನಿಂದ ಯಶವಂತಪುರಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 2ರಿಂದ ಅಕ್ಟೋಬರ್ 31ರವರೆಗೆದಂದು ಸ್ಥಗಿತಗೊಳ್ಳಲಿದೆ.
  • ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16515): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಕ್ಕೆ ತೆಳುತ್ತಿದ್ದ ರೈಲು ಸಂಚಾರವು ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ರದ್ದಾಗಲಿದೆ.
  • ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16516): ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಕಾರವಾರದಿಂದ ಯಶವಂತಪುಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 3ರಿಂದ ನವೆಂಬರ್ 1ರವರೆಗೆ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...