ತೀರ್ಥಹಳ್ಳಿ | ಅಕ್ರಮ ರೆಸಾರ್ಟ್‌ ಬಗ್ಗೆ ವರದಿ ಕೊಟ್ಟ ಬೆನ್ನಲ್ಲೇ ವರ್ಗಾವಣೆ; ನ್ಯಾಯಾಲಯದ ಮೆಟ್ಟಿಲೇರಿದ ವಲಯ ಅರಣ್ಯಾಧಿಕಾರಿ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್‌ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್‌ಎಫ್‌ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಗೆ ತಡೆ ನೀಡುವಂತೆ ಅಧಿಕಾರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತಾಲೂಕಿನ ಭಾರತೀಪುರದ ತುಂಗಾ ನದಿಯ ದಡದಲ್ಲಿರುವ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆಗಳ ಒಳಗೊಂಡಿರುವ ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು. ಅಲ್ಲದೇ, ಈ ಬಗ್ಗೆ ಈ ದಿನ.ಕಾಮ್ ಕೂಡ ವರದಿ ಪ್ರಕಟಿಸಿತ್ತು.

ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ. ಲೋಕೇಶ್‌ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರೆಸಾರ್ಟ್‌ 1

ಈ ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಎಸ್. ಎಲ್. ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಕೂಡ ಪೂರ್ಣ ಆಗಿಲ್ಲ. ಆ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿರುವ ತೀರ್ಥಹಳ್ಳಿ ವಲಯ ಅರಣ್ಯ ಅಧಿಕಾರಿ ಡಾ.ಲೋಕೇಶ್, “ನಾನು ಪ್ರಾಮಾಣಿಕವಾಗಿ ಬಹಳಷ್ಟು ಕಡೆ ಹೊಸ ಒತ್ತುವರಿ ತಡೆಯುವ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ತೀರ್ಥಹಳ್ಳಿ ತಾಲೂಕಿನ ವಲಯ ಅರಣ್ಯ ಅಧಿಕಾರಿಯಾಗಿ ಬಂದು ಕೇವಲ 1 ವರ್ಷ 9 ತಿಂಗಳು ಆಗಿದ್ದು, 2 ವರ್ಷ ಕೂಡ ಪೂರ್ಣ ಆಗಿಲ್ಲ. ಅವಧಿಗೂ ಮೊದಲೇ ನನ್ನನ್ನು ವರ್ಗಾವಣೆ ಮಾಡಲಾಗಿದೆ. ಹಾಗಾಗಿ, ಇದನ್ನು ಪ್ರಶ್ನಿಸಿ ಎರಡು ದಿನದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೇನೆ” ಎಂದು ತಿಳಿಸಿದರು.

ಅಕ್ರಮ ರೆಸಾರ್ಟ್‌

ವಿಹಂಗಮ ರೆಸಾರ್ಟ್‌ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಆರೋಪ; ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ

ವರದಿ ಕೊಟ್ಟ ಎರಡೇ ದಿನದಲ್ಲಿ ವರ್ಗಾವಣೆ ಮಾಡಿರುವುದು ಸಾರ್ವಜನಿಕರಲ್ಲೂ ಕೂಡ ಅನುಮಾನ ಮೂಡಿಸಿದೆ. ಅಕ್ರಮದ ಬಗ್ಗೆ ಪ್ರಾಮಾಣಿಕವಾಗಿ ವರದಿ ಕೊಟ್ಟ ಬೆನ್ನಲ್ಲೇ ಈ ಅಧಿಕಾರಿಯ ವರ್ಗಾವಣೆ ಹಿಂದೆ ಇರುವ ಕಾಣದ ಶಕ್ತಿ ಯಾರು ಎಂಬ ಪ್ರಶ್ನೆ ಕೂಡ ಮೂಡಿದೆ. ಈ ವರ್ಗಾವಣೆಗೆ ನ್ಯಾಯಾಲಯವು ತಡೆ ನೀಡುತ್ತಾ, ಕಾದು ನೋಡಬೇಕಿದೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...