ಆಗುಂಬೆ ಭಾಗದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮ್ನಿ ವಾಹನದ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮ್ನಿ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ.
ಇದನ್ನು ಓದಿದ್ದೀರಾ? ಧಾರವಾಡ | ನೀಟ್-ನೆಟ್ ಪರೀಕ್ಷೆ ಅಕ್ರಮ; ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಓಮ್ನಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅರಣ್ಯ ಇಲಾಖೆ, ಸ್ಥಳೀಯರು ಸೇರಿ ಮರ ತೆರವುಗೊಳಿಸುತ್ತಿದ್ದಾರೆ.





