ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ತನಿಖೆಯಿಂದ ಸತ್ಯ ಹೊರಗೆ ಬರಲಿದೆ: ಜಿ ಪರಮೇಶ್ವರ್

Date:

  • ತನಿಖೆ ವಿಷಯವನ್ನು ಬಹಿರಂಗಪಡಿಸಲು ಆಗುವುದಿಲ್ಲ
  • ಕೆ ಎನ್‌ ರಾಜಣ್ಣ ಹೇಳಿರುವುದರಲ್ಲಿ ತಪ್ಪೇನಿಲ್ಲ

ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಏನೆಲ್ಲಾ ಹೈಡ್ರಾಮಾ ನಡೆಯುತ್ತಿದೆ ಎಂದು ಮಾಧ್ಯಮದಲ್ಲೇ ಎಲ್ಲ ಪ್ರಕಟವಾಗುತ್ತಿದೆ. ತನಿಖೆ ನಡೆಯುತ್ತಿದೆ. ಈಗಲೇ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಆಗುವುದಿಲ್ಲ. ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ತನಿಖೆ ವಿಷಯವನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಯಾವ ವ್ಯಕ್ತಿಗಳ ಕೈವಾಡ ಇದೆ ಅವರೆಲ್ಲರ ಬಂಧನ ಆಗಲಿದೆ. ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ” ಎಂದರು.

ಟಿಕೆಟ್‌ ಕೊಡಿಸುವ ವಿಚಾರದ ವಂಚನೆ ಇದು. ಕಾಂಗ್ರೆಸ್‌ ಹೇಗೆ ನೋಡುತ್ತದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ವಂಚನೆ ಪ್ರಕರಣ ಏನಿದೆಯೋ ಆ ಬಗ್ಗೆ ತನಿಖೆ ನಡೆಯಲಿದೆ. ಇದರ ಹಿಂದೆ ಬಿಜೆಪಿಯವರು ಇದ್ದರೆ ಸತ್ಯ ಬಯಲಾಗಲಿದೆ” ಎಂದಷ್ಟೇ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಮೂವರು ಡಿಸಿಎಂ ಅಗತ್ಯವಿದೆ

“ಮೂವರು ಉಪ ಮುಖ್ಯಮಂತ್ರಿ ನೇಮಕ ಆಗಬೇಕು ಎಂದು ಕೆೆ ಎನ್ ರಾಜಣ್ಣ ನನ್ನ ಬಳಿಯೂ ಹೇಳಿದ್ದಾರೆ. ಆ ಕುರಿತು ಅವರು ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಪತ್ರ ಬರೆಯುವ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಗಮನಕ್ಕೆ ತರಬೇಕು” ಎಂದು ಪರಮೇಶ್ವರ್‌ ಇದೇ ವೇಳೆ ತಿಳಿಸಿದರು.

“ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂವರು ಡಿಸಿಎಂ ಸ್ಥಾನಗಳು ಸೃಷ್ಟಿಯಾದರೆ ಬಹಳ ಅನುಕೂಲವಾಗುತ್ತದೆ. ಹೈಕಮಾಂಡ್‌ ಏನು ನಿರ್ಧಾರ ತೆಗೆದುಕೊಳ್ಳುತ್ತದೋ ಕಾದು ನೋಡಬೇಕು” ಎಂದರು.

ಕೆ ಎನ್‌ ರಾಜಣ್ಣ ನಿಮ್ಮ ಪರವಾಗಿಯೇ ಮಾತನಾಡಿದಂಗಿದೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ನಾವಿಬ್ಬರು ಗೆಳೆಯರು. ಅದರಲ್ಲಿ ತಪ್ಪೇನಿದೆ? ಈಗ ರಾಜಣ್ಣ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ. ಯಾವ ಸ್ವರೂಪ ಪಡೆಯಲಿದೆ. ಹೈಕಮಾಂಡ್‌ ಹೇಗೆ ಸ್ಪಂದಿಸಲಿದೆ ಎಂಬುದು ನೋಡಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...