ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

Date:

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಮ್ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 6 ಮಂದಿ ಸದಸ್ಯರ ಅಧ್ಯಯನ ಸಮಿತಿಯನ್ನು ಸರಕಾರ ನೇಮಿಸಿತ್ತು.

ಸದ್ರಿ ಸಮಿತಿಯು ಜನವರಿ 19 ಹಾಗೂ 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ, ವಿವಿಧ ಇಲಾಖೆ, ಕಛೆರಿಗಳಿಗೆ ಭೇಟಿ ನೀಡಿ ಆಂದ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಘಿಸುವ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳು ಹಾಗೂ ವಿಧಿವಿಧಾನಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿಧ್ದಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿಯು ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಕಾರ್ಯದರ್ಶಿ ಜೆ.ಮಂಜುನಾಥ್ ಅವರಿಗೆ ಅಧ್ಯಯನ ಸಮಿತಿ ಸದಸ್ಯರು ಸಲ್ಲಿಸಿದರು. ತುಳುಭಾಷೆಯ ಹಿನ್ನೆಲೆ ಹಾಗೂ ಚರಿತ್ರೆಯ ಬಗೆಗಿನ ಪ್ರಸ್ತಾವನೆಯನ್ನು ಕೂಡ ವರದಿ ಜೊತೆಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ನಿರ್ದೇಶಕ ಡಾ. ಬಿ.ಎಸ್. ಮಂಜುನಾಥ ಸ್ವಾಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್, ಅಧ್ಯಯನ ಸಮಿತಿ ಸದಸ್ಯರಾದ ಯಕ್ಷಗಾನ ಅಕಾಡೆಮಿಯ ಸದಸ್ಯ ಸುಧಾಕರ ಶೆಟ್ಟಿ , ಕಾನೂನು ಇಲಾಖೆಯ ಉಪಕಾರ್ಯದರ್ಶಿ ಶ್ರೀಮತಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್ , ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಶ್ರೀಮತಿ ಕೆ.ಎಮ್. ಶುಭಶ್ರೀ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...