ಕಾಲೇಜು ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಅಭಿರುಚಿ ಮೂಡಿಸುವ ಕೆಲಸ ಶ್ಲಾಘನೀಯ – ಡಾ.ವಿಶ್ವನಾಥ ಬದಿಕಾನ

Date:

ಭಾಷೆ ಮತ್ತು ಸಂಸ್ಕ್ರತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಒಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತುಳು ವಿದ್ವಾಂಸ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ‘ ಅಭಿಯಾನದ ಐದನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ತಲೆಮಾರಿಗೆ ತುಳು ಭಾಷೆಯನ್ನು ಕೊಂಡೊಯ್ಯುವ ಮಹತ್ತರ ಜವಬ್ದಾರಿ ವಿದ್ಯಾರ್ಥಿಗಳಲ್ಲಿದೆ. ಹೊಸ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣವನ್ನು ತುಳುವಿನ ಪ್ರಸರಣಕ್ಕೆ ವೇದಿಕೆಯಾಗಿ ರೂಪಿಸುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಶೀಲರಾಗಬೇಕೆಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ತುಳು ಅಕಾಡೆಮಿಯ ಮಾಜಿ ಸದಸ್ಯೆ ವಿಜಯ ಲಕ್ಷ್ಮೀ ರೈ ಅವರು ಮಾತನಾಡಿ, ತುಳು ಭಾಷೆ, ಸಾಹಿತ್ಯದ, ಸಂಸ್ಕ್ರತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ಕಾರ್ಯಕ್ರಮ ಒಂದು ವಿಶಿಷ್ಟ ಪರಿಕಲ್ಪನೆಯ ಯಶಸ್ವಿ ಕಾರ್ಯಕ್ರಮ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು ಭಾಷೆಯಲ್ಲಿ ಅಗಾದವಾದ ಸಾಹಿತ್ಯ ಕೃತಿಗಳು ಪ್ರಕಟಗೊಂಡಿವೆ. ಈ ಸಾಹಿತ್ಯದ ಪರಿಚಯ ವಿದ್ಯಾರ್ಥಿಗಳಿಗೆ ಆಗಬೇಕು ಅನ್ನುವ ಆಶಯದೊಂದಿಗೆ ‘ಬಲೆ ತುಳು ಓದುಗ “ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ಉಪನ್ಯಾಸಕರಾದ ಪ್ರಶಾಂತಿ ಶೆಟ್ಟಿ ಇರುವೈಲು, ಹಿರಿಯ ಛಾಯಾಚಿತ್ರಗ್ರಾಹಕ ವಿಶ್ವನಾಥ್ ಸುವರ್ಣ, ಅಕಾಡೆಮಿ ಸದಸ್ಯ ಬಾಬು ಪಾಂಗಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸದಸ್ಯ ಸಂಚಾಲಕ ಸಂತೋಷ್ ಶೆಟ್ಟಿ ಹಿರಿಯಡ್ಕ ಸ್ವಾಗತಿಸಿದರು. ಅಕಾಡೆಮಿಯ ಸದಸ್ಯೆ ಅಕ್ಷಯ ಆರ್.ಶೆಟ್ಟಿ ನಿರೂಪಿಸಿದರು. ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂತ ಅಲೋಶಿಯಸ್ ಕಾಲೇಜಿನ 25 ವಿದ್ಯಾರ್ಥಿಗಳು ಅಕಾಡೆಮಿಯ ಗ್ರಂಥಾಲಯದ ಪುಸ್ತಕಗಳನ್ನು ಓದಿ ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...