ತುಮಕೂರು | ಸಮೀಕ್ಷೆ ವೇಳೆ ಮುಸ್ಲಿಂ ಶಿಕ್ಷಕಿ ವಿರುದ್ಧ ಗಲಾಟೆ : ಕಾನೂನು ಕ್ರಮಕ್ಕೆ ಮುಸ್ಲಿಂ ನೌಕರರ ಸಂಘ ಒತ್ತಾಯ

Date:

  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ರ ಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಗಲಾಟೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತುಮಕೂರು ಜಿಲ್ಲಾಧಿಕಾರಿಗೆ ಮನವಿ ಪತ್ರನೀಡಿದೆ. 

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಯಿದ್ ಅಫ್ರಿದಿ ಅವರ ನಿಯೋಗ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರನ್ನು ಭೇಟಿಯಾಗಿ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿದೆ.

ಅ.2 ರಂದು ತುಮಕೂರು ಹೊರವಲಯದ ವಾರ್ಡ್ ನಂಬರ್ 6 ರ ಭೀಮಸಂದ್ರಪಾಳ್ಯದಲ್ಲಿ  ಸಮೀಕ್ಷೆ ಮಾಡುತ್ತಿರುವ ಸಮಯದಲ್ಲಿ ಮಾಹಿತಿ ಕೇಳಿದ ಶಿಕ್ಷಕರಿಗೆ “ಧರ್ಮ ನಿಂದನೆ” ಮಾಡಿದಲ್ಲದೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ, ಗಲಾಟೆ ಮಾಡಿ ಸಮೀಕ್ಷೆಗೆ ಅಡ್ಡಿಮಾಡಲಾಗಿದೆ. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಯಿಂದ ಸಮೀಕ್ಷೆ ಮೇಲು ಪರಿಣಾಮ ಬೀರಲಿದೆ ಹಾಗಾಗಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕಾನೂನು ಕ್ರಮ ಕೈಗೊಂಡು, ಗಣತಿಯಲ್ಲಿ ತೊಡಗಿರುವ ಶಿಕ್ಷಕರಿಗೆ ಹಾಗೂ ವಿಶೇಷವಾಗಿ ‘ಮಹಿಳಾ ಶಿಕ್ಷಕಿಯರಿಗೆ ಸೂಕ್ತ ರಕ್ಷಣೆಯನ್ನು” ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ  ಸಂಘ ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...