ತುಮಕೂರು | ಸಾಹೇ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ : 15 ಮಂದಿಗೆ ಚಿನ್ನದ ಪದಕ

Date:

ತುಮಕೂರು ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ (ನವೆಂಬರ್ 22ರಂದು) ಬೆಳಿಗ್ಗೆ 10-30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ  ತಿಳಿಸಿದರು. 

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 14ನೇ ಸಾಹೇ ಘಟಿಕೋತ್ಸವದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಸ್ಥಾಪಕರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ಹಾಗೂ ವಿಜ್ಞಾನಿ, ಭಾರತೀಯ ವಿಜ್ಞಾನ ಸಂಸ್ಥೆಯ ಏರೋಸ್ಪೇಸ್ ಇಂಜಿನಿಯರಿಂಗ್‌ನ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಕೆ.ಪಿ.ಜೆ.ರೆಡ್ಡಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ಮಾಜಿ ಕೇಂದ್ರ ಸಚಿವರು ಹಾಗೂ ಸಂಸದರಾದ ಜಯರಾಮ್ ರಮೇಶ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಬೋಧಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಹಾಗೂ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಟ್ರಸ್ಟಿಗಳಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಮತ್ತು ಡಾ.ಜಿ.ಎಸ್.ಆನಂದ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

1002383758

ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ. ಅಶೋಕ್ ಮೆಹತಾ, ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಗುರುಶಂಕರ್ ಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್, ಟಿ.ಬೇಗೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಪ್ರಾಂಶುಪಾಲರಾದ ಡಾ ದಿವಾಕರ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಲಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದ ಹೊರಾಂಗಣದಲ್ಲಿ ನಡೆಯಲಿರುವ 14ನೇ ಘಟಿಕೋತ್ಸವಕ್ಕೆ ಸಿದ್ಧವಾಗಿರುವ ಬೃಹತ್ ವೇದಿಕೆಯಲ್ಲಿ 5 ಸಾವಿರಕ್ಕೂ ಹೆಚ್ಚು ಆಸನ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಆಸ್ಪತ್ರೆಯಲ್ಲಿ ದಾಖಲಾದ ಬಡ ರೋಗಿಗಳಿಗೆ ಎಲ್ಲಾ ರೀತಿಯ ಉಚಿತ ಪರೀಕ್ಷೆಗಳು, ಸ್ಕಾö್ಯನಿಂಗ್‌ಗಳು ಹಾಗೂ ಉಚಿತ ಜನರಲ್ ಬೆಡ್‌ಗಳು ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್ ತಿಳಿಸಿದರು. 

ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಅಶೋಕ್ ಮೆಹತಾ, ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಮತ್ತು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.  

ರ‍್ಯಾಂಕ್ ವಿವರಗಳು: ಇಂಜಿನಿಯರಿಂಗ್,ವೈದ್ಯಕೀಯ, ದಂತ ವೈದ್ಯಕೀಯ, ಪಿಎಚ್.ಡಿ ಸೇರಿದಂತೆ ಒಟ್ಟು 1086 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಮಾಡಲಾಗುವುದು.

ಚಿನ್ನದ ಪದಕ ಪಡೆದ ವಿಭಾಗಗಳ ವಿವರ- ಇಂಜಿನಿಯರಿಂಗ್- 08, ವೈದ್ಯಕೀಯ-03, ದಂತ ವೈದ್ಯಕೀಯ-02, ಎಂಸಿಎ ಮತ್ತು ಎಂಟೆಕ್-02 ಒಟ್ಟು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು: 1086 ಡಾಕ್ಟರೇಟ್ ಪದವಿ-14,  ಇಂಜಿನಿಯರಿಂಗ್/ಸ್ನಾತಕೋತ್ತರ-664, ವೈದ್ಯಕೀಯ/ಸ್ನಾತಕೋತ್ತರ-372, ದಂತ ವೈದ್ಯಕೀಯ/ಸ್ನಾತಕೋತ್ತರ -34,ಸೇರಿದಂತೆ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ವಿತರಿಸಲಾಗುತ್ತದೆ. ಅತ್ಯುತ್ತಮ ಶ್ರೇಣಿಯ ವಿದ್ಯಾರ್ಥಿಗಳು. ಇಂಜಿನಿಯರಿಂಗ್-01, ವೈದ್ಯಕೀಯ-01, ದಂತ ವೈದ್ಯಕೀಯ-01

ಚಿನ್ನದ ಪದಕ ವಿಜೇತರ ಪಟ್ಟಿ :  ವೈದ್ಯಕೀಯ-02, ತನುಷ್ಕ ಕೀರ್ತಿ- (ಎಂ,ಬಿ,ಬಿ,ಎಸ್ ) ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಟಿ. ಬೇಗೂರು, ಡಾ.ಕಾಂಚನ ಯು.ಸಿಂಗ್ – (ಎಂ,ಡಿ/ಎಂ,ಎಸ್), ದಂತ ವೈದ್ಯಕೀಯ -02, ಡಾ. ಇಂಪನ ಬಿ ವರ್ಧನ್ (ಬಿಡಿಎಸ್), ಡಾ. ಸೈಯದ್ ಸಪ್ರೋಂಜ್ ಅಹಮಧ್ (ಎಂಡಿಎಸ್), ಸಂಯೋಜಿತ

 ಆರೋಗ್ಯ ಸೇವಾ ವಿಭಾಗ ಉಮ್ಮೆ ಸೌಧ. ಇಂಜಿನಿಯರಿಂಗ್ : ಸಿಂಧೂ ರಾಣಿ ಎಚ್. ಆರ್ – ಕಂಪ್ಯೂಟರ್ ಸೈನ್ಸ್,  ಪ್ರವೀಣ್ ಡಿ.ಎಂ – ಸಿವಿಲ್ ಇಂಜಿನಿಯರಿಂಗ್,  ನಮ್ರತಾ ಎಸ್ – ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್,  ಸುಮನ್ ಬಿ.ಎಸ್ – ಎಲೆಕ್ಟಾçನಿಕ್ ಅಂಡ್ ಕಮ್ಯುನಿಕೇಷನ್ , ಗಾನ್ವಿ ಎಂ.ಎಸ್ – ಎಲೆಕ್ಟಿçಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಕೀರ್ತನ ಎಚ್.ಎನ್ – ಇನ್ಫರ್ಮೇಷನ್ ಸೈನ್ಸ್,  ವಿನೋದ ಜಿ – ಮೆಕಾನಿಕಲ್ ಇಂಜಿನಿಯರಿಂಗ್,  ಸುಷ್ಮಾ ಮಂಜುನಾಥ್ – ಮೆಡಿಕಲ್ ಎಲೆಕ್ಟ್ರಾನಿಕ್ಸ್.

ಸ್ನಾತಕೋತ್ತರ ವಿಭಾಗ : ವಿಂಧ್ಯಾ ಎ.ಎಸ್ (ಎಂಟೆಕ್), ಭಾವನ (ಎಂಸಿಎ) ಅತ್ಯುತ್ತಮ ಶ್ರೇಣಿ – ವೈದ್ಯಕೀಯ, ಡಾ. ನರಸಿಂಹ ಎಲ್. ರಕ್ಷಿತ್ ತುಮಕೂರು,ಡಾ. ಸುವರ್ಣ ಶರ್ಮ (ಟಿ.ಬೇಗೂರು ಕಾಲೇಜು)  ದಂತ ವೈದ್ಯ ಡಾ. ಇಂಪನ ಬಿ ವರ್ಧನ್ (ಬಿಡಿಎಸ್) ಇಂಜಿನಿಯರಿಂಗ್,  ಆಯಷಾ ಸಿದ್ದಿಕ್ ಸಂಯೋಜಿತ ಆರೋಗ್ಯ ಸೇವಾ ವಿಭಾಗ 01 ರವಿಕಿರಣ್ ಬಿಎಸ್ , ಡಾ. ಎಂ.ಕೆ. ವೀರಯ್ಯ ಪ್ರಶಸ್ತಿ  ಅನುದೀಪ್ ಆರ್ – ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...