ತುಮಕೂರು | ವಿಶ್ವ ದಾಖಲೆಯಾಗಲಿರುವ 2500 ಕಿ.ಮೀ. ಉದ್ದದ ಐತಿಹಾಸಿಕ ಮಾನವ ಸರಪಳಿ : ಡಾ.ಜಿ. ಪರಮೇಶ್ವರ

Date:

ಅಂತಾರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಜಾ ಪ್ರಭುತ್ವ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಸೆಪ್ಟೆಂಬರ್ 15ರಂದು ಬೀದರ್ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ನಿರ್ಮಾಣ ಮಾಡಲು ಉದ್ದೇಶಿಸಿರುವ 2500 ಕಿ.ಮೀ. ಉದ್ದದ ಮಾನವ ಸರಪಳಿಯು ವಿಶ್ವ ದಾಖಲೆಯನ್ನು ಸೃಷ್ಟಿಸಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಯಾವುದೇ ಇಂತಹ ಮಾನವ ಸರಪಳಿ ಮಾಡಿದ ಉದಾಹರಣೆಗಳಿಲ್ಲ. ಸುಮಾರು 25 ಲಕ್ಷ ಜನರಿಂದ ನಿರ್ಮಾಣವಾಗಲಿರುವ ಈ ಮಾನವ ಸರಪಳಿಯು ವಿಶ್ವದಾಖಲೆಯನ್ನು ಸೃಷ್ಟಿಸಲಿದೆ ಎಂದು ಭಾವಿಸಿದ್ದೇನೆ ಎಂದರಲ್ಲದೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂವಿಧಾನ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಯುವಜನತೆ, ಬಡವರು, ಮಹಿಳೆಯರಿಗೆ ಸಂವಿಧಾನದ ಮಹತ್ವವನ್ನು ತಿಳಿಸಲು ರಾಜ್ಯದ 6000ಕ್ಕು ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

WhatsApp Image 2024 09 09 at 11.21.13 PM

ತುಮಕೂರು ಜಿಲ್ಲೆಯಲ್ಲಿ 90 ಕಿ.ಮೀ. ಮಾನವ ಸರಪಳಿ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ನಿರ್ಮಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸರ್ಕಾರ ನಿರ್ಣಯಿಸಿರುವ ಸ್ಥಳದಲ್ಲಿ ಬೆಳಿಗ್ಗೆ 8 ರಿಂದ ಪ್ರಾರಂಭವಾಗಿ 10 ಗಂಟೆವರೆಗೆ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು. ಮಾನವ ಸರಪಳಿಯಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ, ಪ್ರೌಢ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ-ಸಂಸ್ಥೆ, ದಲಿತ ಮತ್ತು ಮಹಿಳಾಪರ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಲಿವೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಹಾದು ಹೋಗಲಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿಗಾಗಿ ಪ್ರತಿ 100 ಮೀಟರ್‌ಗೆ ಒಬ್ಬ ಸೆಕ್ಷನ್ ಅಧಿಕಾರಿಯಂತೆ ಒಟ್ಟು 900 ಅಧಿಕಾರಿಗಳನ್ನು ನೇಮಿಸಲಾಗಿದೆ. ಅಲ್ಲದೆ ಪ್ರತಿ ಕಿ.ಮೀ. ಗೆ ಒಬ್ಬ ನೋಡೆಲ್ ಅಧಿಕಾರಿಯಂತೆ 90 ತಾಲ್ಲೂಕು ಮಟ್ಟದ ಅಧಿಕಾರಿ, ಪ್ರತಿ 5 ಕಿ.ಮೀ.ಗೆ ಒಬ್ಬರಂತೆ 18 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಶಿರಾ ಮತ್ತು ತುಮಕೂರು ತಾಲ್ಲೂಕಿನ ತಹಸೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ, ಸ್ಥಳೀಯವಾಗಿ ಆಯಾ ತಾಲ್ಲೂಕು ವ್ಯಾಪ್ತಿಯ ಜವಾಬ್ದಾರಿಯನ್ನು ವಹಿಸಲಾಗಿದೆ ಹಾಗೂ ಪ್ರತಿ 30 ಕಿ.ಮೀ.ಗೆ ಒಬ್ಬರಂತೆ 3 ಮಂದಿ ಉಪ ವಿಭಾಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.

WhatsApp Image 2024 09 09 at 11.21.12 PM

ಈ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಸೇರಿದಂತೆ 330 ಗ್ರಾಮ ಪಂಚಾಯ್ತಿಯ ಎಲ್ಲಾ ಸಾರ್ವಜನಿಕ ಬಂಧುಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜನ ಪ್ರತಿನಿಧಿಗಳು, ಕಲಾವಿದರಿಗೆ ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ ಮುಕ್ತವಾಗಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜೊತೆಗೆ ಪತ್ರಿಕೋದ್ಯಮವನ್ನೂ ಸಹ ಪ್ರಜಾಪ್ರಭುತ್ವದ ಒಂದು ಭಾಗವೆಂದು ಕರೆಯಲಾಗಿದೆ. ನಾನು ಬೇರೆ ದೇಶಗಳ ಸಂವಿಧಾನವನ್ನು ಓದಿದ್ದೇನೆ. ಭಾರತದ ಸಂವಿಧಾನಕ್ಕೆ ಬೇರೆ ದೇಶಗಳ ಸಂವಿಧಾನವನ್ನು ಹೋಲಿಸಲು ಸಾಧ್ಯವೇ ಇಲ್ಲ. ನಮಗೆ ಸಂವಿಧಾನವು ಭಗವದ್ಗೀತೆ, ಕುರಾನ್, ಬೈಬಲ್, ಗುರುಗ್ರಂಥ ಎಲ್ಲವೂ ಆಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪವಿಭಾಗಾಧಿಕಾರಿಗಳಾದ ಗೌರವಕುಮಾರ್ ಶೆಟ್ಟಿ ಹಾಗೂ ಸಪ್ತಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...